ಮುಸ್ಲಿಮರ ಮೀಸಲಾತಿ ಒಕ್ಕಲಿಗರಿಗೆ ಹಂಚಿಕೆ | ನಾವು ಕಿತ್ತು ತಿನ್ನುವವರಲ್ಲ; ಒಕ್ಕಲಿಗ ಚಿಂತಕರ ವಿರೋಧ

Date:

‘ಒಕ್ಕಲಿಗರು ಮತ್ತು ಲಿಂಗಾಯತರು ಬೇರೆಯವರಿಗೆ ಅನ್ನ ನೀಡಿದವರೇ ಹೊರತು, ಯಾರಿಂದಲೂ ಕಿತ್ತುಕೊಂಡು ತಿಂದವರಲ್ಲ’ ಇದು ಒಕ್ಕಲಿಗ ಸಮುದಾಯದ ಪ್ರಜ್ಞಾನವಂತರ ಮನದಾಳ. ಸಾಮಾಜಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಮುಸ್ಲಿಂ ಸಮುದಾಯಕ್ಕೆ ಶೇ.4ರಷ್ಟು ಮೀಸಲಾತಿ ಇತ್ತು. ಪ್ರಸ್ತುತ ಈ ಮೀಸಲಾತಿಯನ್ನು ಕಿತ್ತು ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಕ್ಕೆ ಹಂಚಿರುವುದು ಆಕ್ಷೇಪಾರ್ಹ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಸಮುದಾಯದ ಪ್ರಜ್ಞಾವಂತರು.

ಕರ್ನಾಟಕದಲ್ಲಿ ಪ್ರವರ್ಗ 2ಬಿ ಅಡಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇ. 4ರಷ್ಟು ಮೀಸಲಾತಿಯನ್ನು ಕಸಿದು, ತಲಾ ಶೇ 2ರಷ್ಟು ಮೀಸಲಾತಿಯನ್ನು ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ಹಂಚುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಇತ್ತೀಚೆಗೆ ನಿರ್ಣಯ ಕೈಗೊಂಡಿದೆ. ಈ ನಿರ್ಧಾರದ ವಿರುದ್ಧ ಒಕ್ಕಲಿಗರು, ಲಿಂಗಾಯತರು ಹಾಗೂ ಇಡೀ ಮುಸ್ಲಿಂ ಸಮುದಾಯ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಈದಿನ.ಕಾಮ್‌ನೊಂದಿಗೆ ಚಿಂತಕರಾದ ಡಾ. ಪುರುಷೋತ್ತಮ ಬಿಳಿಮಲೆ, ಸಾಹಿತಿ ಎಲ್‌ ಎನ್‌ ಮುಕುಂದರಾಜ್‌, ಕರ್ನಾಟಕ ಸಂಘದ ಅಧ್ಯಕ್ಷರಾದ ಜಯಪ್ರಕಾಶ್‌ ಗೌಡ, ಪ್ರಾಧ್ಯಾಪಕರು ಮತ್ತು ಸಾಮಾಜಿಕ ವಿಶ್ಲೇಷಕರಾದ ಡಾ. ಬಿ ಸಿ ಬಸವರಾಜು, ಸಾಮಾಜಿಕ ಹೋರಾಟಗಾರ ದೀಪು ಗೌಡ ಹಾಗೂ ನಿವೃತ್ತ ಪ್ರಾಂಶುಪಾಲರಾದ ಜಿ ಟಿ ವೀರಪ್ಪ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಸ್ಲಿಂ ದ್ವೇಷದ ಮುಂದುವರೆದ ಭಾಗ

