ಚುನಾವಣೆ ಪ್ರಚಾರಕಿಯಿಂದ ಅಭ್ಯರ್ಥಿವರೆಗೆ: ವಯನಾಡಿನಲ್ಲಿ ಫಲಿಸುತ್ತಾ ಪ್ರಿಯಾಂಕಾ ತಂತ್ರ?

Date:

ವಯನಾಡ್‌ನ ಸ್ಥಳೀಯರು ಹೇಳುವ ಪ್ರಕಾರ ಸಾವಿರಾರು ಜನರನ್ನು ಸೇರಿಸಿ ಪ್ರಚಾರ ಮಾಡುವ, ಒಮ್ಮೆಲೆ ಗದ್ದಲ ಎಬ್ಬಿಸುವ ಇತರೆ ನಾಯಕರುಗಳ ತಂತ್ರದಿಂದ ಪ್ರಿಯಾಂಕಾ ಗಾಂಧಿ ಕೊಂಚ ದೂರವೇ ಉಳಿದಿದ್ದಾರೆ. ಹಾಗಂತ ಚುನಾವಣಾ ಪ್ರಚಾರವನ್ನೇನೂ ಕಡಿಮೆ ಮಾಡಿಲ್ಲ. ವಯನಾಡ್‌ ಉಪಚುನಾವಣೆಯಲ್ಲಿ ಬಿಜೆಪಿಯಿಂದ ನವ್ಯಾ ಹರಿದಾಸ್, ಎಡರಂಗದಿಂದ ಸತ್ಯನ್ ಮೊಕೇರಿ ಅವರು ಪ್ರಿಯಾಂಕಾ ಗಾಂಧಿ ಎದುರು ಕಣಕ್ಕಿಳಿದಿದ್ದಾರೆ.

ಸುಮಾರು 35 ವರ್ಷಗಳಿಂದ ತನ್ನ ತಂದೆ, ತಾಯಿ, ಸಹೋದರ ಮತ್ತು ಇತರೆ ಕಾಂಗ್ರೆಸ್ ನಾಯಕರುಗಳಿಗಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇದೇ ಮೊದಲ ಬಾರಿಗೆ ತನಗಾಗಿ ಮತಯಾಚಿಸುತ್ತಿದ್ದಾರೆ. ಇದಕ್ಕಾಗಿ ಎಂದಿನಂತೆ ಸ್ಥಳೀಯ ಜನರೊಂದಿಗೆ ಬೆರೆತು ಅವರ ಸಮಸ್ಯೆಗಳಿಗೆ ಕಿವಿಯಾಗುತ್ತಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಯ್‌ಬರೇಲಿ ಮತ್ತು ವಯನಾಡ್ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎರಡೂ ಕ್ಷೇತ್ರದಲ್ಲೂ ಗೆಲುವು ಕಂಡರು. ಆದರೆ, ಒಂದು ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾದಾಗ ವಯನಾಡ್ ಕೈಬಿಟ್ಟು ರಾಯ್‌ಬರೇಲಿ ಸಂಸದರಾಗಿ ಉಳಿದರು. ಇದೀಗ ವಯನಾಡ್‌ನಲ್ಲಿ ಲೋಕಸಭೆ ಉಪಚುನಾವಣೆ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಕಣಕ್ಕಿಳಿದಿದ್ದಾರೆ. ಪ್ರಚಾರವೂ ಕೂಡ ಭರದಿಂದ ಸಾಗುತ್ತಿದೆ.

ಇದನ್ನು ಓದಿದ್ದೀರಾ? 35 ವರ್ಷಗಳಲ್ಲಿ ಇದೇ ಮೊದಲು ನನಗಾಗಿ ಚುನಾವಣೆ ಪ್ರಚಾರ ಮಾಡುತ್ತಿದ್ದೇನೆ: ಪ್ರಿಯಾಂಕಾ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಟೋಬರ್ 23ರಂದು ಪ್ರಿಯಾಂಕಾ ಗಾಂಧಿ ವಯನಾಡ್ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದು ಅಂದಿನಿಂದ ನಿರಂತರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಜನರನ್ನು ಸ್ಥಳೀಯವಾಗಿ ಹಿಡಿದಿಟ್ಟುಕೊಳ್ಳುವ ಪ್ರಿಯಾಂಕಾ ಗಾಂಧಿ ತಂತ್ರ ಫಲಿಸುತ್ತದೆಯೋ ಇಲ್ಲವೋ ಎಂಬುದು ನವೆಂಬರ್ 13ರಂದು ನಡೆದ ಚುನಾವಣೆ ಮತ್ತು ನವೆಂಬರ್ 23ರಂದು ಘೋಷಣೆಯಾಗುವ ಫಲಿತಾಂಶದಿಂದ ತಿಳಿಯಲಿದೆ.

ಗಾಂಧಿ ಕುಟುಂಬದ ಬಗ್ಗೆ ವಯನಾಡ್‌ನಲ್ಲಿರುವ ಗೌರವವನ್ನು ಬಳಸಿಕೊಂಡು ಸದ್ಯ ಪ್ರಿಯಾಂಕಾ ಗಾಂಧಿ ಅಲ್ಲಲ್ಲಿ ಸಣ್ಣ ಸಭೆಗಳನ್ನು ನಡೆಸುತ್ತಿದ್ದಾರೆ. ರೈತರ ಸಮಸ್ಯೆ, ಭೂಕುಸಿತದಿಂದ ನಿರಾಶ್ರಿತರಾದ ವಯನಾಡ್ ಜನರಿಗೆ ಪುನರ್ ವಸತಿ, ಕೇಂದ್ರ ಸರ್ಕಾರ ಈವರೆಗೂ ವಯನಾಡ್ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡದಿರುವುದು, ಇತರೆ ವಿಚಾರಗಳ ಜೊತೆಗೆ ರಾಷ್ಟ್ರೀಯ ವಿಚಾರಗಳನ್ನು ಸೇರಿಸಿ ಪ್ರಿಯಾಂಕಾ ಅಬ್ಬರದ ಪ್ರಚಾರದಲ್ಲಿದ್ದಾರೆ.

