ಕಾರ್ಮಿಕರು ಇರುವ ಜಾಗಕ್ಕೆ ತೆರಳಿ ಚಿಕಿತ್ಸೆ ನೀಡುವ 135 ಸಂಚಾರಿ ಆರೋಗ್ಯ ಘಟಕ ಲೋಕಾರ್ಪಣೆ

Date:

ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ ಸರ್ಕಾರ ಕಾರ್ಮಿಕರ ಮಕ್ಕಳಿಗಾಗಿ ಉಚಿತ ಊಟ ಮತ್ತು ವಸತಿ ಶಾಲೆಗಳನ್ನು ತೆರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 ‘ಸಂಚಾರಿ ಆರೋಗ್ಯ ಘಟಕ’ ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, “ಸರ್ಕಾರದ ಸವಲತ್ತುಗಳನ್ನು ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌. ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶ ನಿರ್ಮಾತೃಗಳು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಡೀ ದೇಶ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ‌. ಸಮಾಜದಲ್ಲಿ ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲಾ ವರ್ಗದವರೂ ದುಡಿಯಬೇಕು. ಆಗ ಮಾತ್ರ ಬುದ್ದ, ಬಸವ, ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣ ಸಾಧ್ಯ” ಎಂದರು.

“ಸಚಿವ ಸಂತೋಷ್ ಲಾಡ್ ಅವರ ಕಾಳಜಿ ಮತ್ತು ಕರ್ತವ್ಯಪ್ರಜ್ಞೆಯಿಂದಾಗಿ ಉಚಿತ ಸಂಚಾರಿ ಆಸ್ಪತ್ರೆಗಳನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರ ಸೆಸ್ ಹಣದಿಂದ ಕಾರ್ಮಿಕ ಕಲ್ಯಾಣ ಮಂಡಳಿ ಸುಸಜ್ಜಿತ ಸಂಚಾರಿ ಆಸ್ಪತ್ರೆಗಳನ್ನು ಲೋಕಾರ್ಪಣೆಗೊಳಿಸಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...