ಒಬಿಸಿ ಮೀಸಲಾತಿ ಪಟ್ಟಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ. 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ ಆ ಮೀಸಲಾತಿಯನ್ನು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಕ್ಕೆ ತಲಾ ಶೇ. 2ರಷ್ಟು ಹಂಚಿಕೆ ಮಾಡಲಾಗಿದೆ. ಆರೆಸ್ಸೆಸ್‌ ನಿಯಂತ್ರಿತವಾದ ಬಿಜೆಪಿಯ ಈ ನಿರ್ಣಯವು ಅವರು ಈಗಾಗಲೇ ಮುಂದುವರೆಸಿಕೊಂಡು ಬರುತ್ತಿರುವ ಮುಸ್ಲಿಂ ದ್ವೇಷದ ಮುಂದಿನ ಹೆಜ್ಜೆಯಾಗಿದೆ. 2ಬಿಯಲ್ಲಿದ್ದ ಮುಸ್ಲಿಂ ಸಮುದಾಯವನ್ನು ಶೇ.10ರಷ್ಟು ಮೀಸಲಾತಿ ಇರುವ EWS ಕೋಟಾಕ್ಕೆ ಸ್ಥಳಾಂತರಿಸುತ್ತಿರುವುದು ಎಂದರೆ ಮುಸ್ಲಿಮರಿಗೆ ಮೀಸಲಾತಿ ಇಲ್ಲದಂತೆ ಮಾಡುವುದು. ಮುಸ್ಲಿಮರು ಆರ್ಥಿಕವಾಗಿ ಮಾತ್ರವಲ್ಲ ಸಾಮಾಜಿಕವಾಗಿಯೂ ಹಿಂದುಳಿದಿದ್ದಾರೆ ಎಂಬ ಅಂಶವನ್ನು ಉದ್ದೇಶಪೂರ್ವಕವಾಗಿ ಮರೆಸುವುದು ಇದರ ಹಿಂದಿನ ಕುತಂತ್ರ. ಮಾರುಕಟ್ಟೆಯನ್ನೂ ಹೇಗೂ ಮುಸ್ಲಿಮರಿಂದ ʼರಕ್ಷಿಸಲಾಗಿದೆʼ. ಯುಪಿಎಸ್‌ಸಿ ಜಿಹಾದ್‌ ಆರಂಭವಾಗಿದೆ. ಪ್ರಾಚೀನ ಭಾರತದ ʼಸುವರ್ಣ ಯುಗʼದಲ್ಲಿ ಯಾರಿಗೂ ಮೀಸಲಾತಿ ಇರಲಿಲ್ಲವಲ್ಲ ಎಂಬ ವಾದವನ್ನು ಜನಪ್ರಿಯಗೊಳಿಸಲಾಗಿದೆ. ಭಾರತೀಯ ಸಮಾಜದಿಂದ ಮುಸ್ಲಿಮರನ್ನು ಅಳಿಸಿಹಾಕುವುದು ಈ ಎಲ್ಲ ಪ್ರಕ್ರಿಯೆಗಳ ಅಂತಿಮ ಉದ್ದೇಶ.

ಆದರೆ ಮುಂದಿನ ಇತಿಹಾಸ ಕೋಮುವಾದಿ ಶಕ್ತಿಗಳು ಯೋಜಿಸಿದ ಹಾಗಿರುವುದಿಲ್ಲ. ಈ ಪ್ರಕ್ರಿಯೆಗಳು ಅಂತಿಮವಾಗಿ ಸಮುದಾಯಗಳ ನಡುವಣ ಸಂಘರ್ಷಗಳಾಗಿ ಬೆಳೆದು ನಾಗರಿಕತೆಯ ಪತನಕ್ಕೆ ಕಾರಣವಾಗುತ್ತದೆ. ಇದಕ್ಕೆ ಬಿಜೆಪಿ ಮುನ್ನುಡಿ ಬರೆಯುತ್ತಿದೆ.

