ಉತ್ತರ ಪ್ರದೇಶ SIR: ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

Date:

ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆ ನಡೆಸಿದ ಚುನಾವಣಾ ಆಯೋಗವು ಮತದಾರರ ಪಟ್ಟಿಯ ಕರಡು ಪ್ರತಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ 2.89 ಕೋಟಿಗೂ ಹೆಚ್ಚು ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶ ಚುನಾವಣಾಧಿಕಾರಿ ನವದೀಪ್ ರಿನ್ವಾ, ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ 2.89 ಕೋಟಿ ಜನರ ಪೈಕಿ 2.17 ಕೋಟಿ ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ. 46.23 ಲಕ್ಷ ಜನರು ಸಾವನ್ನಪ್ಪಿದ್ದಾರೆ. ಇದಲ್ಲದೆ, 25.47 ಲಕ್ಷ ಜನರು ನಕಲಿ ಮತದಾರರ ಗುರುತಿನ ಚೀಟಿಯನ್ನು ಹೊಂದಿದ್ದಾರೆ ಅಥವಾ ನಾಪತ್ತೆಯಾಗಿದ್ದಾರೆ.

ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಮತದಾರರ ಪಟ್ಟಿಯಿಂದ 42.74 ಲಕ್ಷ ಮತದಾರರ ಹೆಸರು ಡಿಲೀಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರಂಭದಲ್ಲಿ ಕರಡು ಮತದಾರರ ಪಟ್ಟಿಯನ್ನು ಡಿಸೆಂಬರ್ 31ರಂದು ಪ್ರಕಟಿಸಲು ನಿರ್ಧರಿಸಲಾಗಿತ್ತು. ಆದರೆ ತಡವಾಗಿ ಬಿಡುಗಡೆ ಮಾಡಲಾಗಿದೆ. ಜನವರಿ 6ರಿಂದ ಫೆಬ್ರವರಿ 6ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ. ಫೆಬ್ರವರಿ 27ರವರೆಗೆ ಆಕ್ಷೇಪಣೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ.

ಅಂತಿಮವಾಗಿ ಮಾರ್ಚ್ 6ರಂದು ಮತದಾರರ ಪಟ್ಟಿಯ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಸದ್ಯ ಎಲ್ಲಾ ಎಣಿಕೆ ನಮೂನೆಗಳನ್ನು ಸ್ವೀಕರಿಸಲಾಗಿದೆ ಮತ್ತು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬಿಹಾರದಲ್ಲಿ ಚುನಾವಣೆಗೂ ಮುನ್ನ ತರಾತುರಿಯಲ್ಲಿ ನಡೆಸಲಾದ ಎಸ್‌ಐಆರ್ ಪ್ರಕ್ರಿಯೆಯನ್ನು ಇದೀಗ 12 ರಾಜ್ಯಗಳಲ್ಲಿ ನಡೆಸಲಾಗುತ್ತಿದೆ. ಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ಗೋವಾ ಮತ್ತು ಗುಜರಾತ್, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಲಕ್ಷದ್ವೀಪದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ.

ಈ ಪೈಕಿ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ರಾಜ್ಯಗಳಲ್ಲಿ ಈ ವರ್ಷವೇ ವಿಧಾಸನಭೆ ಚುನಾವಣೆ ನಡೆಯಲಿದೆ. ಆದರೆ ವಿಪಕ್ಷಗಳು ಚುನಾವಣೆಗೂ ಮುನ್ನ ತರಾತುರಿಯಲ್ಲಿ ನಡೆಸುವ ಈ ಪ್ರಕ್ರಿಯೆಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ನಿಜವಾದ ಮತದಾರರನ್ನು ಪಟ್ಟಿಯಿಂದ ಕೈಬಿಡುವ, ಪ್ರಜಾಪ್ರಭುತ್ವದ ಹಕ್ಕನ್ನು ಕಸಿದುಕೊಳ್ಳುವ ‘ಮತಗಳ ಕಳ್ಳತನ’ ಎಂದು ವಿಪಕ್ಷಗಳು ಆರೋಪಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...