ಏನೇ ಆದರೂ, ಪ್ರಿಯಾಂಕಾ ಗಾಂಧಿ ಅವರ ಚುನಾವಣಾ ಪ್ರಚಾರದ ವೈಖರಿ ಜನರ ಮನಸ್ಸನ್ನು ತಟ್ಟಿದೆ ಎಂಬುದನ್ನು ನಾವು ನಿರಾಕರಿಸುವಂತಿಲ್ಲ. 2024ರ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ strike rate (ಪ್ರಚಾರ ನಡೆಸಿದ ಸ್ಥಳದಲ್ಲಿ ಗೆಲುವು) ಶೇ.53 ಆಗಿದೆ. ಪ್ರಿಯಾಂಕಾ ಗಾಂಧಿ strike rate ಶೇ.46 ಇದೆ. ಮೋದಿಗಿಂತ ಪ್ರಿಯಾಂಕಾ ಕೊಂಚವಷ್ಟೇ ಕಡಿಮೆ strike rate ಹೊಂದಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವು ಪ್ರಬಲ ನಾಯಕರುಗಳ ಚುನಾವಣಾ ಗೆಲುವಿಗೆ ತನ್ನ ಪಾಲು ನೀಡಿದ್ದಾರೆ. ಈವರೆಗೆ ಇತರರ ಗೆಲುವಿನ ಫಲ ನೀಡಿದ ಪ್ರಿಯಾಂಕಾ ಶ್ರಮ ಈಗ ಅವರ ಜಯಕ್ಕೆ ಕೊಡುಗೆ ನೀಡುವ ನಿರೀಕ್ಷೆ ಕಾಂಗ್ರೆಸ್ ನಾಯಕರಿಗಿದೆ.

ಇದನ್ನು ಓದಿದ್ದೀರಾ? ವಯನಾಡು ಉಪಚುನಾವಣೆ | ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ವಯನಾಡ್‌ನ ಸ್ಥಳೀಯರು ಹೇಳುವ ಪ್ರಕಾರ ಸಾವಿರಾರು ಜನರನ್ನು ಸೇರಿಸಿ ಪ್ರಚಾರ ಮಾಡುವ, ಒಮ್ಮೆಲೆ ಗದ್ದಲ ಎಬ್ಬಿಸುವ ಇತರೆ ನಾಯಕರುಗಳ ತಂತ್ರದಿಂದ ಪ್ರಿಯಾಂಕಾ ಗಾಂಧಿ ಕೊಂಚ ದೂರವೇ ಉಳಿದಿದ್ದಾರೆ. ಹಾಗಂತ ಚುನಾವಣಾ ಪ್ರಚಾರವನ್ನೇನೂ ಕಡಿಮೆ ಮಾಡಿಲ್ಲ. ಅಲ್ಲಲ್ಲಿ ಸುಮಾರು 500-1000 ಜನರನ್ನು ಸೇರಿಸಿ ಸಭೆ, ಪ್ರಚಾರ ಮಾಡುತ್ತಿದ್ದಾರೆ. ಪ್ರಚಾರ ಹೆಚ್ಚಾಗಿ ಕಾರ್ಯಕರ್ತರು ಮತ್ತು ಇತರೆ ಮಿತ್ರ ಪಕ್ಷಗಳ ಮೇಲೆ ಅವಲಂಬಿಸಿದೆ ಎನ್ನುತ್ತಾರೆ ಸ್ಥಳೀಯ ಕಾಂಗ್ರೆಸ್ ಮುಖಂಡರು. ಇನ್ನು ಪ್ರಿಯಾಂಕ ಮಾತ್ರವಲ್ಲ ಇನ್ನೂ ಹಲವು ನಾಯಕರುಗಳು ಪ್ರಚಾರ ನಡೆಸುತ್ತಿದ್ದಾರೆ.

ವಯನಾಡ್‌ ಉಪಚುನಾವಣೆಯಲ್ಲಿ ಬಿಜೆಪಿಯಿಂದ ನವ್ಯಾ ಹರಿದಾಸ್, ಎಡರಂಗದಿಂದ ಸತ್ಯನ್ ಮೊಕೇರಿ ಅವರು ಪ್ರಿಯಾಂಕಾ ಗಾಂಧಿ ಎದುರು ಕಣಕ್ಕಿಳಿದಿದ್ದಾರೆ. 2019 ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ವಯನಾಡ್‌ನಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಬಾರಿಯೂ ಗೆದ್ದಿದ್ದರು. 2024ರಲ್ಲಿ 6,47,445 ಮತಗಳನ್ನು ಪಡೆದು, ತಮ್ಮ ಪ್ರತಿಸ್ಪರ್ಧಿ ಎಡರಂಗದ ಅಭ್ಯರ್ಥಿಯನ್ನು ಸುಮಾರು 3.64 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು. ಈ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿಯ ಸ್ಥಳೀಯ ತಂತ್ರ ಫಲಿಸುತ್ತಾ ಕಾದುನೋಡಬೇಕಿದೆ. ಪ್ರಿಯಾಂಕಾ ಗೆದ್ದರೆ ಎಡರಂಗಕ್ಕೆ ಹಿನ್ನಡೆ, ಸೋತರೆ ಕಾಂಗ್ರೆಸ್‌ಗೆ ಮುಖಭಂಗವಾಗಲಿದೆ.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...