₹6,407 ಕೋಟಿ ಬಂಡವಾಳ ಹೂಡಿಕೆಯ 128 ಯೋಜನೆಗೆ ಅನುಮೋದನೆ; 33,771 ಜನರಿಗೆ ಉದ್ಯೋಗ ನಿರೀಕ್ಷೆ

Date:

ರಾಜ್ಯಾದ್ಯಂತ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ಶಿಕ್ಷಣ – ಸಂಶೋಧನಾ ಸಂಸ್ಥೆಗಳ ಸ್ಥಾಪನೆ, ಉಗ್ರಾಣ, ಶೈತ್ಯಾಗಾರಗಳ ನಿರ್ಮಾಣ, ವಾಹನ ಬಿಡಿಭಾಗ, ಪಿವಿಸಿ ಪೈಪ್ ತಯಾರಿಕೆ ಸೇರಿದಂತೆ ಒಟ್ಟು ₹6,407.82 ಕೋಟಿ ಬಂಡವಾಳ ಮೊತ್ತದ ಹೂಡಿಕೆಯ ಪ್ರಸ್ತಾವನೆಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು ಅನುಮೋದನೆ ನೀಡಿದೆ.

ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ 143 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು ₹ 6407.82 ಕೋಟಿ ಬಂಡವಾಳ ಮೊತ್ತದ ಹೂಡಿಕೆಯ 128 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 33,771 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಬೆಂಗಳೂರು ಗ್ರಾಮಾಂತರ, ಬೆಳಗಾವಿ, ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯ ವಿವಿಧ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ.

ಈ ಯೋಜನೆಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ₹485 ಕೋಟಿ ಬಂಡವಾಳದ ಯಾಂತ್ರಿಕೃತ ಎರಕಹೊಯ್ಯುವ ಘಟಕ ಸ್ಥಾಪನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ₹484.33 ಕೋಟಿ ಮೊತ್ತದ ವಿಜ್ಞಾನ, ತಂತ್ರಜ್ಞಾನ ಸಂಶೋಧನೆ ಹಾಗೂ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆ, ಮೈಸೂರು ಜಿಲ್ಲೆಯಲ್ಲಿ ₹415 ಕೋಟಿ ಮೊತ್ತದ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಶಿಕ್ಷಣ ವಿಶ್ವವಿದ್ಯಾಲಯ ಸ್ಥಾಪನೆ ಮುಂತಾದವು ಸೇರಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

₹50 ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆಯ 22 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ ₹4230.64 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ 24,846 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

ಈ ಸುದ್ದಿ ಓದಿದ್ದೀರಾ? ನೂರು ಎಫ್​ಐಆರ್​ ಹಾಕಿದರೂ ನನಗೆ ಕ್ಲೀನ್​ಚಿಟ್ ಸಿಗಲಿದೆ: ಕೆ ಎಸ್‌ ಈಶ್ವರಪ್ಪ

₹15 ಕೋಟಿಗಳಿಂದ ₹50 ಕೋಟಿ ಮೊತ್ತದ ಒಳಗಿನ ಬಂಡವಾಳ ಹೂಡಿಕೆಯ 104 ಹೊಸ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇವುಗಳಿಂದ ₹2056.68 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ 8,425 ಜನರಿಗೆ ಉದ್ಯೋಗಗಳು ಲಭ್ಯವಾಗಲಿವೆ.

ಹೆಚ್ಚುವರಿ ಬಂಡವಾಳ ಹೂಡಿಕೆಯ 2 ಯೋಜನೆಗಳಿಗೆ ಸಭೆಯು ಅನುಮೋದಿಸಿದ್ದು, ಇದರಿಂದ ₹120.50 ಕೋಟಿ ಬಂಡವಾಳ ಹೂಡಿಕೆ ಆಗಲಿದ್ದು, 500 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

ಸಭೆಯಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಸದಸ್ಯ ಡಾ. ಎನ್. ಮಹೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...