ವರ್ಗಾವಣೆ ದಂಧೆಯಲ್ಲಿ ₹500 ಕೋಟಿ ವಹಿವಾಟು : ಸರ್ಕಾರದ ವಿರುದ್ಧ ಕುಮಾರಸ್ವಾಮಿ ಸಿಡಿಸಿದ ಬಾಂಬ್‌

Date:

ಕಾಂಗ್ರೆಸ್ ಸರ್ಕಾರ ಬಂದ ಬಳಿಕ ವರ್ಗಾವಣೆ ದಂಧೆಯಲ್ಲಿ ₹500 ಕೋಟಿ ವಹಿವಾಟು ನಡೆಸಲಾಗಿದೆ. ಈ ಬಗ್ಗೆ ನನಗೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಆರೋಪ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿರುವ ಜೆಡಿಎಸ್ ಮುಖಂಡ, ಕಳೆದ ಎರಡು ತಿಂಗಳಲ್ಲಿ ವರ್ಗಾವಣೆಯ ವಿಚಾರವಾಗಿ ₹500 ಕೋಟಿಗೂ ಹೆಚ್ಚಿನ ವ್ಯವಹಾರ ನಡೆದಿದೆ. ನಾನು ಇದನ್ನು ಊಹೆ ಮಾಡಿ ಹೇಳುತ್ತಿಲ್ಲ. ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಈ ಮಟ್ಟಕ್ಕೆ ಆದರೆ ರಾಜ್ಯ ಉಳಿಯುತ್ತಾ? ಇವುಗಳಿಗೆಲ್ಲ ಎಲ್ಲಿಂದ ಸಾಕ್ಷಿ ತಗೊಂಡು ಬರ್ತಿರಾ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2008ರಿಂದ 2013ರವರೆಗೆ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮವಾಗಿ ₹600 ಕೋಟಿ ವೆಚ್ಚದ ಕಾಮಗಾರಿಗಳು ನಡೆದಿವೆ. ಇದೇ ಸಿದ್ದರಾಮಯ್ಯ ಮತ್ತು ಮಹದೇವಪ್ಪನವರು ವಿರೋಧ ಪಕ್ಷದಲ್ಲಿ ಚರ್ಚೆ ಮಾಡ್ತಾರೆ. ಸದನ ಸಮಿತಿಯ ರಚನೆಯಾಗಿ ಅದರ ವರದಿಯೂ ಬಂದಿತ್ತು. ಆದರೆ ವರದಿಯಲ್ಲಿದ್ದ ಅಧಿಕಾರಿಗಳಿಗೆ ಪದೋನ್ನತಿ ಕೊಟ್ಟದ್ದು ನಾನಲ್ಲ. ಕಪ್ಪ ಕಾಣಿಕೆಗಳು ಹೇಗೆಲ್ಲ ನಡೀತಿತ್ತು ಎನ್ನುವುದು ಗೊತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ನೋಡಿದರೆ ಗೊತ್ತಾಗುತ್ತದೆ. ಏನೆಲ್ಲ ರಾದ್ಧಾಂತ ಆಗಿದೆ ಅನ್ನುವುದು ಪತ್ರಿಕೆ ನೋಡಿದರೆ ಗೊತ್ತಾಗುತ್ತದೆ. ಅದ್ಯಾರೋ ಪಾಯಲ್ ಅಂತ ನೇಮಕವಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಸಂಬಂಧಿಕರಿದ್ದಾರಂತೆ. ಅವರು ಯಾರು ಅಂತ ನನಗೆ ಗೊತ್ತಿಲ್ಲ. ಸರ್ವರಿಗೂ ಸಮಪಾಲು, ಸರ್ವ ಜನಾಂಗದ ಶಾಂತಿಯ ತೋಟ ಎಂದು ಸಿಎಂ ಹೇಳುತ್ತಿದ್ದಾರೆ. ಇವರ ಸಿದ್ದಾಂತ ನೋಡಿದರೆ ಗೊತ್ತಾಗುತ್ತದೆ ಎಂದು ವ್ಯಂಗ್ಯವಾಗಿ ಹೇಳಿದರು.

ಹೆಸರನ್ನು ಎತ್ತದೆ ಪರೋಕ್ಷವಾಗಿ ಶಾಸಕರೋರ್ವರ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ, ಒಬ್ಬರು ಮಜ್ಜಿಗೆ ಮಾರುತ್ತಿದ್ದರು. ಆಮೇಲೆ ಜಿ.ಪಂ. ಸದಸ್ಯರಾದರು. ಆಮೇಲೆ ತಮ್ಮನನ್ನು ಬಿಟ್ಟುಕೊಂಡು ಗುತ್ತಿಗೆ ಮಾಡುತ್ತಿದ್ದರು. ಆಮೇಲೆ ಶಾಸಕರಾದರು. ಅವರು ಟವೆಲ್ ಕೊಡವಿದ್ರೆ ಹಣ ಉದುರುತ್ತದೆ. ಹೀಗಂತ ಅಧಿಕಾರಿಗಳೇ ಹೇಳುತ್ತಿದ್ದರು ಎಂದರು.

ಎನ್​ಡಿಎ ಮೈತ್ರಿ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನನಗೆ ಯಾರೂ ಕರೆ ಕೂಡ ಮಾಡಿಲ್ಲ. ಅದೇ ರೀತಿಯಾಗಿ ಇಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಮಹತ್ವದ ಸಭೆಗೆ ಜೆಡಿಎಸ್​ಗೆ ಆಹ್ವಾನ ನೀಡಿಲ್ಲ ಎಂದಿದ್ದಾರೆ.

ಮಹಾಘಟಬಂಧನ್​ ಸಭೆಗೆ ಕಾಂಗ್ರೆಸ್​ ಹಲವು ಪಕ್ಷಗಳ ನಾಯಕರಿಗೆ ಆಹ್ವಾನಿಸಿದ್ದಾರೆ. ಜೆಡಿಎಸ್​​​ ವಿಸರ್ಜನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಪಂಚರತ್ನ ಜಾರಿ ಮಾಡದಿದ್ದರೆ ಪಕ್ಷ ವಿಸರ್ಜನೆ ಮಾಡುತ್ತೇನೆ, ಹಾಗಾಗಿ ಒಂದು ಅವಕಾಶ ಕೊಡಿ ಎಂದು ಜನರಲ್ಲಿ ಕೇಳಿದ್ದೆ. ಸಿದ್ದರಾಮಯ್ಯ ಅವರನ್ನು ಕನ್ನಡ ಪಂಡಿತರು ಎಂದು ತಿಳಿದುಕೊಂಡಿದ್ದೆ. ಆದರೆ, ಅವರಿಗೆ ಕನ್ನಡ ಅರ್ಥ ಆಗಲ್ಲ ಅನ್ನಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...