ರಾಜ್ಯದ 100 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸುವ ಸಾಧ್ಯತೆ: ಕೃಷಿ ಸಚಿವ

Date:

ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಸಾಧ್ಯತೆ ಇದೆ ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯಾದ್ಯಂತ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. ಆಗಸ್ಟ್ 30 ರೊಳಗೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸೆಪ್ಟೆಂಬರ್ ವೇಳೆಗೆ ಸರ್ಕಾರವು ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ” ಎಂದು ಹೇಳಿದ್ದಾರೆ.

“ಸುಮಾರು 130 ತಾಲೂಕುಗಳು ಬರಗಾಲದ ಪರಿಸ್ಥಿತಿ ಎದುರಿಸುತ್ತಿವೆ. ಬೆಳೆ ಸಮೀಕ್ಷೆ ನಡೆಸದೆ ಅವುಗಳನ್ನು ಬರಪೀಡಿತ ಎಂದು ಘೋಷಿಸಲು ಸಾಧ್ಯವಿಲ್ಲ. ಅಧಿಕಾರಿಗಳು ರಾಜ್ಯಾದ್ಯಂತ ಸಮೀಕ್ಷೆ ನಡೆಸುತ್ತಿದ್ದಾರೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

35,000 ರೈತರಿಗೆ 35.9 ಕೋಟಿ ರೂಪಾಯಿ ಬೆಳೆ ಪರಿಹಾರ

ಬೀಜ ಅಥವಾ ರಸಗೊಬ್ಬರಗಳ ಕೊರತೆಯಿಲ್ಲದಿದ್ದರೂ, ಈಗ ಮಳೆಯ ಕೊರತೆಯಿಂದ ರೈತರು ಬೆಳೆ ನಷ್ಟ ಎದುರಿಸುತ್ತಿದ್ದಾರೆ. ಜಲಾಶಯಗಳು, ಬೋರ್‌ವೆಲ್‌ಗಳು ಮತ್ತು ಕೃಷಿ ಹೊಂಡಗಳಂತಹ ನೀರಾವರಿ ಸೌಲಭ್ಯಗಳು ಇರುವಲ್ಲೆಲ್ಲ ಸಮಸ್ಯೆಗಳಿಲ್ಲ. ಮಳೆಯನ್ನೇ ಅವಲಂಬಿಸಿರುವವರು ಮಾತ್ರ ಸಂಕಷ್ಟದಲ್ಲಿದ್ದಾರೆ. ಮುಂದಿನ ವಾರದಲ್ಲಿ ಉತ್ತಮ ಮಳೆಯಾದರೆ ಕನಿಷ್ಠ ಶೇ.50ರಷ್ಟು ಬೆಳೆದ ಬೆಳೆಗಳನ್ನು ಉಳಿಸಬಹುದು. ಆದರೆ, ಅಂತಹ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ ಎಂದು ಅವರು ಹೇಳಿದ್ದಾರೆ.

”ಹಲವು ತಾಲೂಕುಗಳಲ್ಲಿ ಮಳೆ ಕೊರತೆಯಿಂದ ಬೆಳೆ ಹಾನಿಯಾಗಿದೆ. ಫಸಲ್ ಬಿಮಾ ಯೋಜನೆಯಡಿ ಬಾಗಲಕೋಟೆ, ಗದಗ, ಬೆಳಗಾವಿ ಮತ್ತು ತುಮಕೂರಿನ 194 ಗ್ರಾಮ ಪಂಚಾಯಿತಿಗಳ 35 ಸಾವಿರಕ್ಕೂ ಹೆಚ್ಚು ರೈತರಿಗೆ 35.9 ಕೋಟಿ ರೂ.ಗಳ ಪರಿಹಾರ ಸಿಗಲಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...