ಹಾವಿನ ವಿಷ ಪ್ರಕರಣ | ಬಲಪಂಥೀಯ ಯೂಟ್ಯೂಬರ್ ಎಲ್ವಿಶ್ ಯಾದವ್ ಬಂಧನ

Date:

ವಿದೇಶಿಯರನ್ನು ಆಹ್ವಾನಿಸಿ, ವಿಷಕಾರಿ ಹಾವುಗಳ ವಿಷವನ್ನು ಬಳಸಿಕೊಂಡು ರೇವ್ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಆರೋಪದಲ್ಲಿ ಬಿಗ್‌ಬಾಸ್ ಸ್ಪರ್ಧಿ, ಯೂಟ್ಯೂಬರ್ ಎಲ್ವಿಶ್ ಯಾದವ್‌ ಅವರನ್ನು ನೋಯ್ಡಾ ಪೊಲೀಸರು  ಭಾನುವಾರ ಬಂಧಿಸಿದ್ದಾರೆ.

ಹಾವಿನ ಪ್ರಕರಣದಲ್ಲಿ ಎಲ್ವಿಶ್ ಯಾದವ್ ವಿರುದ್ಧ ನೋಯ್ಡಾ ಪೊಲೀಸರು ಸೆಕ್ಟರ್ 38ರಲ್ಲಿ ಎಫ್‌ಐಆರ್‌ ದಾಖಲಿಸಿದ್ದರು. ಭಾನುವಾರ ಎಲ್ವಿಶ್‌ ಅವರನ್ನು ವಿಚಾರಣೆಗೆ ಕರೆಯಲಾಗಿದ್ದು, ಅಲ್ಲಿಯೇ ಬಂಧಿಸಲಾಗಿದೆ. ಅದಾದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023ರ ನವೆಂಬರ್‌ ತಿಂಗಳಲ್ಲಿ ನೋಯ್ಡಾದಲ್ಲಿ ಆಯೋಜನೆಗೊಂಡಿದ್ದ ರೇವ್ ಪಾರ್ಟಿಗೆ ದಾಳಿ ನಡೆಸಿ ನೋಯ್ಡಾ ಪೊಲೀಸರು ಐವರನ್ನು ಬಂಧಿಸಿದ್ದರು. ಈ ವೇಳೆ ಐದು ನಾಗರ ಹಾವು ಸೇರಿ ಒಟ್ಟಾಗಿ ಒಂಬತ್ತು ಹಾವುಗಳನ್ನು ಮತ್ತು ಹಾವಿನ ವಿಷವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

ಇದನ್ನು ಓದಿದ್ದೀರಾ? ಶ್ರೀಲಂಕಾದಿಂದ 21 ಮೀನುಗಾರರ ಬಂಧನ: ಬಿಡುಗಡೆಗೆ ಒತ್ತಾಯಿಸಿ ತಮಿಳುನಾಡು ಪಕ್ಷಗಳಿಂದ ಕೇಂದ್ರಕ್ಕೆ ಒತ್ತಾಯ

ಈ ಬಂಧಿತರನ್ನು ಪೊಲೀಸರು ವಿಚಾರಣೆ ಮಾಡಿದಾಗ ಬಿಗ್ ಬಾಸ್ ಒಟಿಟಿ ಆವೃತ್ತಿಯ ವಿಜೇತ ಎಲ್ವಿಶ್ ಯಾದವ್ ಹೆಸರು ಮುನ್ನೆಲೆಗೆ ಬಂದಿತ್ತು. ಎಲ್ವಿಶ್ ಪಾರ್ಟಿಗಳಿಗೆ ನಾವು ಹಾವುಗಳನ್ನು ಸರಬರಾಜು ಮಾಡುತ್ತಿದ್ದೆವು ಎಂದು ಆರೋಪಿಗಳು ಬಹಿರಂಗಪಡಿಸಿದ್ದರು.

ಇದಾದ ಬಳಿಕ ನೋಯ್ಡಾದ ತೋಟಗಳಲ್ಲಿ ಹಾವುಗಳನ್ನು ಮತ್ತು ಹಾವಿನ ವಿಷದೊಂದಿಗೆ ಎಲ್ವಿಶ್ ಯಾದವ್ ಮತ್ತು ಕೆಲವು ದೃಶ್ಯ ನಿರ್ಮಾಣಕಾರರು ವೀಡಿಯೋ ಮಾಡುತ್ತಿದ್ದಾರೆ ಎಂದು ಪೀಪಲ್ ಫಾರ್ ಅನಿಮಲ್ (ಪಿಎಫ್‌ಎ) ಸಂಘಟನೆಯ ಗೌರವ್ ಗುಪ್ತ ದೂರು ನೀಡಿದ್ದರು.

ಇತ್ತೀಚೆಗಷ್ಟೇ ಎಲ್ವಿಶ್ ಯಾದವ್ ಮತ್ತು ಅವರ ಸಹಚರರು ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಪ್ರಾಣಿಗಳ ಮೇಲೆ ಕ್ರೌರ್ಯ ತಡೆ ಕಾಯ್ದೆಯಡಿಯಲ್ಲಿ ಹಾವಿನ ವಿಷ ಗ್ರಂಥಿಗಳನ್ನು ತೆಗೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ತಪ್ಪಿತಸ್ಥರಿಗೆ ಸುಮಾರು ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...