ವಾರಕ್ಕೆ ₹18 ಕೋಟಿ ವಸೂಲಿ, ಅಬಕಾರಿ ಸಚಿವ ತಿಮ್ಮಾಪುರ ಮೇಲೆ ವಿಪಕ್ಷ ನಾಯಕ ಆರ್‌ ಅಶೋಕ್‌ ಆರೋಪ

Date:

ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಈಗ ರೌಡಿಗಳೇ ನಾಚುವಂತೆ ಅಬಕಾರಿ ಸಚಿವ ಆರ್‌ ಬಿ ತಿಮ್ಮಾಪುರ ಅವರು ವಾರಕ್ಕೆ 18 ಕೋಟಿ ರೂ. ವಸೂಲಿ ಮಾಡುತ್ತಿದ್ದಾರೆ. ಅಂದರೆ ವರ್ಷಕ್ಕೆ ಸುಮಾರು 900 ಕೋಟಿ ರೂ. ಲಂಚ ಪಡೆಯಲಾಗುತ್ತಿದೆ ಎಂದು ತಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪಿಸಿದರು.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಇದನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್‌.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ ಜಾರಿ ನಿರ್ದೇಶನಾಲಯ ಕೂಡ ಕ್ರಮವಹಿಸಬೇಕು” ಎಂದು ಆಗ್ರಹಿಸಿದರು.

“ಪ್ರತಿ ಹುದ್ದೆಯ ಅಧಿಕಾರಿಗಳಿಗೆ ಎಷ್ಟು ಲಂಚ ನೀಡಲಾಗುತ್ತಿದೆ ಎಂದು ಮದ್ಯ ಮಾರಾಟಗಾರರ ಸಂಘ ಪತ್ರದಲ್ಲಿ ವಿವರಿಸಿದೆ. ಮುಖ್ಯಮಂತ್ರಿ ಕಚೇರಿಯ ಅಧಿಕಾರಿ, ಪಿಎ, ಪಿಎಸ್‌ ಪಡೆಯುತ್ತಿರುವ ಲಂಚದ ಬಗ್ಗೆಯೂ ವಿವರವಿದೆ. ಸಮಬಾಳು ಸಮಪಾಲು ಎಂಬಂತೆ ಸಚಿವ ತಿಮ್ಮಾಪುರ ಎಲ್ಲರಿಗೂ ಲಂಚ ಹಂಚಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ 40 ಪರ್ಸೆಂಟ್‌ ಎಂದು ಆರೋಪ ಮಾಡಿದ್ದರೂ ಅದಕ್ಕೆ ಸೂಕ್ತ ದಾಖಲೆ ನೀಡಿಲ್ಲ. ಈಗ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ಭಿತ್ತಿಪತ್ರ ಅಂಟಿಸುವುದಾದರೆ ನಾನು ಕೂಡ ಬರುತ್ತೇನೆ” ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮದ್ಯ ಮಾರಾಟಗಾರರು ಈ ಕಿರುಕುಳ ವಿರೋಧಿಸಿ ಒಂದು ದಿನ ಬಂದ್‌ ಮಾಡಲಿದ್ದಾರೆ. ಈ ಸರ್ಕಾರ ಆದಾಯಕ್ಕೆ ಮದ್ಯವನ್ನೇ ನಂಬಿಕೊಂಡಿದೆ. ಹೀಗೆ ಬಾರ್‌ಗಳನ್ನು ಬಂದ್‌ ಮಾಡಿದರೆ ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಲಿದೆ. ಸಿದ್ದರಾಮಯ್ಯನವರ ಬದುಕಿನ ತೆರೆದ ಪುಸ್ತಕದಲ್ಲಿ ಕಪ್ಪು ಚುಕ್ಕೆಗಳೇ ತುಂಬಿದೆ. ಅವರ ಕೈ ಕೆಳಗೆ ಕೆಲಸ ಮಾಡುವ ಪೊಲೀಸ್‌ ಅಧಿಕಾರಿಯ ಮುಂದೆ ಅವರೇ ಕುಳಿತು ತನಿಖೆ ಎದುರಿಸುವುದೆಂದರೆ ಅವರಿಗೆ ನಾಚಿಕೆಯಾಗಬೇಕು. ಇಲ್ಲಿ ತನಿಖೆಗೂ ನಿರ್ದಿಷ್ಟ ಸಮಯ ನಿಗದಿಪಡಿಸಿದ್ದು, ಇದು ಹೇಗೆ ಸಾಧ್ಯ ಎಂದು ಅಚ್ಚರಿಯಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ಅತಿರೇಕದ ಮಾತುಗಳೂ, ಕಾಂಗ್ರೆಸ್ಸಿಗರ ಕರುಣಾಜನಕ ಸ್ಥಿತಿಯೂ 

