₹105 ಕೋಟಿ ಬರ ಪರಿಹಾರ ಬಿಡುಗಡೆ | ರೈತರ ಮೂಗಿಗೆ ತುಪ್ಪ ಸವರುವ ಕೆಲಸ: ಮಾಜಿ ಸಿಎಂ ಬೊಮ್ಮಾಯಿ

Date:

ಕೇಂದ್ರ ಸರ್ಕಾರವು ಬರ ಪರಿಹಾರ ಬಿಡುಗಡೆಗೊಳಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ₹105 ಕೋಟಿ ಅನುದಾನ ಮಂಜೂರು ಮಾಡಿ ಇಂದು(ಜ.5) ಆದೇಶಿಸಿದೆ. ಸರ್ಕಾರದ ನಡೆಯನ್ನು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “₹105 ಕೋಟಿ ಬಿಡುಗಡೆ ಮಾಡಲು ಆರು ತಿಂಗಳು ರೈತರನ್ನು ಸತಾಯಿಸಬೇಕಿತ್ತೇ? ಇದು ರೈತರ ಮೂಗಿಗೆ ತುಪ್ಪ ಸವರುವ ಕೆಲಸ” ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ರಾಜ್ಯದ ರೈತರಿಗೆ ಬರ ಪರಿಹಾರವಾಗಿ ಕೇವಲ 105 ಕೋಟಿ ರೂ. ಬಿಡುಗಡೆ ಮಾಡಲು ರಾಜ್ಯದ ರೈತರನ್ನು ಆರು ತಿಂಗಳು ಸತಾಯಿಬೇಕಾಗಿತ್ತಾ. 123 ತಾಲೂಕುಗಳು ಬರ ಪೀಡಿತ ಎಂದು ನೀವೇ ಘೋಷಣೆ ಮಾಡಿದ್ದು, ಅಷ್ಟು ದೊಡ್ಡ ಮಟ್ಟದ ಬರಕ್ಕೆ ಪ್ರತಿ ಹೆಕ್ಟೇರ್ ಗೆ ಕೇವಲ 2000 ರೂ. ನೀಡುತ್ತಿರುವುದೇಕೆ?” ಎಂದು ಕೇಳಿದ್ದಾರೆ.

“ರೈತರ ಖಾತೆಗಳಿಗೆ ಆಧಾರ್ ಲಿಂಕ್ ಆಗಿರುವ ಸತ್ಯ ಹೊರಬರುತ್ತಿದ್ದಂತೆ, ತಕ್ಷಣ ರೈತರ ಖಾತೆಗಳಿಗೆ ಹಣ ಬಿಡುಗಡೆ ಮಾಡಲು ಆದೇಶ ಮಾಡಿದ್ದು, ನೀವು ರಾಜಕಾರಣಕ್ಕಾಗಿ, ವಿಳಂಬ ಧೋರಣೆ ಅನುಸರಿಸಲು ಆಧಾರ್ ಲಿಂಕ್ ಮಾಡುವ ಸುಳ್ಳು ಕಥೆ ಹೇಳಿದ್ದೀರಿ ಎನ್ನುವುದು ನಿಮ್ಮ ನಡೆಯಿಂದ ಸ್ಪಷ್ಟವಾಗುತ್ತದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ 69 ಲಕ್ಷ ರೈತರ ಖಾತೆಗಳಿಗೆ ಆಧಾರ್ ಲಿಂಕ್ ಮಾಡಿರುವ ಮಾಹಿತಿ ಸರ್ಕಾರದ ಬಳಿ ಇದ್ದರೂ, ಸುಳ್ಳು ಹೇಳಿ ಜನರ ದಾರಿ ತಪ್ಪಿಸಿದ ಉದ್ದೇಶವೇನು? ನಮ್ಮ ಅವಧಿಯಲ್ಲಿ 2022-23 ನೇ ಸಾಲಿನಲ್ಲಿ ಪ್ರವಾಹದಿಂದ 13.09 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾದ ಬೆಳೆಗೆ 14.63 ಲಕ್ಷ ರೈತರ ಖಾತೆಗೆ ನೇರವಾಗಿ 2,031 ಕೋಟಿ ರೂ.ಗಳನ್ನು 2 ತಿಂಗಳೊಳಗೆ ಜಮೆ ಮಾಡಲಾಗಿತ್ತು” ಎಂದು ಬೊಮ್ಮಾಯಿ ತಿಳಿಸಿದ್ದಾರೆ.

