18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವಂತೆ ಸಿಎಂಗೆ ರಾಜ್ಯಪಾಲರ ಪತ್ರ

Date:

ವಿಧಾನಸಭೆಯಲ್ಲಿ ದಾಂಧಲೆ ನಡೆಸಿ, ಗದ್ದಲ ಸೃಷ್ಟಿಸಿ ಅಮಾನತಾಗಿರುವ 18 ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸಬೇಕೆಂದು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸ್ಪೀಕರ್ ಯು ಟಿ ಖಾದರ್ ಅವರಿಗೆ ಪತ್ರ ಬರೆದಿರುವ ರಾಜ್ಯಪಾಲರು, ಅಮಾನತನ್ನು ರದ್ದುಗೊಳಿಸಲು 18 ಶಾಸಕರು ಸಲ್ಲಿಸಿರುವ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಬೇಕೆಂದು ಸಲಹೆ ನೀಡಿದ್ದಾರೆ.

ಇತ್ತೀಚೆಗೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಶಾಸಕರ ಅಮಾನತನ್ನು ಹಿಂಪಡೆಯುವಂತೆ ಸರ್ಕಾರಕ್ಕೆ ಸೂಚಿಸುವಂತೆ ಮನವಿ ಮಾಡಿತ್ತು. ಈ ಬೆನ್ನಲ್ಲೇ, ಮುಖ್ಯಮಂತ್ರಿ ಮತ್ತು ಸ್ಪೀಕರ್‌ಗೆ ರಾಜ್ಯಪಾಲರು ಪ್ರತ್ಯೇಕ ಪತ್ರಗಳನ್ನು ಬರೆದಿದ್ದಾರೆ.

“ಪ್ರಮುಖ ವಿರೋಧ ಪಕ್ಷಕ್ಕೆ ಸೇರಿದ 18 ಶಾಸಕರ ಅಮಾನತು ಆದೇಶವನ್ನು ಮರುಪರಿಶೀಲಿಸಬೇಕು. ರಾಜ್ಯದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳ ಮೂಲ ತತ್ವಗಳನ್ನು ಎತ್ತಿಹಿಡಿಯಬೇಕು. ಅದಕ್ಕಾಗಿ, ಅಮಾನತುಗೊಂಡ ಶಾಸಕರು ಮತ್ತೆ ಜನ ಪ್ರತಿನಿಧಿಗಳಾಗಿ ತಮ್ಮ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಅನುವು ಮಾಡಿಕೊಡಬೇಕು. ಅಮಾನತು ರದ್ದುಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಮಾನತು ರದ್ದತಿಯ ಕುರಿತು ಸರ್ಕಾರ ತೆಗೆದುಕೊಂಡ ನಿರ್ಧಾರ ಅಥವಾ ಕ್ರಮಗಳ ಬಗ್ಗೆ ನಮ್ಮ ಗಮನಕ್ಕೆ ತರಬಹುದು” ಎಂದೂ ರಾಜ್ಯಪಾಲರು ಪತ್ರದಲ್ಲಿ‌ ಉಲ್ಲೇಖಿಸಿದ್ದಾರೆ.

ಕಳೆದ ಮಾರ್ಚ್‌ ತಿಂಗಳಲ್ಲಿ ನಡೆದ ರಾಜ್ಯ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಶಾಸಕರು ಗದ್ದಲ ಸೃಷ್ಟಿಸಿದ್ದರು. ಅಶಿಸ್ತು ಮತ್ತು ಸ್ಪೀಕರ್‌ಗೆ ಅಗೌರವ ತೋರಿದ್ದಕ್ಕಾಗಿ 18 ಬಿಜೆಪಿ ಶಾಸಕರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿ ಮಾರ್ಚ್ 21ರಂದು ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಸಭೆಯಿಂದ ಹೊರಹೋಗಲು ನಿರಾಕರಿಸಿದ ಶಾಸಕರನ್ನು ಮಾರ್ಷಲ್‌ಗಳು ಎಳೆದೊಯ್ದು ಹೊರಹಾಕಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...