₹17,836 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ; 27,067 ಉದ್ಯೋಗ ಸೃಷ್ಟಿ ನಿರೀಕ್ಷೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆ ನಡೆಯಿತು.

ಸಭೆಯಲ್ಲಿ ರಾಜ್ಯಾದ್ಯಂತ 27,067 ಉದ್ಯೋಗಗಳನ್ನು ಸೃಷ್ಟಿಸುವ ₹17,836 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದ್ದು, ಇದರಲ್ಲಿ ₹8220.05 ಕೋಟಿ ಮೊತ್ತದ 6 ಹೊಸ ಯೋಜನೆಗಳು ಮತ್ತು ₹9,615.85 ಕೋಟಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳನ್ನು ಒಳಗೊಂಡಿದೆ.

“ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ₹ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ₹ 2095 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ಫೋನ್‌ ತಯಾರಿಕಾ ಘಟಕ ಆರಂಭಿಸಲಿದೆ. ಇದರಿಂದ 21,723 ಜನರಿಗೆ ಉದ್ಯೋಗಗಳು ದೊರೆಯಲಿವೆ”ಎಂದು ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.

ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು

ರಾಜ್ಯದಲ್ಲಿ ಹೊಸದಾಗಿ ಬಂಡವಾಳ ಹೂಡಿಕೆ ಮಾಡಲಿರುವ ಒಟ್ಟು 6 ಕಂಪನಿಗಳಾದ – ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಐ.ಸಿ.ಟಿ ಸರ್ವಿಸ್ ಮ್ಯಾನೇಜ್‌ಮೆಂಟ್‌ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಏರ್ ಇಂಡಿಯಾ ಲಿಮಿಟೆಡ್‌ನ ಒಟ್ಟು ₹ 8220.05 ಕೋಟಿ ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067 ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.

ಈ ಸುದ್ದಿ ಓದಿದ್ದೀರಾ? ಒಂದು ನೆನಪು | ಲಂಕೇಶರಿಗೆ ‘ಪತ್ರಿಕೆ’ ಜೀವನ್ಮರಣದ ಪ್ರಶ್ನೆಯಾಗಿತ್ತೇ?

ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು

ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳ ಸಾಮರ್ಥ್ಯ ವಿಸ್ತರಣೆ ಉದ್ದೇಶದ ಹೆಚ್ಚುವರಿ ಹೂಡಿಕೆಯ 8 ಪ್ರಸ್ತಾವನೆಗಳಿಗೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಬಂಡವಾಳ ಹೂಡಿಕೆ ಹೆಚ್ಚಳದ ಪ್ರಸ್ತಾವನೆಗಳಲ್ಲಿ – ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್, ಆರ್‌ಬಿಎಸ್‌ಎಸ್‌ಎನ್‌ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್, ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಎಂವೆ ಫೋಟೊ ವೋಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್), ಇಂಡಿಯನ್ ಕೇನ್ ಪವರ್ ಲಿಮಿಟೆಡ್ (ಅಳಗವಾಡಿ ಬೀರೇಶ್ವರ ಷುಗರ್ಸ್ ಘಟಕ ), ಗ್ರೀನ್ಕೊ ಕೆಎ01 ಐಆರ್‍ಇಪಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಗ್ರೀನ್ಕೊ ಸೋಲಾರ್ ಎನರ್ಜಿ ಪ್ರೈವೇಟ್ ಲಿಮಿಟೆಡ್), ಅಥಣಿ ಷುಗರ್ಸ್ ಲಿಮಿಟೆಡ್, ಉಕೆಮ್ ಅಗ್ರಿ ಇನ್‌ಫ್ರಾ ಲಿಮಿಟೆಡ್ ಮತ್ತು ಸ್ನೈಡರ್ ಎಲೆಕ್ಟ್ರಿಕ್ ಐಟಿ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸೇರಿವೆ. ಇವುಗಳ ಹೆಚ್ಚುವರಿ ಹೂಡಿಕೆಯ ಮೊತ್ತವು ₹ 9,615.85 ಕೋಟಿಗಳಷ್ಟಿದೆ.

ಅಭಿವೃದ್ಧಿ ಆಯುಕ್ತೆ ಡಾ.ಶಾಲಿನಿ ರಜನೀಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...