“ನಮ್ಮ ಅವಧಿಯಲ್ಲಿ ಪ್ರವಾಹದಿಂದ ಬೆಳೆ ಹಾನಿಯಾಗಿದ್ದಾಗ ಕೇಂದ್ರ ಸರ್ಕಾರದ ಅನುದಾನಕ್ಕಾಗಿ ಕಾಯದೇ ರಾಜ್ಯ ಸರ್ಕಾರವೇ ಎಸ್‌ಡಿಆರ್‌ಎಫ್ ಮಾರ್ಗಸೂಚಿ ದರಕ್ಕಿಂತಲೂ ಎರಡು ಪಟ್ಟು ಹೆಚ್ಚಳ ಮಾಡಿ ಮಳೆಯಾಶ್ರಿತ ಪ್ರದೇಶದ ಬೆಳೆ ಹಾನಿಗೆ ಎಸ್‌ಡಿಆರ್‌ಎಫ್ ದರ 6,800 ಇದ್ದರೆ, ನಮ್ಮ ಸರ್ಕಾರ 13,600 ರೂ.ಗಳನ್ನು ಪರಿಹಾರ ನೀಡಿದ್ದೆವು. ನೀರಾವರಿ ಜಮೀನಿಗೆ ಎಸ್‌ಡಿಆರ್‌ಎಫ್ ಮಾರ್ಗಸೂಚಿ ದರ 13,500 ಇದ್ದರೆ, ನಮ್ಮ ಸರ್ಕಾರದಿಂದ 25,000 ರೂ. ಪರಿಹಾರ ನೀಡಿದ್ದೆವು. ತೋಟಗಾರಿಕಾ ಬೆಳೆ ಹಾನಿಗೆ ಎಸ್‌ಡಿಆರ್‌ಎಫ್ ಮಾರ್ಗಸೂಚಿ ದರ 18,000 ರೂ. ಇದ್ದರೆ, ನಾವು 28,000 ರೂ. ಪರಿಹಾರ ನೀಡಿದ್ದೇವು” ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

“ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಕನಿಷ್ಠ ₹50,000ದಿಂದ 5 ಲಕ್ಷದವರೆಗೆ ರಾಜ್ಯ ಸರ್ಕಾರದಿಂದಲೇ ಪರಿಹಾರ ನೀಡಿದ್ದೆವು. ಇದು ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮಾರ್ಗಸೂಚಿ ದರಕ್ಕಿಂತ ಹೆಚ್ಚು. ಪ್ರವಾಹದಿಂದ ಬಾಧಿತರಾದ ಸಂತ್ರಸ್ತರ ನೆರವಿಗೆ ಪರಿಷ್ಕೃತ ದರದಂತೆ ರಾಜ್ಯ ಸರ್ಕಾರ 3326 ಕೋಟಿ ರೂ. ವೆಚ್ಚ ಮಾಡಿತ್ತು. ಅಲ್ಲದೇ ಮೂಲ ಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಬಿಡುಗಡೆ ಮಾಡಿದ್ದೆವು.” ಎಂದು ಮಾಜಿ ಸಿಎಂ ಅಂಕಿ-ಅಂಶಗಳ ಮಾಹಿತಿ ನೀಡಿದ್ದಾರೆ.

“ರಾಜ್ಯದ ಜನರ ಸಂಕಷ್ಟದ ಬಗ್ಗೆ ಕಾಳಜಿ ಇರುವ ಯಾವ ಮುಖ್ಯಮಂತ್ರಿಯೂ ತನ್ನ ತಪ್ಪು ಮುಚ್ಚಿಕೊಳ್ಳಲು ಬೇರೆಯವರ ಕಡೆಗೆ ಬೆರಳು ಮಾಡಿ ತೋರಿಸುವುದಿಲ್ಲ. ತಮ್ಮ ಗ್ಯಾರಂಟಿ ಯೋಜನೆಗಳೂ ಅಸಮರ್ಪಕವಾಗಿದ್ದು, ನಿಜವಾದ ಫಲಾನುಭವಿಗಳಿಗೆ ತಲುಪಿಸದೇ ತಾಂತ್ರಿಕ ತೊಂದರೆಯ ಕಾರಣ ಹೇಳುತ್ತಿದ್ದೀರಿ. ಜಿಲ್ಲಾಧಿಕಾರಿಗಳ ಖಾತೆಗಳಲ್ಲಿ ಹಣವಿದ್ದರೂ, ಅದನ್ನು ಬಿಡುಗಡೆ ಮಾಡದೇ ಕೇವಲ ₹105 ಕೋಟಿ ಬಿಡುಗಡೆ ಮಾಡಿ ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದೀರಿ” ಎಂದು ಬೊಮ್ಮಾಯಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

“ರಾಜ್ಯದ ರೈತರ ಬಗ್ಗೆ ನಿಮಗೆ ಕಳಕಳಿ ಇದ್ದರೆ, ಕೇಂದ್ರದ ಅನುದಾನದ ನೆಪ ಹೇಳದೇ ಕೂಡಲೇ ಸಂಪೂರ್ಣ ಬೆಳೆ ಪರಿಹಾರ ಬಿಡುಗಡೆ ಮಾಡಿ. ಇಲ್ಲದಿದ್ದರೆ ಸಂಕಷ್ಟಕ್ಕೆ ಬಾರದ ನಿಷ್ಪ್ರಯೋಜಕ ಸರ್ಕಾರ ನಿಮ್ಮದು ಎಂದು ರಾಜ್ಯದ ರೈತರು ಶಾಪ ಹಾಕುವುದು ನಿಶ್ಚಿತ” ಎಂದು ಬೊಮ್ಮಾಯಿ ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...