ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಶಿಕ್ಷಣಕ್ಕಾಗಿ 1,488 ಕೋಟಿ ರೂ. ಮೀಸಲು: ಸಚಿವ ಜಮೀರ್ ಅಹಮದ್

Date:

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವನಾದ ನಂತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದೇನೆ. ಒಟ್ಟಾರೆ 3,200 ಕೋಟಿ ರೂ. ಸಮುದಾಯಕ್ಕೆ ಮತ್ತು 1,488 ಕೋಟಿ ರೂ. ಶಿಕ್ಷಣಕ್ಕೆ ಮೀಸಲಿಟ್ಟಿದ್ದೇವೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.

ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, “ವಿದ್ಯಾರ್ಥಿಗಳು ಶಿಕ್ಷಣದ ಕಡೆ ಹೆಚ್ಚು ಗಮನ ಹರಿಸಬೇಕು. ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಶಿಕ್ಷಣ ಹಂತಗಳಲ್ಲಿ ಉತ್ತಮ ಅಂಕದೊಂದಿಗೆ ದಾಟಿದರೆ ನಿಮಗೆ ಉತ್ತಮ ಭವಿಷ್ಯ ಸಿಗಲಿದೆ” ಎಂದು ಹೇಳಿದರು.

“ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವ್ಯಾಪ್ತಿಯ ಶಾಲೆ ಮತ್ತು ಕಾಲೇಜುಗಳಲ್ಲಿ ಗುಣಮಟ್ಟ ಶಿಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ಬೋಧಕವರ್ಗ ಗಮನ ಹರಿಸಬೇಕು. ಹಾಸ್ಟೆಲ್ ಗಳಲ್ಲಿ ಮಕ್ಕಳನ್ನು ನಿಮ್ಮ ಮಕ್ಕಳಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ತೊಂದರೆ ಕೊಡುವವರನ್ನು ಸಹಿಸುವುದಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಎಂಡಿಸಿಯ 2024-25 ನೇ ಸಾಲಿನ ಮೂರು ಹೊಸ ಯೋಜನೆಗಳಿಗೆ ಸಚಿವರು ಚಾಲನೆ ನೀಡಿ ಕೈಪಿಡಿ ಬಿಡುಗಡೆ ಮಾಡಿದರು. ಅರಿವು ಶಿಕ್ಷಣ ಯೋಜನೆಯಡಿಯಲ್ಲಿ ಪರೀಕ್ಷಾ ಪ್ರಾಧಿಕಾರದ ಜತೆ ಒಪ್ಪಂದಕ್ಕೆ ಸಹಿ ಹಾಕಿ 12 ಕೋಟಿ ರೂ. ಚೆಕ್ ಹಸ್ತಾಂತರ ಮಾಡಿದರು.

ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಪಡೆದ 54 ವಿದ್ಯಾರ್ಥಿಗಳ ಪೈಕಿ ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ. 96 ಕ್ಕಿಂತ ಹೆಚ್ಚು ಅಂಕ ಪಡೆದ 36 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ದ್ವಿಚಕ್ರ ವಾಹನ ನೀಡುವುದಾಗಿ ಸಚಿವ ಜಮೀರ್ ಅಹಮದ್ ಖಾನ್ ಘೋಷಿಸಿದರು. ಅಲ್ಪಸಂಖ್ಯಾತ ನಿರ್ದೇಶನಾಲಯ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇ.98 ಅಂಕ ಪಡೆಯುವ ವಿದ್ಯಾರ್ಥಿಗಳನ್ನು ದತ್ತು ಪಡೆದು ಉನ್ನತ ವ್ಯಾಸಂಗದ ಸಂಪೂರ್ಣ ವೆಚ್ಚ ಭರಿಸುವುದಾಗಿ ಸಚಿವರು ತಿಳಿಸಿದರು.

ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹಮದ್, ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಉರ್ದು ಅಕಾಡೆಮಿ ಅಧ್ಯಕ್ಷ ಮೊಹಮದ್ ಅಲಿ ಖಾಜಿ,‌ ಕೆ ಎಂ ಡಿಸಿ ಅಧ್ಯಕ್ಷ ಬಿಕೆ ಅಲ್ತಾಫ್ ಖಾನ್, ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ, ಸಚಿವರ ವಿಶೇಷ ಅಧಿಕಾರಿ ಸರ್ಫರಾಜ್ ಖಾನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...