purushottama bilimale1672368497

ಪ್ರೊ. ಪುರುಷೋತ್ತಮ ಬಿಳಿಮಲೆ, ಲೇಖಕರು

ಸರ್ಕಾರದ ನಡೆ ಖಂಡನೀಯ

ನಮ್ಮಲ್ಲಿರುವ ಎಲ್ಲ ಜಾತಿ, ಜನಾಂಗಗಳ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಡಿ ಎಂಬುದು ನಮ್ಮ ಆಗ್ರಹವಾಗಿತ್ತು. ಆದರೆ, ಸರ್ಕಾರವು ಒಕ್ಕಲಿಗ ಸಮುದಾಯಕ್ಕೆ ಶೇ. 6ರಷ್ಟು ಮೀಸಲಾತಿ ಕೊಟ್ಟಿರುವುದು ಕಣ್ಣೊರೆಸುವ ತಂತ್ರ. ಒಕ್ಕಲಿಗರನ್ನು ಮೆಚ್ಚಿಸುವುದಕ್ಕೋಸ್ಕರ ಚುನಾವಣೆಯ ಗಿಮಿಕ್‌ ಇದಾಗಿದೆ. ವೈಯಕ್ತಿಕವಾಗಿ ನಾನಿದನ್ನು ಒಪ್ಪುವುದಿಲ್ಲ.

ಯಾವುದೋ ಒತ್ತಡದ ಕಾರಣದಿಂದಾಗಿ ನಮ್ಮ ಹೋರಾಟ ಸಮಿತಿಯವರು ಈ ಮೀಸಲಾತಿಯನ್ನು ಒಪ್ಪಿರಬಹುದು. ಕೇವಲ ಶೇ. ೨ರಷ್ಟು ಮೀಸಲಾತಿ ಪಡೆಯುವುದಕ್ಕಾಗಿ ಇಷ್ಟೆಲ್ಲ ಹೋರಾಟ ಮಾಡಬೇಕಾದ ಅಗತ್ಯ ನಮ್ಮ ಸಮುದಾಯದವರಿಗೆ ಇರಲಿಲ್ಲ. ಯಾವುದೇ ಸಮುದಾಯ ತೀರ ಸಣ್ಣದಿದ್ದಾಗಲೂ ಕೂಡ ಅವರಿಗೂ ಮೀಸಲಾತಿಯನ್ನು ಕೊಡಬೇಕು ಎಂದು ಕೇಳಿದ್ದೆವು.

ಮುಸ್ಲಿಮರ ಮೀಸಲಾತಿಯನ್ನು ಕಿತ್ತು ಒಕ್ಕಲಿಗರು ಮತ್ತು ಲಿಂಗಾಯತ ಸಮುದಾಯದವರಿಗೆ ಕೊಡುತ್ತಿರುವುದನ್ನು ನಾನು ವಿರೋಧಿಸುತ್ತೇನೆ. ಇನ್ನೊಂದು ಸಮುದಾಯದ ಅವಕಾಶವನ್ನು ಕಿತ್ತುಕೊಂಡು ಈ ಸಮುದಾಯಗಳಿಗೆ ಕೊಡುವುದು ತಪ್ಪು. ಒಕ್ಕಲಿಗರು ಬೇರೆಯವರಿಗೆ ಅನ್ನ ನೀಡಿದವರೇ ಹೊರತು, ಬೇರೆ ಯಾರಿಂದಲೂ ಕಿತ್ತುಕೊಂಡು ತಿಂದವರಲ್ಲ. ಆದರೆ, ಇಂದು ಮುಸ್ಲಿಮರ ತಟ್ಟೆಗೆ ಕೈಹಾಕಿ ತಿನ್ನಿ ಎಂದು ಸರ್ಕಾರ ಮಾಡುತ್ತಿರುವುದು ಖಂಡನೀಯ.

ezgif.com webp to jpg 1 1

ಎಲ್‌ ಎನ್‌ ಮುಕುಂದರಾಜ್‌, ಸಾಹಿತಿ

ಸಮುದಾಯಗಳನ್ನು ಎತ್ತಿಕಟ್ಟುವ ಕುತಂತ್ರ

ವೈಜ್ಞಾನಿಕ ಅಧ್ಯಯನದ ಆಧಾರದಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಎಲ್ಲ ಸಮುದಾಯಗಳಿಗೆ ಮೀಸಲಾತಿಯನ್ನು ಹಂಚಿಕೆ ಮಾಡಬೇಕಿತ್ತು. ಆದರೆ, ಇಂದು ಮೀಸಲಾತಿ ಎಂಬುದು ರಾಜಕೀಯ ಪ್ರೇರಿತವಾಗಿದ್ದು, ಎಲ್ಲ ಪಕ್ಷಗಳು ತಮಗೆ ಪೂರಕವಾಗಿ ಬಳಸಿಕೊಳ್ಳುತ್ತಿರುವುದು ವಿಷಾದನೀಯ.

