ಬ್ರೇಕಿಂಗ್ ನ್ಯೂಸ್ | ಅಧಿವೇಶನದಲ್ಲಿ ಅಸಭ್ಯ ವರ್ತನೆ : 10 ಬಿಜೆಪಿ ಶಾಸಕರು ಅಮಾನತು

Date:

ಸದನದ ಬಾವಿಯಲ್ಲಿ ಧರಣಿ ನಡೆಸಿ, ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮೇಲೆ ವಿಧೇಯಕ ಪ್ರತಿಗಳನ್ನು ಹರಿದು ಪೀಠಕ್ಕೆ ಎಸೆದ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಆದೇಶಿಸಿದ್ದಾರೆ.

ಅಧಿವೇಶನ ಮುಗಿಯುವವರೆಗೂ ಭಾಗವಹಿಸದಂತೆ ಅಮಾನತು ಮಾಡಲಾಗಿದೆ. ಅಸಭ್ಯ ನಡವಳಿಕೆ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಸದನದಲ್ಲಿ ಅಗೌರವ ತೋರಿದ 10 ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿದೆ. ಡಾ.ಅಶ್ವತ್ಥ್​​ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶ್ಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್.ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ವೈ ಭರತ್ ಶೆಟ್ಟಿ ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜುಲೈ 21ರವರೆಗೆ ಅಧಿವೇಶನ ನಡೆಯಲಿದೆ.

ಘಟನೆಯ ಹಿನ್ನೆಲೆ

ಇಂದಿನ (ಜು.19) ನಡೆದ ವಿಧಾನಸಭಾ ಅಧಿವೇಶನ ಕಲಾಪದಲ್ಲಿ ಬಿಜೆಪಿ ಸದಸ್ಯರು ಸಚಿವರು ಮಂಡಿಸಿದ ಐದು ವಿಧೇಯಕ ಪ್ರತಿಗಳನ್ನು ಹರಿದು ಸ್ಪೀಕರ್ ಪೀಠಕ್ಕೆ ಎಸೆದ ಘಟನೆ ನಡೆಯಿತು.

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ವಿರೋಧ ಪಕ್ಷಗಳ ಸಭೆಗೆ ಆಗಮಿಸಿದ್ದ ಗಣ್ಯರಿಗೆ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳ ನಿಯೋಜನೆ ವಿಚಾರವಾಗಿ ಬೆಳಿಗ್ಗೆಯಿಂದಲೇ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಗಲಾಟೆ ಮಾಡಲು ಆರಂಭಿಸಿದರು.

ನಂತರ ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಸದನವನ್ನು ಕೆಲ ಕಾಲ ಮುಂದೂಡಿದ್ದರು. ಮತ್ತೆ ಆರಂಭವಾದ ಸದನದಲ್ಲಿ ಬಿಜೆಪಿ ಸದಸ್ಯರು ಪ್ರತಿಭಟನೆ ಹಿಂಪಡೆಯದೆ ಜೋರು ಧ್ವನಿಯಲ್ಲಿ ಸರ್ಕಾರದ ನಡೆಯನ್ನು ಖಂಡಿಸಿದರು. ಸಭಾಧ್ಯಕ್ಷರು ವಿನಂತಿಸಿಕೊಂಡರು ಪ್ರತಿಪಕ್ಷಗಳ ಸದಸ್ಯರು ತಮ್ಮ ಆಸನಗಳಿಗೆ ತೆರಳಲಿಲ್ಲ.

ಈ ವೇಳೆ ಸದನ ನಡೆಯಲು ಸಭಾಧ್ಯಕ್ಷರು ಅವಕಾಶ ಮಾಡಿಕೊಟ್ಟರು. ಬಿಜೆಪಿ ಸದಸ್ಯರ ಗಲಾಟೆ ನಡುವೆಯೇ ಎಚ್‌ ಕೆ ಪಾಟೀಲ್‌, ಕೃಷ್ಣಭೈರೇಗೌಡ ಅವರು ಐದು ವಿಧೇಯಕ ಮಂಡಿಸಿದರು. ಗಲಾಟೆ ನಡುವೆಯೇ ಐದು ಮಸೂದೆಗಳನ್ನು ಸದನದಲ್ಲಿ ಅಂಗೀಕರಿಸಲಾಯಿತು.
ಸದನದ ಬಾವಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಧರಣಿ ಹಿನ್ನೆಲೆಯಲ್ಲಿ ಭೋಜನ ವಿರಾಮ ರದ್ದುಪಡಿಸಿ ಕಲಾಪ ಮುಂದುವರಿಸಿದ ಸ್ಪೀಕರ್ ಯು ಟಿ ಖಾದರ್, ಬಳಿಕ ಸದನ ನಡೆಸುವಂತೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೂಚಿಸಿದರು. ‍ಪೀಠ ಸ್ವೀಕರಿಸಿದ ಬಳಿ ಬಜೆಟ್ ಮೇಲಿನ ಚರ್ಚೆಯನ್ನು ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮುಂದುವರಿಸಿದರು.

ಈ ವೇಳೆ ಸದನದ ಬಾವಿಯಲ್ಲಿ ಧರಣಿ ಮುಂದುವರಿಸಿದ ಬಿಜೆಪಿ ಶಾಸಕರು, ಏಕಾಏಕಿ ಮಸೂದೆಯ ಪ್ರತಿಗಳನ್ನು ಹರಿದು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮೇಲೆ ಎಸೆದರು. ಇದಕ್ಕೆ ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಕಿಡಿಕಾರಿದರು.

“ಜನಪ್ರತಿನಿಧಿಗಳಾಗಿ ಈ ರೀತಿ ವರ್ತಿಸುತ್ತಿರುವುದು ಸರಿಯಲ್ಲ. ನಿಮಗೆ ಗೌರವ ತರುವಂಥದ್ದಲ್ಲ ಎಂದು ಆಕ್ರೋಶ ಹೊರಹಾಕಿ, ಕೂಡಲೇ ಬಿಜೆಪಿ ಶಾಸಕರನ್ನು ಕಲಾಪದಿಂದ ಹೊರಹಾಕುವಂತೆ ಮಾರ್ಷಲ್‌ಗಳಿಗೆ ಸೂಚಿಸಿದರು. ಇದೇ ವೇಳೆ ಉಪ ಸ್ಪೀಕರ್‍‌ಗೆ ರಕ್ಷಣೆ ಕೊಡದ ಮಾರ್ಷಲ್‌ಗಳ ವಿರುದ್ಧ ಸಚಿವ ಕೃಷ್ಣಬೈರೇಗೌಡ ಸೇರಿದಂತೆ ಕಾಂಗ್ರೆಸ್ ಸದಸ್ಯರು ಕಿಡಿಕಾರಿದರು.

ಬಳಿಕ ಸಭೆಯನ್ನು ಮೂರು ಗಂಟೆಯವರೆಗೆ ಉಪ ಸಭಾಧ್ಯಕ್ಷರು ಮುಂದೂಡಿದರು. ಆ ಬಳಿಕವೂ ಕೆಲ ನಿಮಿಷಗಳವರೆಗೆ ಬಿಜೆಪಿ-ಕಾಂಗ್ರೆಸ್ ಶಾಸಕರ ನಡುವೆ ವಾಗ್ವಾದ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...