15 ವರ್ಷಗಳ ಬಳಿಕ ಮತ್ತೆ ಎನ್‌ಡಿಎ ಕೂಟ ಸೇರಲು ಬಿಜೆಡಿ ಸಜ್ಜು

Date:

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟವನ್ನು ಸೇರುವ ಸುಳಿವನ್ನು ಒಡಿಶಾದಲ್ಲಿ ಆಡಳಿತದಲ್ಲಿರುವ ಬಿಜು ಜನತಾ ದಳ (ಬಿಜೆಡಿ) ನೀಡಿದೆ.

ಬುಧವಾರ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ರ ನಿವಾಸದಲ್ಲಿ ಬಿಜೆಡಿ ನಾಯಕರ ಸಭೆ ನಡೆದಿದೆ. ಈ ಸಂದರ್ಭದಲ್ಲೇ ಬಿಜೆಪಿಯ ಒಡಿಶಾ ರಾಜ್ಯ ಘಟಕದ ಮುಖ್ಯಸ್ಥ ಮನಮೋಹನ್ ಸಮಲ್ ಸೇರಿದಂತೆ ಬಿಜೆಪಿಯ ಮುಖಂಡರುಗಳು ನವದೆಹಲಿಯಲ್ಲಿ ಚುನಾವಣೆ, ಮೈತ್ರಿ ಇತರೆ ವಿಚಾರದಲ್ಲಿ ಸಭೆಯಲ್ಲಿ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.

ಸುಮಾರು 15 ವರ್ಷಗಳ ಹಿಂದೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಿಂದ (ಎನ್‌ಡಿಎ) ಬಿಜೆಡಿ ದೂರಸರಿದಿತ್ತು. ಈ ಎರಡು ಪಕ್ಷಗಳ ನಡುವಿನ ಸಂಭಾವ್ಯ ಒಪ್ಪಂದವು ರಾಜ್ಯದ ರಾಜಕೀಯದಲ್ಲಿ ಗಮನಾರ್ಹ ಬದಲಾವಣೆ ತರುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ಬಿಜೆಡಿ ಉಪಾಧ್ಯಕ್ಷ ಮತ್ತು ಶಾಸಕ ದೇಬಿ ಪ್ರಸಾದ್ ಮಿಶ್ರಾ ಈ ಬಗ್ಗೆ ಸುಳಿವು ನೀಡಿದ್ದಾರೆ. “ಒಡಿಶಾದ ಜನರ ಹಿತಾಸಕ್ತಿಗೆ ಎಂದಿಗೂ ಬಿಜು ಜನತಾ ದಳವು ಆದ್ಯತೆ ನೀಡುತ್ತದೆ. ಹೌದು, ಈ ವಿಷಯದ (ಮೈತ್ರಿ) ಬಗ್ಗೆ ಚರ್ಚೆ ನಡೆದಿದೆ,” ಎಂದು ನವೀನ್ ನಿವಾಸ್‌ನಲ್ಲಿ ನಡೆದ ಸಭೆಯ ನಂತರ ಮಿಶ್ರಾ ತಿಳಿಸಿದ್ದಾರೆ.

ಇನ್ನು “ಮುಂಬರುವ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯ ಕಾರ್ಯತಂತ್ರದ ಕುರಿತು ಇಂದು ಬಿಜೆಡಿ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದಲ್ಲಿ ಪಕ್ಷದ ಹಿರಿಯ ನಾಯಕರೊಂದಿಗೆ ಸುದೀರ್ಘ ಸಭೆ ನಡೆಸಲಾಗಿದೆ,” ಎಂದು ಬಿಜೆಡಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

“2036 ರ ವೇಳೆಗೆ ಒಡಿಶಾ ರಾಜ್ಯತ್ವದ 100 ವರ್ಷವಾಗಲಿದೆ, ಈ ಸಂದರ್ಭದಲ್ಲಿ ಬಿಜೆಡಿ ಮತ್ತು ಮುಖ್ಯಮಂತ್ರಿ ಪಟ್ನಾಯಕ್ ಸಾಧಿಸಲು ಪ್ರಮುಖ ಮೈಲಿಗಲ್ಲುಗಳಿದೆ. ಆದ್ದರಿಂದ ಬಿಜು ಜನತಾ ದಳವು ಒಡಿಶಾದ ಜನರ ಹಿತದೃಷ್ಟಿ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತದೆ,” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನೊಂದೆಡೆ ಬಿಜೆಪಿಯಲ್ಲಿ ಹಿರಿಯ ನಾಯಕ ಮತ್ತು ಸಂಸದ ಜುಯಲ್ ಓರಮ್, ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಬಿಜೆಡಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಆದರೆ ಅಂತಿಮ ನಿರ್ಧಾರ ಪಕ್ಷದ ಕೇಂದ್ರ ನಾಯಕತ್ವದ್ದು ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಉಭಯ ಪಕ್ಷಗಳು ಕೂಡಾ ಮತ್ತೆ ಮೈತ್ರಿಯ ಸುಳಿವು ನೀಡಿದೆ.

ಮೈತ್ರಿ; ಲೆಕ್ಕಾಚಾರ ಹೇಗೆ?

ಒಡಿಶಾದಲ್ಲಿ ಲೋಕಸಭಾ ಸ್ಥಾನಗಳು ಮತ್ತು 147 ವಿಧಾನಸಭಾ ಸ್ಥಾನಗಳು ಇದೆ. 2019 ರ ಚುನಾವಣೆಯಲ್ಲಿ, ಬಿಜೆಡಿ ಮತ್ತು ಬಿಜೆಪಿ ಸಂಸದೀಯ ಕ್ಷೇತ್ರದಲ್ಲಿ ಕ್ರಮವಾಗಿ 12 ಮತ್ತು 8 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಇನ್ನು ವಿಧಾನಸಭಾ ಕ್ಷೇತ್ರದಲ್ಲಿ ಕ್ರಮವಾಗಿ 112 ಮತ್ತು 23 ಕ್ಷೇತ್ರವನ್ನು ಗೆದ್ದಿದೆ. ಇನ್ನು ಮೈತ್ರಿ ಮಾತುಕತೆ ಸಫಲವಾದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಡಿ ಅಧಿಕ ಕ್ಷೇತ್ರದಲ್ಲಿ ಕಣಕ್ಕಿಳಿಯುವ ನಿರೀಕ್ಷೆಯಿದೆ.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...