ಮೀಸಲಾತಿ ಒಪ್ಪುವವನು ನಾನು.ಮೀಸಲಾತಿ ಇಲ್ಲದೇ ಹೋಗಿದ್ದರೆ ತಳಸಮುದಾಯದವರು ಇಂದು ಉತ್ತಮ ಸ್ಥಿತಿ ತಲುಪಲು ಸಾಧ್ಯವಾಗುತ್ತಿರಲಿಲ್ಲ.ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಧ್ಯಯನ ನಡೆಸಿ ಮೀಸಲಾತಿ ಕಲ್ಪಿಸುವಂತದ್ದು ಸರಿಯಾದ ಲಕ್ಷಣ. ಆ ರೀತಿ ಸಮೀಕ್ಷೆ ನಡೆಸದೇ ಮೀಸಲಾತಿ ಬಗ್ಗೆ ತೀರ್ಮಾನಕ್ಕೆ ಬರುವುದು ಯಾವ ರೀತಿ ಸರಿ? ಜಾತಿವಾರು ಮೀಸಲಾತಿ ಸರಿಯಾಗಿ ಹಂಚಿಕೆಯಾಗಿದ್ದರೆ ಒಳಮೀಸಲಾತಿಯ ಪ್ರಶ್ನೆಯೇ ಬರುತ್ತಿರಲಿಲ್ಲ. ಲಿಂಗಾಯತರು, ಒಕ್ಕಲಿಗರು ಹಾಗೂ ದಲಿತರೇ ಆಗಿರಲಿ ಈ ಸಮುದಾಯದೊಳಗೆ ಹಲವು ಉಪಜಾತಿಗಳಿವೆ. ಈ ಎಲ್ಲ ಜಾತಿಗಳಿಗೂ ಶೇಕಡಾವಾರು ಮೀಸಲಾತಿ ನೀಡಿದರೆ, ಈ ಜಾತಿಗಳೊಳಗಿರುವ ಉಪಜಾತಿಗಳಿಗೆ ಮೀಸಲಾತಿ ಲಾಭ ದಕ್ಕುವುದೆಂದು?

ಮುಸ್ಲಿಂ ಸಮುದಾಯಕ್ಕಿದ್ದ ಮೀಸಲಾತಿಯನ್ನು ಕಸಿದು ಒಕ್ಕಲಿಗ ಮತ್ತು ಲಿಂಗಾಯತರಿಗೆ ಕೊಡಲಾಗಿದೆ. ಹೀಗೆ ಸೌಲಭ್ಯವನ್ನು ಒಂದು ಸಮುದಾಯಕ್ಕೆ ಕೊಟ್ಟಮೇಲೆ ಅದನ್ನು ಕಸಿದು ಇನ್ನೊಬ್ಬರಿಗೆ ಕೊಡೋದಲ್ಲ. ಒಟ್ಟಾರೆಯಾಗಿ, ಇಡೀ ವ್ಯವಸ್ಥೆ ಹೇಗೆ ಸಾಗುತ್ತಿದೆ ಎಂದರೆ ಓಲೈಕೆಯ ರಾಜಕಾರಣದ ಮೂಲಕ ಮೀಸಲಾತಿಯನ್ನು ಕಲ್ಪಿಸುತ್ತಿರುವುದು ಬೇಸರದ ಸಂಗತಿ. ಮುಸ್ಲಿಂ ಸಮುದಾಯದ ಮೀಸಲಾತಿಯನ್ನು ಕಸಿದು ಬೇರೆ ಸಮುದಾಯಗಳಿಗೆ ಕೊಡುವುದು ಸಮುದಾಯಗಳ ನಡುವೆ ಎತ್ತಿಕಟ್ಟುವ ಕುತಂತ್ರ.

jayaprakash gowda

ಜಯಪ್ರಕಾಶ್‌ ಗೌಡ, ಅಧ್ಯಕ್ಷರು, ಕರ್ನಾಟಕ ಸಂಘ

ಇದ್ದಕ್ಕಿದ್ದಂತೆ ಮುಸ್ಲಿಮರು ಮುಂದುವರೆದುಬಿಟ್ಟರೇ?

