ಕೃಷಿ ಇಲಾಖೆಯಲ್ಲಿ ಶೀಘ್ರ 1000 ಹುದ್ದೆ ಭರ್ತಿ: ಸಚಿವ ಚಲುವರಾಯಸ್ವಾಮಿ

Date:

  • ಖಾಲಿ ಇರುವ ಸುಮಾರು ಎರಡು ಸಾವಿರ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ
  • ಬೀಜ ನಿಗಮದಲ್ಲಿ ವಿವಿಧ ಹುದ್ದೆಗೆ ನೇಮಕಗೊಂಡವರಿಗೆ ಆದೇಶ ಪ್ರತಿ ನೀಡಿದ ಸಚಿವರು

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸುಮಾರು ಎರಡು ಸಾವಿರ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೊದಲ ಹಂತಗಳಲ್ಲಿ ಕನಿಷ್ಠ 1,000 ಹುದ್ದೆ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು.

ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮದಲ್ಲಿ ವಿವಿಧ ಹುದ್ದೆಗೆ ನೇಮಕಗೊಂಡವರಿಗೆ ನೇಮಕಾತಿ ಆದೇಶ ನೀಡಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

“ಹಿಂದಿನ ಸರ್ಕಾರದಲ್ಲಿ ನೇಮಕಾತಿ ನಡೆಯಲಿಲ್ಲ. ರಾಜ್ಯದಲ್ಲಿ ಹೊಸ ಸರ್ಕಾರ ಬಂದ ನಾಲ್ಕೇ ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಬೀಜ ನಿಗಮಕ್ಕೆ 32 ಸಿಬ್ಬಂದಿ ನೇಮಕಗೊಂಡಿದ್ದು ಎಲ್ಲರಿಗೂ ನೇಮಕಾತಿ ಆದೇಶವನ್ನು ನೀಡಲಾಗುತ್ತಿದೆ. ಬರುವ ದಿನಗಳಲ್ಲಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇಮಕಾತಿ ಕ್ರಮ ವಹಿಸಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೂ ಮುನ್ನ ಸಚಿವ ಎನ್ ಚಲುವರಾಯಸ್ವಾಮಿ ಅವರು ರಾಜ್ಯ ಬೀಜ ನಿಗಮ ಹಾಗೂ
ಕರ್ನಾಟಕ ಬೀಜ ಮತ್ತು ಸಾವಯವ ಪ್ರಮಾಣದ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನಂತರ ಇಲಾಖೆಯಲ್ಲಿ ಕೈಗೊಂಡ ಸುಧಾರಣಾ ಕ್ರಮಗಳು, ಜಾರಿಗೆ ತಂದ ಹೊಸ ಯೋಜನೆಗಳನ್ನೊಳಗೊಂಡ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಅಮೆರಿಕ ಕಂಪನಿಗಳಿಂದ ರಾಜ್ಯದಲ್ಲಿ ₹25,000 ಕೋಟಿ ಹೂಡಿಕೆಗೆ ಆಸಕ್ತಿ

ಬೀಜೋತ್ಪಾದಕರ ಸಂಘವಾರು ನೋಂದಾಯಿತ ಕ್ಷೇತ್ರ ಮತ್ತು ಪ್ರಮಾಣಿಕರಿಸಿದ ದಾಸ್ತಾನು ವಿವರ, ಸಂಸ್ಥೆಯ ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ, ಪ್ರಗತಿ ಬಗ್ಗೆ ಚರ್ಚಿಸಿದ ಸಚಿವರು, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಶೀಘ್ರವಾಗಿ ನಿರ್ಮಾಣ ಮಾಡಿ ಮುಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಕೃಷಿ‌ ಆಯುಕ್ತ ವೈ.ಎಸ್.ಪಾಟೀಲ್, ಕಾರ್ಯದರ್ಶಿ ಅನ್ಬುಕುಮಾರ್, ಕೃಷಿ ನಿರ್ದೇಶಕ ಡಾ.ಜಿ.ಟಿ ಪುತ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...