ಕಾಂಗ್ರೆಸ್ ತೊರೆದ ಎರಡು ದಿನದಲ್ಲೇ ‘ಯುಟರ್ನ್’ ಹೊಡೆದ ಹರಿಯಾಣ ಮಾಜಿ ಸಚಿವ!

Date:

ಕಾಂಗ್ರೆಸ್ ತೊರೆದ ಎರಡು ದಿನಗಳ ನಂತರ, ಹರಿಯಾಣದ ಮಾಜಿ ಸಚಿವ ಕ್ಯಾಪ್ಟನ್ ಅಜಯ್ ಸಿಂಗ್ ಯಾದವ್ ಶನಿವಾರ ಯುಟರ್ನ್ ಹೊಡೆದಿದ್ದಾರೆ. “ನಾನು ಹುಟ್ಟಿದಾಗಲೇ ಕಾಂಗ್ರೆಸ್ಸಿ, ನನ್ನ ಕೊನೆಯ ಉಸಿರು ಇರುವವರೆಗೂ ಅದೇ ಆಗಿರುತ್ತೇನೆ” ಎಂದು ಹೇಳಿಕೊಂಡಿದ್ದಾರೆ.

ಹಿಂದಿನದೆಲ್ಲವನ್ನು ಮರೆತು ತಾನು ಕಾಂಗ್ರೆಸ್‌ಗಾಗಿ ಕೆಲಸ ಮಾಡಲು ತನ್ನ ಮಗ ಮತ್ತು ಮಾಜಿ ಶಾಸಕ ಚಿರಂಜೀವ್ ರಾವ್ ಅವರು ಮನವೊಲಿಸುವಲ್ಲಿ ಮೇಲುಗೈ ಸಾಧಿಸಿದ್ದಾರೆ ಎಂದು ಅಜಯ್ ಸಿಂಗ್ ಯಾದವ್ ತಿಳಿಸಿದ್ದಾರೆ.

ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ತೊರೆದ ನಂತರ ತನ್ನನ್ನು ತುಚ್ಛವಾಗಿ ಕಾಣಲಾಗುತ್ತಿದೆ ಎಂದು ಹೇಳಿ ಯಾದವ್ ಗುರುವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಜೊತೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಇತರ ಹಿಂದುಳಿದ ವರ್ಗಗಳ (ಒಬಿಸಿ) ವಿಭಾಗದ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹರಿಯಾಣ | ಒಳಮೀಸಲಾತಿ ತಕ್ಷಣದಿಂದ ಜಾರಿ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ವಿರೋಧ

ಅದಾದ ಬಳಿಕ ನಿನ್ನೆ ಎಕ್ಸ್‌ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, “ನಾನು ಕಳೆದ 38 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸಿದ್ದೇನೆ, ಹಿಂದಿರುಗಿ ನೋಡಿಲ್ಲ. ಪಕ್ಷಕ್ಕೆ ನನ್ನ ಕೈಲಾದಷ್ಟು ಕಾರ್ಯ ಮಾಡಿದ್ದೇನೆ. ನಾನು ನನ್ನ ನಾಯಕರಾದ ದಿವಂಗತ ರಾಜೀವ್ ಗಾಂಧಿ ಜಿ ಮತ್ತು ಸೋನಿಯಾ ಗಾಂಧಿಯವರೊಂದಿಗೆ ಕೆಲಸ ಮಾಡಿದ್ದೇನೆ. ನಮ್ಮ ಕುಟುಂಬವು ನನ್ನ ತಂದೆ ದಿವಂಗತ ರಾವ್ ಅಭೇ ಸಿಂಗ್ ಅವರ ಕಾಲದಿಂದ ನೆಹರು-ಗಾಂಧಿ ಕುಟುಂಬದೊಂದಿಗೆ 1952ರಿಂದ 70 ವರ್ಷಗಳಿಗಿಂತಲೂ ಹೆಚ್ಚು ವರ್ಷಗಳ ಸುದೀರ್ಘ ಒಡನಾಟವನ್ನು ಹೊಂದಿರುವುದರಿಂದ ಅವರೊಂದಿಗೆ ನನಗಿರುವ ಪ್ರೀತಿಯನ್ನು ಮರೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

” ನಾನು ಹುಟ್ಟಿನಿಂದ ಕಾಂಗ್ರೆಸ್ಸಿಗ ಮತ್ತು ನನ್ನ ಕೊನೆಯ ಉಸಿರು ಇರುವವರೆಗೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ಒಬಿಸಿ ಇಲಾಖೆಗಾಗಿ ನಾನು ಪಟ್ಟ ಶ್ರಮವನ್ನು ಹೈಕಮಾಂಡ್ ಮೆಚ್ಚುತ್ತಿಲ್ಲ ಎಂದು ಅಸಮಾಧಾನಗೊಂಡಿದ್ದೇನೆ. ಕೆಲವು ಕಟುವಾದ ಮಾತುಗಳು ನನ್ನನ್ನು ಈ ಕಠಿಣ ಹೆಜ್ಜೆ ಇಡುವಂತೆ ಮಾಡಿದೆ. ನಾನು ಈಗ ಯೋಚಿಸಿ ಕಾಂಗ್ರೆಸ್ ಪಕ್ಷಕ್ಕೆ ವಿಶೇಷವಾಗಿ ನನ್ನ ಆಪ್ತ ಮತ್ತು ನಾಯಕಿ ಸೋನಿಯಾ ಗಾಂಧಿಗೆ ಬಲ ತುಂಬಲು ನಿರ್ಧರಿಸಿದೆ” ಎಂದು ಇನ್ನೊಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಮುಗಿದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಅಜಯ್ ಸಿಂಗ್ ಯಾದವ್ ಪುತ್ರ ಚಿರಂಜೀವ್ ರಾವ್ ಅವರು ರೇವಾರಿಯಿಂದ ಸೋತಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...