ಮುಸ್ಲಿಂ ಸಮುದಾಯಕ್ಕೆ ಶೇ 4 ಮೀಸಲಾತಿ ಕೊಟ್ಟಿದ್ದು ಅವರ ಹಿಂದುಳಿದಿರುವಿಕೆ ಆಧಾರದಲ್ಲಿ. ಅದನ್ನು ಕಸಿದು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚುವ ಬಿಜೆಪಿ ಸರ್ಕಾರದ ಪ್ರಸ್ತಾಪ ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ದುರುದ್ದೇಶವನ್ನು ಹೊಂದಿದೆ. ಈ ಪ್ರಸ್ತಾಪಕ್ಕೆ ಕಾನೂನಿನ ಪ್ರಕಾರ ಮಾನ್ಯತೆಯೂ ಇಲ್ಲ. ಇದು ಮೀಸಲಾತಿಯ ಮೂಲ ಉದ್ದೇಶವನ್ನೇ ಬುಡಮೇಲು ಮಾಡುತ್ತಿದೆ.

deepu gowda

ದೀಪು ಗೌಡ, ಸಾಮಾಜಿಕ ಹೋರಾಟಗಾರರು

ಒಕ್ಕಲಿಗ ಮತ್ತು ಲಿಂಗಾಯತರಿಗೆ ಮಾಡುತ್ತಿರುವ ಅವಮಾನ

ಈ ಮೊದಲು ಬೆಳಗಾವಿ ಅಧಿವೇಶನ ಮುಗಿದಾಗ ಇಡಬ್ಲ್ಯೂಎಸ್‌ನಲ್ಲಿ ಕಿತ್ತು ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ ಹೆಚ್ಚು ಮೀಸಲಾತಿ ಕೊಡುತ್ತೇವೆ ಎಂದು ಹೇಳಿ ಒಕ್ಕಲಿಗ ಸಮುದಾಯದವರನ್ನು ನಂಬಿಸಿ ಅವಮಾನ ಮಾಡಿದ್ದರು.‌ ಈಗ ಮುಸ್ಲಿಮರಿಗಿದ್ದ ಶೇ. 4ರಷ್ಟು ಮೀಸಲಾತಿಯನ್ನು ಕಿತ್ತು ಈ ನಮಗೆ ಕೊಡುತ್ತೇವೆ ಎಂದು ಘೋಷಿಸಿ ಮತ್ತೆ ಅವಮಾನ ಮಾಡುತ್ತಿದ್ದಾರೆ. ಪ್ರಸ್ತುತ ಘೋಷಿಸಿರುವ ಮೀಸಲಾತಿಯನ್ನು ಕಾರ್ಯಗತಗೊಳಿಸುವುದು ಸಾಧ್ಯವಿಲ್ಲ.

