ಒಂದು ರಾಷ್ಟ್ರ, ಒಂದು ಚುನಾವಣೆ; ನಾಲ್ಕು ರಾಷ್ಟ್ರೀಯ ಪಕ್ಷ ಸೇರಿದಂತೆ 15 ಪಕ್ಷಗಳ ವಿರೋಧ

Date:

‘ಒಂದು ರಾಷ್ಟ್ರ, ಒಂದು ಚುನಾವಣೆ’ ಘೋಷಣೆ ಅಡಿಯಲ್ಲಿ ದೇಶದಲ್ಲಿ ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ, ಪಂಚಾಯತ್ ಚುನಾವಣೆಗಳನ್ನು ನಡೆಸುವ ಪ್ರಸ್ತಾಪದ ವರದಿಯನ್ನು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮುರಿಗೆ ಸಲ್ಲಿಸಿದೆ.

ಮೂಲಗಳ ಪ್ರಕಾರ, ವರದಿಯು ಎಂಟು ಪರಿಚ್ಚೇದಗಳೊಂದಿಗೆ 18 ಸಾವಿರ ಪುಟಗಳನ್ನು ಒಳಗೊಂಡಿದೆ. ಸಂವಿಧಾನದ ಐದು ತಿದ್ದುಪಡಿಗಳೊಂದಿಗೆ ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವ ಬಗ್ಗೆ ಸಮಿತಿ ವಿವರಿಸಿದೆ. ಆದರೆ, ಒಂದು ರಾಷ್ಟ್ರ, ಒಂದು ಚುನಾವಣೆಗೆ ನಾಲ್ಕು ರಾಷ್ಟ್ರೀಯ ಪಕ್ಷಗಳು ಸೇರಿದಂತೆ 15 ಪಕ್ಷಗಳು ವಿರೋಧ ವ್ಯಕ್ತಪಡಿಸಿದೆ.

47 ರಾಜಕೀಯ ಪಕ್ಷಗಳ ಪೈಕಿ 32 ಪಕ್ಷಗಳು ಈ ಏಕಕಾಲದಲ್ಲಿ ಚುನಾವಣೆ ಪ್ರಸ್ತಾಪವನ್ನು ಬೆಂಬಲಿಸಿದರೆ, 15 ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಒಂದು ರಾಷ್ಟ್ರ, ಒಂದು ಚುನಾವಣೆಗೆ 32 ಪಕ್ಷಗಳು ಬೆಂಬಲಿಸಿದ್ದರೂ ಕೂಡಾ ಈ ಪೈಕಿ ಎರಡು ಮಾತ್ರ ರಾಷ್ಟ್ರೀಯ ಪಕ್ಷಗಳಾಗಿದೆ. ಒಂದು ಬಿಜೆಪಿಯಾದರೆ, ಇನ್ನೊಂದು ಎನ್‌ಡಿಎ ಕೂಟದಲ್ಲಿರುವ ಕಾನ್ರಾಡ್ ಸಂಗ್ಮಾ ನೇತೃತ್ವದ ಎನ್‌ಪಿಪಿ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿರುವ 15 ಪಕ್ಷಗಳಲ್ಲಿ ನಾಲ್ಕು ಚುನಾವಣಾ ಆಯೋಗ ಗುರುತಿಸಿರುವ ರಾಷ್ಟ್ರೀಯ ಪಕ್ಷಗಳಾಗಿವೆ. ಕಾಂಗ್ರೆಸ್, ಆಮ್‌ ಆದ್ಮಿ ಪಕ್ಷ (ಎಎಪಿ), ಬಹುಜನ ಸಮಾನ ಪಕ್ಷ (ಬಿಎಸ್‌ಪಿ) ಮತ್ತು ಸಿಪಿಐ(ಎಂ) ಏಕಕಾಲದಲ್ಲಿ ಚುನಾವಣೆ ವಿರೋಧಿಸಿರುವ ರಾಷ್ಟ್ರೀಯ ಪಕ್ಷಗಳಾಗಿದೆ.

