ಜಪ್ತಿಯಾದ 2 ಕೋಟಿ ರೂ. ಬಿಜೆಪಿಗೆ ವಾಪಸ್‌; ಅಧಿಕಾರಿಗಳ ಮೇಲೆ ಕೃಷ್ಣ ಬೈರೇಗೌಡ ಗರಂ

Date:

“ನಾವೂ ಹೀಗೆ ಹಣದ ಮೂಲಕ ವಹಿವಾಟು ನಡೆಸಿದರೆ ನಮ್ಮ ಎಲ್ಲಾ ವಹಿವಾಟನ್ನು ಮನ್ನಾ ಮಾಡ್ತೀರ?” ಎಂದು ಅಧಿಕಾರಿಗಳನ್ನು ಕೃಷ್ಣ ಬೈರೇಗೌಡ ಪ್ರಶ್ನಿಸಿದ್ದಾರೆ

ಬಿಜೆಪಿ ನಾಯಕರು ಅಧಿಕಾರಿಗಳನ್ನೂ ದುರುಪಯೋಗ ಪಡಿಸಿಕೊಂಡು ಇಡೀ ವ್ಯವಸ್ಥೆಯನ್ನೇ ಅವಮಾನಿಸುವ ರೀತಿ ಚುನಾವಣೆ ನಡೆಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಈ ಗೋಲ್‌ಮಾಲ್ ಪ್ರಕರಣವನ್ನು ಚುನಾವಣಾ ಅಧಿಕಾರಿಗಳು ನ್ಯಾಯಯುತ ತನಿಖೆ ನಡೆಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಚುನಾವಣಾ ಖರ್ಚಿಗಾಗಿ ಬಿಜೆಪಿ ನಾಯಕರು ಅಕ್ರಮವಾಗಿ ಸಾಗಾಟ ನಡೆಸಿದ್ದ ರೂ. 2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಶನಿವಾರ ಕಾಟನ್‌ ಪೇಟೆಯಲ್ಲಿಯಲ್ಲಿ ಸೀಜ್ ಮಾಡಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ. ಆದರೆ, ಆದಾಯ ತೆರಿಗೆ ಅಧಿಕಾರಿಗಳು ಸೀಜ್ ಮಾಡಲಾದ ಹಣಕ್ಕೆ ಕೇವಲ ನಾಲ್ಕು ಗಂಟೆಯ ಅವಧಿಯಲ್ಲಿ ಕ್ಲೀನ್ ಚಿಟ್‌ ನೀಡಿ, ಹಣವನ್ನೂ ಬಿಜೆಪಿಗೆ ಹಿಂತಿರುಗಿಸಿದೆ. ಇದು ಹೇಗೆ ಸಾಧ್ಯವಾಯಿತು?” ಎಂದು ಅವರು ಕಟು ಪ್ರಶ್ನೆಗಳನ್ನು ಮುಂದಿಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಕ್ಕಿಬಿದ್ದ ಹಣಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಿರುವ ಬಿಜೆಪಿ ಮಾರ್ಚ್‌ 27 ರಂದೇ ರೂ.5 ಕೋಟಿ ಹಣವನ್ನು ಕೆನೆರಾ ಬ್ಯಾಂಕ್‌ನಿಂದ ವಿತ್‌ಡ್ರಾ ಮಾಡಿ ಇಟ್ಟುಕೊಂಡಿರುವುದಾಗಿ ತಿಳಿಸಿದೆ. ಅಲ್ಲದೆ, ಈ ಹಣವನ್ನು ಚುನಾವಣಾ ಖರ್ಚಿಗಾಗಿ ಮೈಸೂರು, ಚಾಮರಾಜನಗರ ಹಾಗೂ ಮಂಗಳೂರಿಗೆ ಕಳುಹಿಸುತ್ತಿರುವುದಾಗಿ ಮಾಹಿತಿ ನೀಡಿದೆ. ಆದರೆ, ಈ ದಾಖಲೆಗಳು ಎಷ್ಟರ ಮಟ್ಟಿಗೆ ಸಾಚಾತನ ಹೊಂದಿವೆ. ನೀತಿ ಸಂಹಿತೆ ನಿರ್ದಿಷ್ಟಗೊಳಿಸಿರುವ ಶೇ.90ರಷ್ಟು ಹಣವನ್ನು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಈಗಾಗಲೇ ಖರ್ಚು ಮಾಡಿದ್ದು, ಈ ಬಗ್ಗೆ ಅಧಿಕಾರಿಗಳು ಕನಿಷ್ಟ ತನಿಖೆ ನಡೆಸದೆ ಹೋದದ್ದು ವಿಪರ್ಯಾಸ ಎಂದು ಅವರು ಅಸಮಾಧಾನ ಹೊರಹಾಕಿದರು.