ಒಕ್ಕಲಿಗರು ಮತ್ತು ಲಿಂಗಾಯತರು ಈ ರೀತಿ ಯಾರ ಬಳಿಯೂ ಕಿತ್ತುಕೊಂಡವರಲ್ಲ. ಅದರಲ್ಲೂ ತಮಗಿಂತ ಹೆಚ್ಚು ಕಷ್ಟದಲ್ಲಿರುವಂತಹ ಸಮುದಾಯದವರಿಂದ ಕಿತ್ತುಕೊಂಡವರಲ್ಲ. ಬದಲಿಗೆ, ಕೊಟ್ಟು ಅಭ್ಯಾಸ ಇರುವವರು. ಇನ್ನೊಬ್ಬರ ಹತ್ತಿರ ಕಿತ್ತು ಒಕ್ಕಲಿಗ ಸಮುದಾಯವರಿಗೆ ಮೀಸಲಾತಿ ಹೆಚ್ಚಿಸಿದಂತೆ ಮಾಡುವುದು ತಪ್ಪು. ಹಾಗೆಯೇ, ಇದನ್ನು ಕೂಡ ಜಾರಿ ಮಾಡಲು ಸಾಧ್ಯವಿಲ್ಲ. ಆದರೂ, ಹೀಗೆ ಹೇಳಿ ನಂಬಿಸಲು ಪ್ರಯತ್ನಿಸುತ್ತಿರುವುದು ನಮಗೆ ಪದೇ ಪದೇ ಮಾಡುತ್ತಿರುವ ಘೋರ ಅಪಮಾನ.
ಹೀಗೆ ಕಿತ್ತು ಕೊಡುವ ಬದಲಿಗೆ ಕೇಂದ್ರ ಸರ್ಕಾರ, ಇಡಬ್ಲ್ಯೂಎಸ್‌ ವಿಚಾರದಲ್ಲಿ ಶೇ.50ರ ಮೀಸಲಾತಿಯ ಮಿತಿಯನ್ನು ಹೇಗೆ ಹೆಚ್ಚು ಮಾಡಿತೋ, ಅದೇ ರೀತಿ ಮೀಸಲಾತಿ ಮಿತಿಯನ್ನು ಹೆಚ್ಚಿಸಿ ಈ ಎರಡೂ ಸಮುದಾಯಗಳಿಗೆ ಕೊಡಬೇಕೇ ಹೊರತು ಮುಸ್ಲಿಂ ಸಮುದಾಯದವರ ಮೀಸಲಾತಿಯನ್ನು ಕಿತ್ತು ಕೊಡುವುದಲ್ಲ. ಇದು ಈ ಮೂರು ಸಮುದಾಯದವರಿಗೂ ಮಾಡುತ್ತಿರುವ ದೊಡ್ಡ ಅನ್ಯಾಯ.

12028848 463055157212537 7124623655287865932 o 1

ಡಾ. ಬಿ ಸಿ ಬಸವರಾಜು, ಸಾಮಾಜಿಕ ವಿಶ್ಲೇಷಕರು

ಒಕ್ಕಲಿಗರಿಗೆ ಮೀಸಲಾತಿ: ಚುನಾವಣೆ ಗಿಮಿಕ್‌

ಜನಸಂಖ್ಯೆ ತಕ್ಕಂತೆ, ವೈಜ್ಞಾನಿಕ ಆಧಾರದಲ್ಲಿ ಮೀಸಲಾತಿ ಜಾರಿಗೊಳಿಸಬೇಕು. ಆದರೆ, ಆಡಳಿತ ಸರ್ಕಾರ ಚುನಾವಣೆ ಉದ್ದೇಶವನ್ನು ಬಳಸಿ, ಮುಸ್ಲಿಂ ಸಮುದಾಯದ ಮೀಸಲಾತಿ ರದ್ದುಗೊಳಿಸಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಕ್ಕೆ ನೀಡಿದೆ. ಈ ಮೀಸಲಾತಿಯನ್ನು ಕಾರ್ಯಗತಗೊಳಿಸಲು ಸಾಧ್ಯವಿಲ್ಲ.ಇದೆಲ್ಲವೂ ಕೇವಲ ಚುನಾವಣೆ ಗಿಮಿಕ್‌. ಮುಸ್ಲಿಂ ಸಮುದಾಯಕ್ಕಿದ್ದ ಮೀಸಲಾತಿ ಕಸಿದುಕೊಂಡರೆ, ಅದು ಆ ಸಮುದಾಯಕ್ಕೆ ಮಾಡುವ ಅನ್ಯಾಯ.

g t veerappa

ಜಿ ಟಿ ವೀರಪ್ಪ, ನಿವೃತ್ತ ಪ್ರಾಂಶುಪಾಲರು

Kavya Samatala
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...