ರಾಜ್ಯಕ್ಕೆ 14 ಸಾವಿರ ಕೋಟಿ ರೂ. ಪಾಲು ಕುಂಠಿತ: ಸಮರ್ಥ ವಾದ ಮಂಡನೆಗೆ ಸಲಹಾ ಸಮಿತಿ ರಚನೆ; ಸಚಿವ ಕೃಷ್ಣಬೈರೇಗೌಡ

Date:

“16ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಅಧಿಸೂಚನೆ ಹೊರಡಿಸಿದೆ. ಒಂದು ವರ್ಷಕ್ಕೆ 14 ಸಾವಿರ ಕೋಟಿ ರಾಜ್ಯಕ್ಕೆ ಬರಬೇಕಾದ ಪಾಲು ಕುಂಠಿತ ಆಗಿದೆ. ಈ ಹಿನ್ನೆಲೆಯಲ್ಲಿ ಹಣಕಾಸು ಆಯೋಗದ ಮುಂದೆ ಏನು ವಾದ ಮಂಡಿಸಬೇಕೆಂದು ಚರ್ಚೆಯಾಗಿದೆ. ಹಾಗಾಗಿ, ಸಮರ್ಥ ವಾದ ಮಂಡನೆಗೆ ಸಲಹಾ ಸಮಿತಿ ರಚನೆ ಮಾಡಲಾಗಿದೆ” ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸಂಪುಟ ಸಭೆ ನಂತರ ಮಾತನಾಡಿದ ಅವರು, “ರಾಜ್ಯದ ಪರ ಸಮರ್ಥ ವಾದ ಮಂಡನೆಗೆ ಸಲಹಾ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ. 4 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆ. ಆದರೆ, ಅದರಲ್ಲಿ ರಾಜ್ಯಕ್ಕೆ 60-70 ಸಾವಿರ ಕೋಟಿ ಮಾತ್ರ ಬರುತ್ತಿದೆ. ಒಂದು ವರ್ಷಕ್ಕೆ 14 ಸಾವಿರ ಕೋಟಿ ರಾಜ್ಯಕ್ಕೆ ಬರಬೇಕಾದ ಪಾಲು ಕುಂಠಿತ ಆಗಿದೆ. 5 ವರ್ಷದಲ್ಲಿ 62 ಸಾವಿರ ಕೋಟಿ ನಷ್ಟ ಉಂಟಾಗುತ್ತದೆ” ಎಂದು ತಿಳಿಸಿದರು.

