ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮನೆಯ ಯಜಮಾನಿಗೆ ರೂ. 1 ಲಕ್ಷ ಜಮೆ, ರೈತರ ಸಾಲ ಮನ್ನಾ: ಸಿಎಂ ಸಿದ್ದರಾಮಯ್ಯ

Date:

“ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣುಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗೋ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಅವರ ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

“ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೂ ಆಗಲ್ಲ. ಇವರಿಗೆ ಮಾನ ಮರ್ಯಾದೆನೂ ಇಲ್ಲ. ಯಪ್ಪಾ ಯಪ್ಪಾ ಯಪ್ಪಾ ಈ ಮೋದಿ ಯಾವ ಮಟ್ಟದ ಸುಳ್ಳು ಸೃಷ್ಟಿ ಮಾಡ್ತಾರಲ್ಲಾ ನಾಚ್ಕೆನೂ ಆಗಲ್ಲ ಎಂದು ಮೋದಿ ಅವರ ಸುಳ್ಳುಗಳನ್ನು ಪಟ್ಟಿ ಮಾಡಿದ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ಮುಂದುವರೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಿತ್ತೂರು ರಾಣಿ ಜಯಂತಿ ಆಚರಣೆಗೆ ಆದೇಶಿಸಿದ್ದು ನಾವು. ಬೊಮ್ಮಾಯಿ ಮಾಡ್ಲಿಲ್ಲ, ಯಡಿಯೂರಪ್ಪ ಮಾಡ್ಲಿಲ್ಲ. ನಾವು ಯಾವತ್ತೂ ಶಿವಾಜಿ ಮಹಾರಾಜರನ್ನು ಅವಮಾನಿಸಿಲ್ಲ. ಆದರೆ ಈ ಮೋದಿ ಅದೇನು ಸುಳ್ಳು ಹೇಳ್ತಾರೆ ನೋಡಿ‌. ಕಾಂಗ್ರೆಸ್ ನವರು ರಾಣಿ ಚನ್ನಮ್ಮರಿಗೆ ಮತ್ತು ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದ್ದೀವಿ ಎಂದು ಸುಳ್ಳು ಹೇಳ್ತೀರಲ್ಲಾ , ಸುಳ್ಳಿಗೆ ಒಂದು ಮಿತಿಯಾದರೂ ಬೇಡ್ವಾ ಮೋದಿ” ಎಂದರು.

“ಈಗ ಮೋದಿ ಹಿಂದುಳಿದ ಜಾತಿ ಸಮುದಾಯಗಳನ್ನು ಮುಸ್ಲೀಮರ ವಿರುದ್ಧ ಎತ್ತಿಕಟ್ಟಲು ಭಯಾನಕ ಸುಳ್ಳು ಸೃಷ್ಟಿಸಿದ್ದಾರೆ. ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲೀಮರಿಗೆ ಕೊಡ್ತಾರೆ ಎನ್ನುವ ಭಯಾನಕ ಸುಳ್ಳು ಹೇಳಿದ ಮೋದಿಯವರಿಗೆ ನಾಚಿಕೆ ಅನ್ನೋದೇ ಇಲ್ಲ” ಎಂದು ಕಿಡಿಕಾರಿದರು.

“ಪ್ರತಿ ಭಾರತೀಯರ ಖಾತೆಗೆ 15 ಲಕ್ಷ ಹಾಕ್ತೀವಿ ಎಂದು ನಂಬಿಸಿ ಪ್ರತಿ ಭಾರತೀಯರ ಹಣೆಗೆ ಮೂರು ನಾಮ ತಿಕ್ಕಿದ್ರು. ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಎಂದು ನಂಬಿಸಿ ಕೆಲಸ ಕೇಳಿದ್ರೆ ಪಕೋಡ ಮಾರಿ ಅಂತೀರಿ. ಥೂ ನಿಮಗೆ ನಾಚಿಕೆನೇ ಆಗಲ್ವಾ” ಎಂದು ಪ್ರಶ್ನಿಸಿದರು.

“ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಸ್ತೀವಿ ಅಂದ್ರಿ, ಇಳಿಸಿದ್ರಾ? ಬೆಲೆ ಏರಿಕೆ ತಡಿತೀವಿ ಅಂದ್ರಿ. ತಡೆದ್ರಾ ? ಪ್ರತೀ ಬಾರಿ ರಾಜ್ಯಕ್ಕೆ ಬರೋದು ಹೊಸ ಹೊಸ ಸುಳ್ಳು ಹೇಳಿ ಹೋಗೋದು. ಜಾತಿ-ಸಮುದಾಯಗಳನ್ನು ನಂಬಿಸಿ ವಂಚಿಸ್ತೀರಿ? ಸುಳ್ಳು ಹೇಳ್ಕೊಂಡು ತಿರುಗ್ತೀರಿ” ಎಂದು ಕೇಳಿದರು.

ನಾವು ಭಾರತೀಯರ ಬದುಕಿನ ಬಗ್ಗೆ ಮಾತಾಡ್ತೀವಿ

“ಬಿಜೆಪಿ ಭಾರತೀಯರ ಭಾವನೆಗಳ ಜೊತೆ ಚೆಲ್ಲಾಟ ಆಡ್ಕೊಂಡು ಲಾಭ ಮಾಡಿಕೊಳ್ತಾರೆ. ಆದರೆ ನಾವು ಕಾಂಗ್ರೆಸ್ಸಿವರು ಜನರ ಬದುಕಿನ‌ ಸಂಕಷ್ಟಗಳನ್ನು ಕಡಿಮೆ ಮಾಡಲು ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಈಡೇರಿಸಿದ ನೈತಿಕತೆಯಿಂದ ನಾವು ನಿಮ್ಮ ಮುಂದೆ ಬಂದು ಮತ ಕೇಳುತ್ತಿದ್ದೇವೆ” ಎಂದರು.

ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ

“ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಪ್ರತೀ ವರ್ಷ ಮಹಿಳಾ ಯಜಮಾನಿಯ ಖಾತೆಗೆ ಒಂದು ಲಕ್ಷ ರೂಪಾಯಿ ಜಮೆ ಆಗುತ್ತೆ. ಇಡೀ ದೇಶದ ರೈತರ ಸಾಲ ಮನ್ನಾ ಆಗುತ್ತೆ. ನಿರುದ್ಯೋಗಿ ಯುವಕ ಯುವತಿಯರಿಗೆ ಲಕ್ಷ ರೂಪಾಯಿ ಸಿಗುತ್ತೆ. ಸ್ವಾಮಿನಾಥನ್ ವರದಿಯಂತೆ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಜಾರಿ ಆಗತ್ತೆ. ಇದಕ್ಕಾಗಿ ಕಾಯ್ದೆ ಮಾಡ್ತೀವಿ” ಎಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ , ಬೈರತಿ ಸುರೇಶ್, ಮಾಜಿ ಸಚಿವರಾದ ವಿನಯ್ ಕುಲಕರ್ಣಿ ಹಾಗೂ ಜಿಲ್ಲೆಯ ಶಾಸಕರು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...