120 ತಾಲ್ಲೂಕುಗಳಲ್ಲಿ ಕ್ರೀಡಾಂಗಣಗಳಿಲ್ಲ; ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯಗೆ ಮಾಹಿತಿ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.

ಹೊಸಪೇಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಾಗೂ 120 ತಾಲ್ಲೂಕುಗಳಲ್ಲಿ ತಾಲ್ಲೂಕು ಕ್ರೀಡಾಂಗಣಗಳಿಲ್ಲ. ಕಳೆದ ಐದು ವರ್ಷಗಳಲ್ಲಿ ಶೇ. 95 ರಷ್ಟು ಕಾಮಗಾರಿಗಳನ್ನು ಕೆ.ಆರ್.ಐ.ಡಿ.ಎಲ್. ಮೂಲಕ ಮಾಡುತ್ತಿದ್ದಾರೆ. ಟೆಂಡರ್‌ ಕರೆಯದೆ ಮಾಡುತ್ತಿದ್ದಾರೆ. ಎರಡು ಕೋಟಿ ಮಿತಿಯಲ್ಲಿ ಕಾಮಗಾರಿಗಳನ್ನು ಸೀಮಿತಗೊಳಿಸಿ, ಅಪೂರ್ಣವಾಗಿರುವಂತಹ ಸ್ಥಿತಿ ಬಂದಿದೆ ಎಂದು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಸಿಎಂಗೆ ತಿಳಿಸಿದರು.

ಇಲಾಖೆಯ ಕಾಮಗಾರಿಗಳ ಯೋಜನೆ ರೂಪಿಸಲು, ಮೇಲ್ವಿಚಾರಣೆಗೆ ಲೋಕೋಪಯೋಗಿ ಇಲಾಖೆಯಿಂದ ಇಬ್ಬರು ಎಂಜಿನಿಯರುಗಳ ಸೇವೆ ಪಡೆಯಬೇಕು. ಎಲ್ಲ ಕಾಮಗಾರಿಗಳನ್ನು ಟೆಂಡರ್‌ ಆಹ್ವಾನಿಸಿಯೇ ಅನುಷ್ಠಾನಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

174 ಕೋಚ್‌ಗಳ ನೇಮಕಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ವೃಂದ ಮತ್ತು ನೇಮಕಾತಿ ನಿಯಮ ಅಂತಿಮಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು. 1486 ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹಧನ ನೀಡಲಾಗಿದೆ ಎಂದು ಆಯುಕ್ತರು ತಿಳಿಸಿದರು.

ಬೆಂಗಳೂರಿನಲ್ಲಿ ಬಾಸ್ಕೆಟ್‌ ಬಾಲ್‌ ಹಾಗೂ ಮೈಸೂರಿನಲ್ಲಿ ಸೈಕ್ಲಿಂಗ್‌ ವೆಲೋಡ್ರೋಂ ಘೋಷಣೆ ಬಗ್ಗೆ ಭೂಮಿ ಗುರುತಿಸಲಾಗುತ್ತಿದೆ ಎಂದು ತಿಳಿಸಿದರು. ಕಂಠೀರವ ಕ್ರೀಡಾಂಗಣದಲ್ಲಿ ವಸ್ತುಸಂಗ್ರಹಾಲಯ ನಿರ್ಮಾಣ ಕುರಿತಂತೆ ಯಾವುದೇ ಕ್ರಮ ಆಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚಿಸಿದರು.

ಆಯವ್ಯಯದ ಘೋಷಣೆಗಳ ಕುರಿತಂತೆ ಕೂಡಲೇ ಆದೇಶ ಹೊರಡಿಸುವಂತೆ ಸೂಚಿಸಿದರು. ಪ್ರಸಕ್ತ ಆಯವ್ಯಯದ ಘೋಷಣೆಗಳಿಗೆ ಸಂಬಂಧಿಸಿದಂತೆ ಒಂಬತ್ತು ಘೋಷಣೆಗಳ ಪೈಕಿ ಎಂಟು ಘೋಷಣೆಗಳ ಕುರಿತು ಸರ್ಕಾರಿ ಆದೇಶವಾಗಿದ್ದು, ಒಂದು ಆದೇಶ ಮುಖ್ಯಮಂತ್ರಿಯವರ ಅನುಮೋದನೆಗೆ ಕಡತ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು

ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್‌, ಆಯುಕ್ತ ಶಶಿಕುಮಾರ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...