ಸಾರಿಗೆ ನಿಗಮಗಳ ₹581 ಕೋಟಿ ಮೋಟಾರು ವಾಹನ ತೆರಿಗೆ ಬಾಕಿ: ವಿನಾಯಿತಿ ನೀಡಿದ ಸಚಿವ ಸಂಪುಟ ಸಭೆ

Date:

‘ಶಕ್ತಿ ಯೋಜನೆ’ಯ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳು 2023-24ನೇ ಸಾಲಿನಲ್ಲಿ ಸರ್ಕಾರಕ್ಕೆ ಪಾವತಿಸಬೇಕಾಗಿದ್ದ ₹581 ಕೋಟಿ ಮೊತ್ತದಷ್ಟು ಮೋಟಾರು ವಾಹನ ತೆರಿಗೆಯ ಪಾವತಿ ಮಾಡುವುದರಿಂದ ವಿನಾಯಿತಿ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜ.5) ನಡೆಸಿದ ಸಚಿವ ಸಂಪುಟದ 2024ನೇ ಸಾಲಿನ ಮೊದಲನೇ ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ವೇಳೆ ಮಾಹಿತಿ ನೀಡಿದರು.

ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಿಂದ ಸರ್ಕಾರಕ್ಕೆ ಮೋಟಾರು ವಾಹನ ತೆರಿಗೆಯ ರೂಪದಲ್ಲಿ ಸುಮಾರು 581.47 ಕೋಟಿಯಷ್ಟು ಮೊತ್ತವನ್ನು ಸರ್ಕಾರಕ್ಕೆ ಪಾವತಿಸಲು ಬಾಕಿ ಇತ್ತು. ಶಕ್ತಿ ಯೋಜನೆಯಿಂದ ಅವರಿಗೆ ಇದು ಹೊರೆ ಎಂದು ಎನಿಸಿದೆ. ಹಾಗಾಗಿ, ಈ ಎಲ್ಲ ಮೊತ್ತವನ್ನು ಪಾವತಿ ಮಾಡುವುದರಿಂದ ವಿನಾಯಿತಿ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಲ್ಕು ಸಾರಿಗೆ ಸಂಸ್ಥೆಗಳ ಪೈಕಿ ಕೆಎಸ್‌ಆರ್‌ಟಿಸಿಯು 243.52 ಕೋಟಿ , ಬಿಎಂಟಿಸಿ 119.88 ಕೋಟಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 103.91 ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು 114.16 ಕೋಟಿ ಬಾಕಿ ಇತ್ತು. ಇವೆಲ್ಲವೂ ಸೇರಿ ಒಟ್ಟು 581.47 ಕೋಟಿಯಷ್ಟಾಗುತ್ತದೆ. ಇದನ್ನು ಪಾವತಿ ಮಾಡುವುದರಿಂದ ಸರ್ಕಾರ ವಿನಾಯಿತಿ ನೀಡಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...