ಆಹಾರದ ಮೇಲೆ ಫಂಗಸ್, ಅವಧಿ ಮೀರಿದ ಉತ್ಪನ್ನಗಳು: ಝೆಪ್ಟೋ ಗೋದಾಮಿನ ಪರವಾನಗಿ ಅಮಾನತು

Date:

ಆಹಾರ ಪದಾರ್ಥಗಳ ಮೇಲೆ ಫಂಗಸ್, ಅವಧಿ ಮೀರಿದ ಉತ್ಪನ್ನಗಳು ಮತ್ತು ನೈರ್ಮಲ್ಯವಿಲ್ಲದ ಶೇಖರಣೆ ವ್ಯವಸ್ಥೆ ಕಂಡುಬಂದ ಕಾರಣ ಮಹಾರಾಷ್ಟ್ರದ ಧಾರವಿಯಲ್ಲಿರುವ ಆನ್‌ಲೈನ್ ಡೆಲಿವರಿ ಅಪ್ಲಿಕೇಷನ್ ಝೆಪ್ಟೋದ ಗೋದಾಮಿನ ಪರವಾನಗಿ ರದ್ದುಗೊಳಿಸಲಾಗಿದೆ. ಆಹಾರ ಮತ್ತು ಔಷಧ ಆಡಳಿತ(ಎಫ್‌ಡಿಎ) ಅಧಿಕಾರಿಗಳು ಗೋದಾಮಿಗೆ ಭೇಟಿ ನೀಡಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ ಉಲ್ಲಂಘನೆಯಡಿ ಕ್ರಮಕೈಗೊಂಡಿದೆ.

ಸದ್ಯ ಆಂತರಿಕ ಪರಿಶೀಲನೆಯನ್ನು ಪ್ರಾರಂಭಿಸಲಾಗಿದೆ. ಗ್ರಾಹಕರಿಗೆ ಸುರಕ್ಷಿತ ಉತ್ಪನ್ನಗಳನ್ನು ಒದಗಿಸಲು ನಾವು ಬದ್ಧವಾಗಿದ್ದೇವೆ. ಆಹಾರ ಸುರಕ್ಷತೆ ಮತ್ತು ನೈರ್ಮಲ್ಯದ ಅತ್ಯುನ್ನತ ಗುಣಮಟ್ಟವನ್ನು ಕಾಪಾಡಿಕೊಳ್ಳುವುದರಲ್ಲಿ ಯಾವುದೇ ಕೊರತೆ ಕಂಡರೂ ಅದನ್ನು ಕ್ಷಮಿಸಲಾಗದು” ಎಂದು ಝೆಪ್ಟೋ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿದ್ದೀರಾ? ಬಜೆಟ್ 2025 | ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿ, ಆರೋಗ್ಯ ವಿಮೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಈಗಾಗಲೇ ಆಂತರಿಕ ಪರಿಶೀಲನೆಯನ್ನು ಪ್ರಾರಂಭಿಸಿದ್ದು ಶೀಘ್ರ ತನಿಖೆ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಲೋಪಗಳನ್ನು ಸರಿಪಡಿಸಲು, ಗ್ರಾಹಕರಿಗೆ ಉತ್ತಮ ಮತ್ತು ಸುರಕ್ಷಿತ ಗುಣಮಟ್ಟದ ಉತ್ಪನ್ನಗಳನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ. ಕಾನೂನು ಅನುಸಾರವಾಗಿ ಕಾರ್ಯಾಚರಣೆಗಳನ್ನು ಪುನರಾರಂಭಿಸಲು ನಾವು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದೂ ಝೆಪ್ಟೋ ಹೇಳಿದೆ.

ಆಹಾರ ಮತ್ತು ಔಷಧ ಆಡಳಿತ ರಾಜ್ಯ ಸಚಿವ ಯೋಗೇಶ್ ಕದಮ್ ಅವರಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಮಹಾರಾಷ್ಟ್ರದ ಎಫ್‌ಡಿಎ ಝೆಪ್ಟೋ ಧಾರಾವಿ ಗೋದಾಮಿನಲ್ಲಿ ತಪಾಸಣೆ ನಡೆಸಿದೆ. ಈ ವೇಳೆ ಕೆಲವು ಆಹಾರ ಪದಾರ್ಥಗಳ ಮೇಲೆ ಫಂಗಸ್ ಕಂಡುಬಂದಿದೆ.

ನಿಂತ ನೀರಿನ ಹತ್ತಿರವೇ ಉತ್ಪನ್ನಗಳನ್ನು ಸಂಗ್ರಹಿಸಿರುವುದು, ಆಹಾರ ವಸ್ತುಗಳನ್ನು ಸರಿಯಾಗಿ ಶೇಖರಣೆ ಮಾಡದಿರುವುದು, ನೇರವಾಗಿ ನೆಲದ ಮೇಲೆ ವಸ್ತು ಇಟ್ಟಿರುವುದು, ಅಲ್ಲಲ್ಲಿ ಚೆಲ್ಲಾಪಿಲ್ಲಿಯಾಗಿ ಆಹಾರ ಪದಾರ್ಥಗಳು ಬಿದ್ದಿರುವುದು, ನೆಲ ಕೊಳಕಾಗಿರುವುದು, ಅವಧಿ ಮುಗಿದ ಸ್ಟಾಕ್ ಮತ್ತು ಅವಧಿ ಮುಗಿಯದ ಸ್ಟಾಕ್ ಜೊತೆಯಾಗಿರುವುದು ಕಂಡುಬಂದಿದೆ.

ಇನ್ನು ಕಳೆದ ಕೆಲವು ತಿಂಗಳುಗಳಿಂದ ಮಹಾರಾಷ್ಟ್ರದಲ್ಲಿ ಝೆಪ್ಟೋ ಹಲವು ವಿವಾದಗಳಿಗೆ ಗುರಿಯಾಗುತ್ತಿದೆ. ಮುಂಬೈ ಜಿಲ್ಲೆಯ ವಿವಿಧ ಗೋದಾಮುಗಳಲ್ಲಿ ಕೊಳಕು ಇರುವ, ಅಸ್ತವ್ಯಸ್ತವಾಗಿ ಆಹಾರ ಪದಾರ್ಥ ಶೇಖರಣೆ ಮಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...