ಅಲ್ಲದೆ, ಕಳೆದ ಒಂದು ತಿಂಗಳಿನಿಂದ ಬಿಜೆಪಿ ಒಂದು ರೂಪಾಯಿಯನ್ನೂ ಚುನಾವಣೆಗಾಗಿ ಖರ್ಚು ಮಾಡಿಲ್ಲವೇ? ಹೀಗೆ ಯಾವುದೋ ಉದ್ದೇಶಕ್ಕೆ ಬ್ಯಾಂಕಿನಿಂದ ಹಣ ಪಡೆದ ದಾಖಲೆಗಳನ್ನು ತೋರಿಸಿದಾಕ್ಷಣ ಅದರ ಸಾಚಾತನದ ಬಗ್ಗೆ ಕಿಂಚಿತ್ತೂ ತನಿಖೆ ನಡೆಸದೆ ಬೆಳಕಿನ ವೇಗದಲ್ಲಿ ಅಧಿಕಾರಿಗಳು ಹಣವನ್ನು ಹಿಂತಿರುಗಿಸಿದ್ದಾರೆ. ಹೀಗೆ ಯಾವುದೋ ದಾಖಲೆಗಳನ್ನು ತೋರಿಸಿ ಕಳ್ಳತನದಿಂದ ಸಿಕ್ಕಿಬಿದ್ದ ಹಣವನ್ನು ಬಿಡಿಸಿಕೊಳ್ಳುವುದಾದರೆ ಚುನಾವಣೆ ಪಾವಿತ್ಯ್ರತೆ ಉಳಿಯುವುದು ಹೇಗೆ ಸಾಧ್ಯ? ನಾವೂ ಹೀಗೆ ಹಣದ ಮೂಲಕ ವಹಿವಾಟು ನಡೆಸಿದರೆ ನಮ್ಮ ಎಲ್ಲಾ ವಹಿವಾಟನ್ನು ಮನ್ನಾ ಮಾಡ್ತೀರ? ಅಧಿಕಾರಿಗಳ ಇಂತಹ ವರ್ತನೆ ಚುನಾವಣೆ ಕಾನೂನು ಅಡಿ ನಡೆಯುತ್ತಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ ಎಂದರು.