“ಕರ್ನಾಟಕದಿಂದ ಐಟಿ-ಬಿಟಿ ಸರ್ವಿಸ್​ನಿಂದಲೇ ಬರೋಬ್ಬರಿ 3.5 ಲಕ್ಷ ಕೋಟಿ ಡಾಲರ್ ವರಮಾನ ರಫ್ತಾಗುತ್ತಿದೆ. ಆದರೆ, ಈ ದೊಡ್ಡ ಪಾಲಿನಲ್ಲಿ ಸರ್ಕಾರಕ್ಕೆ ಸೂಕ್ತ ನ್ಯಾಯ ಸಿಗುತ್ತಿಲ್ಲ ಎಂಬುದು ನಮ್ಮ ವಾದ. 14ನೇ ಹಣಕಾಸು ಆಯೋಗದ ಅವಧಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುವ ತೆರಿಗೆಯಲ್ಲಿ ಶೇ.4.71ರಷ್ಟು ಕೊಡುತ್ತಿದ್ದರು. ಇದು 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇಕಡಾ 3.4ಕ್ಕೆ ಇಳಿಕೆಯಾಗಿದೆ. ಅಂದರೆ, 100 ರೂ.ನಲ್ಲಿ 12 ರೂ.ನಷ್ಟು ಮಾತ್ರ ನಮ್ಮ ರಾಜ್ಯಕ್ಕೆ ವಾಪಸ್ ಬರುತ್ತಿದೆ” ಎಂದು ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿ ವರ್ಷ 30% ಪ್ರತಿಶತ ರಾಜ್ಯಕ್ಕೆ ಬರಬೇಕಾದ ಪಾಲು ಕಡಿತವಾಗುತ್ತಿದೆ. ತೆರಿಗೆ ಎನ್ನುವ ಬದಲು ಸೆಸ್, ಕರ ಎಂದು ಹೆಸರು ಬದಲಾಯಿಸಿ ಸಂಗ್ರಹ ಮಾಡಲಾಗುತ್ತಿದೆ. ಹಾಲಿ ಬಿಜೆಪಿ ಸರ್ಕಾರ ಬರುವ ಮೊದಲು ಸೆಸ್ ಚಾರ್ಜ್ 8 ರಿಂದ 9 ಪ್ರತಿಶತ ಇರುತ್ತಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ 23% ಸೆಸ್ ಚಾರ್ಜ್ ಆಗಿದೆ. 5 ರಿಂದ 6 ಲಕ್ಷ ಕೋಟಿ ಸೆಸ್ ಚಾರ್ಜ್ ಮೂಲಕ ಕೇಂದ್ರ ಆದಾಯ ಮಾಡುತ್ತಿದೆ. ಇದರಿಂದ ರಾಜ್ಯಕ್ಕೆ ನಮಗೆ ಸಿಗುವ ಪ್ರಮಾಣ ಕಡಿಮೆ ಆಗುತ್ತಿದೆ” ಎಂದು ಕಂದಾಯ ಸಚಿವರು ತಿಳಿಸಿದರು.

ಇದನ್ನು ಓದಿದ್ದೀರಾ? ಸಾರಿಗೆ ನಿಗಮಗಳ ₹581 ಕೋಟಿ ಮೋಟಾರು ವಾಹನ ತೆರಿಗೆ ಬಾಕಿ: ವಿನಾಯಿತಿ ನೀಡಿದ ಸಚಿವ ಸಂಪುಟ ಸಭೆ

“ಜನರಿಗೆ ಇದರಿಂದೇನೂ ಹೊರೆ ಕಡಿಮೆಯಾಗುತ್ತಿಲ್ಲ. ಕರ್ನಾಟಕ ಒಂದು ರಾಜ್ಯಕ್ಕೆ 8,200 ಕೋಟಿ ರೂ. ಸೆಸ್‌ನಿಂದಲೇ ನಷ್ಟ ಆಗುತ್ತಿದ್ದು, ತೆರಿಗೆಯನ್ನು ಕರವಾಗಿ ಪರಿವರ್ತನೆ ಮಾಡಿ ರಾಜ್ಯದ ಆದಾಯ ಖೋತಾ ಮಾಡಲಾಗಿದೆ” ಎಂದು ಕೇಂದ್ರ ಸರ್ಕಾರದ ನಡೆಯ ವಿರುದ್ದ ಸಚಿವ ಕೃಷ್ಣಬೈರೇಗೌಡ ವಾಗ್ದಾಳಿ ನಡೆಸಿದರು.

“ಸರ್ಕಾರ ರಚನೆ ಮಾಡುವ ಸಲಹಾ ಸಮಿತಿಯಲ್ಲಿ ಹಣಕಾಸು ತಜ್ಞರಾದ ಗೋವಿಂದರಾವ್, ಶ್ರೀನಿವಾಸ್ ಮೂರ್ತಿ ಮತ್ತು ನರೇಂದ್ರ ಪಾಣಿ ಸೇರಿದಂತೆ ತಜ್ಞರು ಇರಲಿದ್ದಾರೆ. 16ನೇ ಹಣಕಾಸು ಆಯೋಗದ ಮುಂದೆ ಏನು ವಾದ ಮಾಡಬೇಕು ಎಂಬ ಬಗ್ಗೆ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ” ಎಂದು ಇದೇ ವೇಳೆ ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...