ರಾಜ್ಯದಲ್ಲಿ 1,600 ಅಕ್ರಮ ಶಾಲೆಗಳು, ಪಿಯು ಕಾಲೇಜುಗಳಿವೆ: ಸಚಿವ ಮಧು ಬಂಗಾರಪ್ಪ

Date:

ರಾಜ್ಯದಲ್ಲಿ 1,600ಕ್ಕೂ ಹೆಚ್ಚು ಶಾಲೆಗಳು ಮತ್ತು ಪಿಯು ಕಾಲೇಜುಗಳು ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿವೆ. ಆ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರವು ಅವುಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಲ್ಲಿ ಎಚ್ಚರಿಕೆ ವಹಿಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಅನುಮತಿ ಪಡೆದಿರುವ ಆಡಳಿತ ಮಂಡಳಿಗಳೇ ಬೇರೆ, ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವವರೇ ಬೇರೆ. ಅಲ್ಲದೆ, ಅನುಮತಿ ಪಡೆಯುವಾಗ ಉಲ್ಲೇಖಿಸಿರುವ ವಿಳಾಸಗಳೂ ಬೇರೆ-ಬೇರೆ ಇವೆ. ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಅನುಮತಿ ಪಡೆಯುವ ನಿಯಮಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತದೆ” ಎಂದು ಹೇಳಿದ್ದಾರೆ.

“ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಶಿಕ್ಷಣಿಕ ವರ್ಷವು ಅರ್ಧ ಮುಗಿದಿರುವುದರಿಂದ ಆ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ, ತಪ್ಪು ಮಾಡಿರುವ ಸಂಸ್ಥೆಗಳಿಗೆ ತಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಸಮಯ ನೀಡಲಾಗಿದೆ. ಕ್ರಮ ಕೈಕೊಳ್ಳುವಾಗ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುತ್ತೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲಾ ಬ್ಯಾಗ್‌ಗಳ ತೂಕ ಕಡಿಮೆ ಮಾಡುವ ಬಗ್ಗೆ ಮಾತನಾಡಿದ ಅವರು, “ಪ್ರಸ್ತುತ ತೂಕಕ್ಕೆ ಹೋಲಿಸಿದರೆ 1/3ರಷ್ಟು ತೂಕವನ್ನು ಕಡಿಮೆ ಮಾಡಲು ಶಿಕ್ಷಣ ಇಲಾಖೆ ಯೋಜನೆ ರೂಪಿಸಿದೆ. 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳು 10 ಮತ್ತು 12ನೇ ತರಗತಿಗಳಲ್ಲಿ ಸಾರ್ವಜನಿಕ ಪರೀಕ್ಷೆಗಳಿಗೆ ಸಿದ್ಧರಾಗಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

ರಾಜ್ಯದಲ್ಲಿ 53,000 ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ. ಹಂತ-ಹಂತವಾಗಿ ನೇಮಕಾತಿ ಪ್ರಕ್ರಿಯೆಗಳು ನಡೆಯಲಿವೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...