ಮುಂದುವರೆದು, “ಐವತ್ತು ಸಾವಿರಕ್ಕೆ ಮೇಲ್ಪಟ್ಟ ಯಾವುದೇ ಹಣದ ವಹಿವಾಟುಗಳು ಬ್ಯಾಂಕ್ ಖಾತೆ ಅಥವಾ ಚೆಕ್ ಮೂಲಕ ನಡೆಯಬೇಕು ಎಂಬ ಕಾನೂನು ಇದೆ. ಚುನಾವಣಾ ಸಂದರ್ಭದಲ್ಲಿ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಿನ ಹಣದ ವಹಿವಾಟನ್ನು ಚೆಕ್ ಮೂಲಕವೇ ನಡೆಸಬೇಕು ಎಂಬುದನ್ನು ಚುನಾವಣಾ ನೀತಿ ಸಂಹಿತೆಯೇ ಹೇಳುತ್ತದೆ. ಆದರೆ, ಈ ವಿಚಾರ ನಮ್ಮ ಅಧಿಕಾರಿಗಳಿಗೆ ಗೊತ್ತಿಲ್ಲದೆ ಹೋದದ್ದು ದುರಾದೃಷ್ಟಕರ. ಕಾನೂನು ಉಲ್ಲಂಘಿಸಿ ಅಥವಾ ಮುಂಚಿಂತವಾಗಿಯೇ ಮಾಹಿತಿ ನೀಡದೆ ಹೀಗೆ ರೂ.2 ಕೋಟಿ ಹಣವನ್ನು ವರ್ಗಾಯಿಸುತ್ತಿರುವುದು ಮನಿ ಲಾಂಡರಿಂಗ್ ಅಲ್ಲವೇ? ಈ ಬಗ್ಗೆ ಅಧಿಕಾರಿಗಳು ಏಕೆ ಪ್ರಶ್ನಿಸುತ್ತಿಲ್ಲ. ಅಥವಾ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳ ಸಹಾಯದೊಂದಿಗೆ ಹೊಸ ಮನಿ ಲಾಂಡರಿಂಗ್ ನಡೆಸುತ್ತಿದ್ದಾರ?” ಎಂದು ಅವರು ಕಟುವಾಗಿ ಪ್ರಶ್ನಿಸಿದರು.

ಸ್ವಾಭಿಮಾನ ಕಳೆದುಕೊಂಡಿರುವ ಕೆಲವು ಅಧಿಕಾರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಬಿಜೆಪಿ ನಾಯಕರು ಅಧಿಕಾರಿಗಳನ್ನೂ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್ ಸ್ಟ್ರೈಕ್ ಆಗಿದ್ದು, ಚುನಾವಣಾ ಅಧಿಕಾರಿಗಳು ಈ ಗೋಲ್‌ಮಾಲ್ ಬಗ್ಗೆ ನ್ಯಾಯಯುತ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ದೇವೇಗೌಡರಿಗೆ ಟಾಂಗ್

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು, ಮೋದಿ ರಾಜ್ಯಕ್ಕೆ ಅಕ್ಷಯ ಪಾತ್ರೆ ನೀಡಿದ್ದಾರೆ ಎಂದು ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಕೃಷ್ಣ ಬೈರೇಗೌಡ ಅವರು, “ದೇವೇಗೌಡರ ಕುಟುಂಬ ಹೇಗಿದ್ದರೂ ಪ್ರಧಾನಿ ಜೊತೆಗೆ ತುಂಬಾ ನಿಕಟವಾಗಿದೆ. ಅಲ್ಲದೆ, ಅವರು ರಾಜ್ಯಕ್ಕೆ ಅಕ್ಷಯ ಪಾತ್ರೆ ನೀಡಿದ್ದಾರೆ ಎಂದು ಕೊಂಡಾಡುತ್ತಿದ್ದಾರೆ. ಹಾಗಾದರೆ ಆ ಅಕ್ಷಯ ಪಾತ್ರೆಯಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಕೊಡಿಸಿಬಿಡಿ” ಎಂದು ಒತ್ತಾಯಿಸಿದ್ದಾರೆ.

“ಕಳೆದ ಬಜೆಟ್‌ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ರೂ.56 ಕೋಟಿ ಘೋಷಿಸಿತ್ತು. ಈ ಪೈಕಿ ಕನಿಷ್ಟ ರೂ.500 ಕೋಟಿಯನ್ನಾದರೂ ಕೊಡಿಸಿ. ದೊಡ್ಡ ಮನಸ್ಸು ಮಾಡಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿ. ಸಮುದ್ರಕ್ಕೆ ಸೇರುವ ನೀರನ್ನು ಉಳಿಸಿ ಬೆಂಗಳೂರಿಗೆ ಕುಡಿಯುವ ನೀರನ್ನಾದರೂ ಪೂರೈಸಬಹುದು. ಮಂಡ್ಯದ ರೈತರ ಭೂಮಿಗೂ ನೀರುಣಿಸಬಹುದು” ಎಂದು ಕುಟುಕಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...