“ಬೆಳಗಾವಿಯ ಸರ್ಕಾರಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೊಬೈಲ್‌ನಲ್ಲಿ ಸಂದೇಶ ಕಳುಹಿಸಿದ್ದರು. ಆದರೂ ಹಿರಿಯ ಅಧಿಕಾರಿಗಳು ಇದನ್ನು ಕಡೆಗಣಿಸಿದ್ದಾರೆ. ಇದು ಕರುಣೆಯೇ ಇಲ್ಲದ ಸರ್ಕಾರ. ಸುಮಾರು 2 ಲಕ್ಷ ರೂ. ಲಂಚವನ್ನು ರುದ್ರಣ್ಣ ಅವರಿಂದ ಪಡೆಯಲಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಪತ್ರ ಬರೆದ ಮಾದರಿಯಲ್ಲೇ ರುದ್ರಣ್ಣ ಕೂಡ ಭ್ರಷ್ಟಾಚಾರದ ವಿರುದ್ಧ ಹೋರಾಡಿ ಎಂದು ಸಂದೇಶ ಕಳುಹಿಸಿದ್ದಾರೆ. ಪಿಎಸ್‌ಐ ಪರಶುರಾಮ್‌ ಸತ್ತ ಬಳಿಕ ಯಾರನ್ನೂ ಬಂಧನ ಮಾಡಿಲ್ಲ. ರುದ್ರಣ್ಣ ಅವರ ಪ್ರಕರಣ ಅದೇ ರೀತಿ ಆಗುವ ಸಂಭವವಿದೆ. ಮಾಜಿ ಸಚಿವ ಈಶ್ವರಪ್ಪ ಅವರ ವಿರುದ್ಧ ತೊಡೆ ತಟ್ಟಿ ಹೋರಾಡಿದ್ದ ಸಿಎಂ ಸಿದ್ದರಾಮಯ್ಯ, ಈಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಕಾಂಗ್ರೆಸ್‌ ಸರ್ಕಾರ ಬಂದ ನಂತರ ಒಳ್ಳೆಯ ಕಾಲ ಬರುತ್ತದೆ ಎಂದುಕೊಂಡಿದ್ದೆ. ಆದರೆ ಇದು ಅಧಿಕಾರಿಗಳಿಗೆ ಯಮಗಂಡ ಕಾಲ, ಗುತ್ತಿಗೆದಾರರಿಗೆ ರಾಹುಕಾಲ, ರೈತರಿಗೆ ಕೊನೆಗಾಲ, ಜನರಿಗೆ ವಿನಾಶ ಕಾಲ ಎಂಬಂತಾಗಿದೆ. ವಿಧಾನಸೌಧದ ಮುಂಭಾಗ ಸರ್ಕಾರದ ಕೆಲಸ, ದೇವರ ಕೆಲಸ ಎಂದು ಬರೆಸಲಾಗಿದೆ. ಇನ್ನು ಕಾಂಗ್ರೆಸ್‌ ಸರ್ಕಾರದ ಜೇಬು ತುಂಬುವ ಕೆಲಸ ಎಂದು ಬದಲಾಯಿಸಿಕೊಳ್ಳಲಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...