ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ. ಸಹಾಯ ಧನ: ಎಚ್‌ಡಿಕೆ

Date:

  • ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ನೇತೃತ್ವದ ಸಮಾವೇಶದಲ್ಲಿ ಘೋಷಣೆ
  • ನಮ್ಮ ಸರ್ಕಾರ ಬಂದರೆ ರಾಜ್ಯದಲ್ಲಿರುವ ಸ್ತ್ರೀ ಶಕ್ತಿ ಸಂಘಗಳ ಸಾಲ‌ ಮನ್ನಾ: ಎಚ್‌ಡಿಕೆ

ಜೆಡಿಎಸ್ ಸರ್ಕಾರ ರಾಜ್ಯದಲ್ಲಿ ಬಂದರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ. ಸಹಾಯ ಧನ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ​ಡಿ ಕುಮಾರಸ್ವಾಮಿ ಘೋಷಿಸಿದರು.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಅವರ ನೇತೃತ್ವದಲ್ಲಿ ಶಿನಿಗೇನಹಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, “ರೈತ ಮಕ್ಕಳಿಗೆ ಮದುವೆಯಾಗಲು ಹೆಣ್ಣು ಕೊಡುತ್ತಿಲ್ಲ. ಹೀಗಾಗಿ ರೈತ ಮಕ್ಕಳನ್ನು ಮದುವೆಯಾಗುದನ್ನು ಪ್ರೋತ್ಸಾಹಿಸಲು ನಾವು ಬದ್ಧರಾಗಿದ್ದೇವೆ” ಎಂದರು.

“ಹಾಗೆಯೇ ನಾವು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿರುವ ಸ್ತ್ರೀ ಶಕ್ತಿ ಸಂಘಗಳ ಸಾಲ‌ ಮನ್ನಾ ಮಾಡುತ್ತೇವೆ. ಯರಗೋಳ್ ನೀರಾವರಿ ಯೋಜನೆಗೆ ವಿಷಯುಕ್ತ ಕೆಸಿ ವ್ಯಾಲಿ ನೀರಾವರಿ ