ಬಿಹಾರ| ಬಿಜೆಪಿ, ಆರ್‌ಜೆಡಿ ಕಾರ್ಯಕರ್ತರ ಘರ್ಷಣೆ; ಇಬ್ಬರು ಸಾವು, ಇಂಟರ್‌ನೆಟ್ ಸ್ಥಗಿತ

Date:

ಬಿಹಾರದ ಸರನ್ ಲೋಕಸಭಾ ಕ್ಷೇತ್ರದಲ್ಲಿ ಮೇ 21ರಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಪ್ರದೇಶದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸರನ್ ಪೊಲೀಸರು 48 ಗಂಟೆಗಳ ಕಾಲ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ಮತದಾನದ ನಂತರದ ಹಿಂಸಾಚಾರಕ್ಕೆ ಕಾರಣವಾದ ಇಬ್ಬರನ್ನು ಬಂಧಿಸಿದ್ದಾರೆ.

ಸರನ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೀವ್ ಪ್ರತಾಪ್ ರೂಡಿ ವಿರುದ್ಧ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಪುತ್ರಿ ರೋಹಿಣಿ ಆಚಾರ್ಯ ಕಣಕ್ಕಿಳಿದಿದ್ದಾರೆ. ಮೇ 20ರಂದು ಸರನ್‌ನಲ್ಲಿ ಐದನೇ ಹಂತದಲ್ಲಿ ಮತದಾನ ನಡೆದಿದ್ದು ಅಂದೇ ಉದ್ವಿಗ್ನತೆ ಉಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ| ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಇಬ್ಬರಿಗೆ ಗಾಯ

ಮತದಾನದ ವೇಳೆ, ಭಿಖಾರಿ ಠಾಕೂರ್ ಚೌಕ್‌ನಲ್ಲಿರುವ ಮತಗಟ್ಟೆ 118ಕ್ಕೆ ಭೇಟಿ ನೀಡಿದ ಆಚಾರ್ಯ ಅವರು ಕೆಲವು ಜನರೊಂದಿಗೆ ವಾಗ್ವಾದ ನಡೆಸಿದರು ಎಂದು ವರದಿಯಾಗಿದೆ. ಆಚಾರ್ಯ ಅವರು ಮತದಾರರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಕೆಲವರು ಆರೋಪಿಸಿದ್ದರು. ರೋಹಿಣಿ ಆಚಾರ್ಯ ಸ್ಥಳದಿಂದ ಹೋದ ಬಳಿಕ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಪರಸ್ಪರ ಕಲ್ಲು ತೂರಾಟ ನಡೆಸಿ ಹಲವರು ಗಾಯಗೊಂಡಿದ್ದಾರೆ.

ಮೇ 21 ರಂದು ಬೆಳಿಗ್ಗೆ, ಬಡಾ ಟೆಲ್ಪಾ ಪ್ರಾಥಮಿಕ ಶಾಲೆಯ ಬಳಿಯ ಭಿಖಾರಿ ಠಾಕೂರ್ ಚೌಕ್‌ನಲ್ಲಿ ಆರ್‌ಜೆಡಿ ಮತ್ತು ಬಿಜೆಪಿ ಬೆಂಬಲಿಗರ ನಡುವೆ ಮತ್ತ ಘರ್ಷಣೆ ಉಂಟಾಗಿದೆ. ಈ ಸಂದರ್ಭದಲ್ಲಿ ವ್ಯಕ್ತಿಯೋರ್ವ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಪಶ್ಚಿಮ ಬಂಗಾಳ ಪಂಚಾಯತ್‌ ಚುನಾವಣೆ : ಹಿಂಸಾಚಾರಕ್ಕೆ 12 ಮಂದಿ ಬಲಿ

ಗುಂಡಿನ ದಾಳಿಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಸರನ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ. ಇನ್ನೋರ್ವ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಶಿಫಾರಸು ಮಾಡಲಾಗಿದೆ. ಮೃತರನ್ನು ಚಂದನ್ ಯಾದವ್ ಮತ್ತು ಗುಡ್ಡು ರೈ ಎಂದು ಗುರುತಿಸಲಾಗಿದೆ.

“ಸೋಮವಾರ ನಡೆದ ಕಲ್ಲು ತೂರಾಟದ ಪ್ರತಿಕ್ರಿಯೆಯಾಗಿ ಕೆಲವು ಸಮಾಜವಿರೋಧಿ ಶಕ್ತಿಗಳು ಮಂಗಳವಾರದ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನಿಂದ ಗಾಯಗೊಂಡ ಮೂವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಒಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಶಾಂತಿ ಕಾಪಾಡಲು ನಾವು ಎರಡು ದಿನಗಳ ಕಾಲ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದೇವೆ” ಎಂದು ಸರನ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಗೌರವ್ ಮಂಗಳಾ ಹೇಳಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೋಹಿಣಿ ಆಚಾರ್ಯ, “ಜನರು ಗಾಬರಿಗೊಂಡಿದ್ದಾರೆ, ನಮಗೆ ನ್ಯಾಯ ಬೇಕು, ಅವರು ಬಿಜೆಪಿಯ ಗೂಂಡಾಗಳು, ಎಫ್‌ಐಆರ್ ದಾಖಲಾಗಬೇಕು. ಬೂತ್‌ಗಳಿಗೆ ಭೇಟಿ ನೀಡುವುದು ಅಭ್ಯರ್ಥಿಯಾಗಿ ನನ್ನ ಹಕ್ಕಾಗಿದ್ದು ಅದರಿಂದಾಗಿ ನಾನು ಬೂತ್‌ಗೆ ಹೋಗಿದ್ದೆ. ಅಲ್ಲಿ ಒಬ್ಬರಲ್ಲಿ ಮತ ಹಾಕಿದ್ದೀರಾ ಎಂದು ಪ್ರಶ್ನಿಸಿದೆ. ಆದರೆ ಅವರು ನನ್ನನ್ನು ನಿಂದಿಸಲು ಪ್ರಾರಂಭಿಸಿದರು ಮತ್ತು ಇಂದು ನಮ್ಮ ಪಕ್ಷದ ಕಾರ್ಯಕರ್ತನ ಕೊಲೆ ಮಾಡಲಾಗಿದೆ” ಎಂದು ಆರೋಪಿಸಿರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...