ಕೆಂಪೇಗೌಡ ಜಯಂತಿ ಆಚರಿಸಲು ಪ್ರತಿ ತಾಲ್ಲೂಕಿಗೆ 1 ಲಕ್ಷ ರೂಪಾಯಿ: ಡಿ ಕೆ ಶಿವಕುಮಾರ್

Date:

ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ನೀಡಲಾಗುವುದು. ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ 1 ಲಕ್ಷ ರೂ. ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

“ಶಾಲಾ ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 20 ಸಾವಿರ, ತಾಲ್ಲೂಕು ಕೇಂದ್ರಗಳಿಗೆ 20 ಸಾವಿರದ ಜೊತೆಗೆ ಹೆಚ್ಚುವರಿಯಾಗಿ 1 ಲಕ್ಷ ನೀಡಲಾಗುವುದು. ಜಿಲ್ಲಾ ಕೇಂದ್ರಗಳಿಗೆ 50 ಸಾವಿರ ನೀಡಲಾಗುತ್ತಿದ್ದು ಹೆಚ್ಚು ಮಾಡಲು ಚಿಂತನೆ ನಡೆಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವವನ್ನು ಅರಮನೆ ಮೈದಾನ ಅಥವಾ ಹೊರಾಂಗಣ ಮೈದಾನದಲ್ಲಿ ಜೂನ್ 27 ರಂದು ನಡೆಸಲು ತೀರ್ಮಾನಿಸಲಾಗಿದೆ. ಹುಲಿಯೂರುದುರ್ಗ, ಮಾಗಡಿ, ಆವತಿ ಸೇರಿದಂತೆ ಬೆಂಗಳೂರಿನ ಎಲ್ಲಾ ದಿಕ್ಕುಗಳಿಂದ ಪ್ರತಿವರ್ಷದಂತೆ ಗೋಪುರ ಮತ್ತು ಜ್ಯೋತಿಗಳ ಮೆರವಣಿಗೆ ಬರುತ್ತದೆ” ಎಂದರು.

ಬಿ ಎಲ್ ಶಂಕರ್ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿ

“ಬಿ.ಎಲ್.ಶಂಕರ್ ಅವರ ನೇತೃತ್ವದಲ್ಲಿ ಕೆಂಪೇಗೌಡ ಪ್ರಶಸ್ತಿ ಆಯ್ಕೆ ಸಮಿತಿ ರಚನೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಿಡಿಎ, ಬಿಬಿಎಂಪಿಯಿಂದ ಕೆಂಪೇಗೌಡ ಪ್ರಶಸ್ತಿ ನೀಡಲು ಯೋಜಿಸಲಾಗಿದೆ. ಪ್ರಶಸ್ತಿಗೆ ನಾನು ಒಂದಷ್ಟು ಹೆಸರು ಸೂಚಿಸಿದ್ದೆ. ವಾರ್ಡ್ ಮಟ್ಟದಲ್ಲಿ ಅಥವಾ ಬೇರೆ ಸ್ವರೂಪದಲ್ಲಿ ಪ್ರಶಸ್ತಿ ನೀಡಬೇಕಾ ಎಂದು ಗೊಂದಲ ಇರುವ ಕಾರಣಕ್ಕೆ ಮುಂದುವರೆದಿಲ್ಲ. ಮುಂದಿನ ದಿನಗಳಲ್ಲಿ ಈ ಪ್ರಶಸ್ತಿ ನೀಡಲಾಗುವುದು” ಎಂದು ತಿಳಿಸಿದರು.

ಸಮಾಧಿ ಹಾಗೂ ಕೋಟೆ ಅಭಿವೃದ್ದಿಗೆ ಕ್ರಿಯಾ ಯೋಜನೆ

“ಕೆಂಪೇಗೌಡರ ಮೂಲ ಸಮಾಧಿ ಸ್ಥಳ, ಕೋಟೆಯನ್ನು ಅಭಿವೃದ್ದಿಪಡಿಸುವ ಕ್ರಿಯಾಯೋಜನೆ ಸಿದ್ದ ಪಡಿಸಲಾಗಿದೆ. ಅವರ ಬಗ್ಗೆ ಮಾಹಿತಿಯೂ ಸಿಗಬೇಕು ಹಾಗೂ ಪ್ರವಾಸಿ ಸ್ಥಳವಾಗಿಯೂ ಪರಿವರ್ತನೆಯಾಗಬೇಕು. ಸಚಿವರಾದ ಕೆ.ಎಚ್.ಮುನಿಯಪ್ಪ ಅವರ ಕ್ಷೇತ್ರದಲ್ಲಿ ಕೆಂಪೇಗೌಡರ ಜನ್ಮಸ್ಥಳ ಅಭಿವೃದ್ದಿಗೆ 10 ಎಕರೆ ಮಂಜೂರು ಮಾಡಲಾಗಿದೆ. ಶೀಘ್ರದಲ್ಲೇ ಸ್ಥಳ ಪರಿಶೀಲನೆ ನಡೆಸಲಾಗುವುದು. ಸುಮ್ಮನಹಳ್ಳಿಯಲ್ಲಿ ಕೆಂಪೇಗೌಡ ಪ್ರಾಧಿಕಾರದ ಕಚೇರಿಗಾಗಿ 5 ಎಕರೆ ಜಾಗವನ್ನು ಮಂಜೂರು ಮಾಡಲಾಗಿದೆ. ಜಯಂತಿಯಂದೇ ಗುದ್ದಲಿಪೂಜೆಗೆ ಯೋಚಿಸಲಾಗಿದೆ” ಎಂದು ಮಾಹಿತಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...