ಈ ಸಮಿತಿಯು ಒಟ್ಟಾಗಿ 62 ರಾಜಕೀಯ ಪಕ್ಷಗಳಲ್ಲಿ ಒಂದು ದೇಶ ಒಂದು ಚುನಾವಣೆಯ ಬಗ್ಗೆ ಅಭಿಪ್ರಾಯವನ್ನು ಕೇಳಿದೆ. ಈ ಪೈಕಿ 18 ಪಕ್ಷಗಳ ನಾಯಕರುಗಳನ್ನು ಮುಖತಃ ಭೇಟಿಯಾಗಿ ಅಭಿಪ್ರಾಯ ಕೇಳಲಾಗಿದೆ.

ಬೆಂಬಲ ನೀಡಿದ ಪಕ್ಷಗಳು

ಬಿಜೆಪಿ, ಎನ್‌ಪಿಪಿ ಸೇರಿದಂತೆ ಎಐಎಡಿಎಂಕೆ, ಬಿಜೆಪಿ ಮೈತ್ರಿ ಪಕ್ಷಗಳಾದ ಆಲ್‌ ಜಾರ್ಖಾಂಡ್ ಸ್ಟೂಡೆಂಟ್ಸ್ ಯೂನಿಯನ್ (ಎಜೆಎಸ್‌ಯು), ಅಪ್ನಾ ದಳ್ (ಸೋನಿಲಾಲ್), ಅಸಾಮ್ ಗನಾ ಪರಿಷದ್, ಲೋಕ ಜನಶಕ್ತಿ ಪಕ್ಷ (ಆರ್‌), ನ್ಯಾಷನಲ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ನಾಗಾಲ್ಯಾಂಡ್), ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ, ಮಿಜೋ ನ್ಯಾಷನಲ್ ಫ್ರಂಟ್, ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ ಆಫ್ ಅಸ್ಸಾಂ, ಜೆಡಿ (ಯು), ಬಿಜು ಜನತಾ ದಳ, ಶಿವಸೇನೆ, ಅಕಾಲಿದಳ

ವಿರೋಧಿಸಿದ ಪಕ್ಷಗಳು

ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಆಮ್‌ ಆದ್ಮಿ ಪಕ್ಷ (ಎಎಪಿ), ಬಹುಜನ ಸಮಾನ ಪಕ್ಷ (ಬಿಎಸ್‌ಪಿ), ಸಿಪಿಐ (ಎಂ) ಮಾತ್ರವಲ್ಲದೆ ಎಐಯುಡಿಎಫ್, ತೃಣಮೂಲ ಕಾಂಗ್ರೆಸ್ (ಟಿಎಂಸಿ), ಎಐಎಂಐಎಂ, ಸಿಪಿಐ, ಡಿಎಂಕೆ, ನಾಗ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ).

ಪ್ರತಿಕ್ರಿಯೆ ನೀಡಿದ ಪ್ರಮುಖ ಪಕ್ಷಗಳು

ಭಾರತ ರಾಷ್ಟ್ರ ಸಮಿತಿ, ಐಯುಎಮ್‌ಎಲ್, ಜೆ&ಕೆ ನ್ಯಾಷನಲ್ ಕಾನ್ಫೆರೆನ್ಸ್, ಜೆಡಿ (ಎಸ್‌), ಜಾರ್ಖಂಡ್ ಮುಕ್ತಿ ಮೋರ್ಚಾ, ಕೇರಳ ಕಾಂಗ್ರೆಸ್ (ಎಂ), ಎನ್‌ಸಿಪಿ, ಆರ್‌ಜೆಡಿ, ಆರ್‌ಎಸ್‌ಪಿ, ಟಿಡಿಪಿ, ಆರ್‌ಎಲ್‌ಡಿ, ವೈಎಸ್‌ಆರ್‌ಸಿಪಿ

ದೆಹಲಿ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಾಧೀಶ ಅಜಿತ್ ಪ್ರಕಾಶ್ ಶಾ, ಕೋಲ್ಕತ್ತಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಾಧೀಶ ಗಿರೀಶ್ ಚಂದ್ರ ಗುಪ್ತಾ, ಮದ್ರಾಸ್ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಾಧೀಶ ಸಂಜೀವ್ ಬ್ಯಾನರ್ಜಿ ಒಂದು ದೇಶ ಒಂದು ಚುನಾವಣೆಯನ್ನು ವಿರೋಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...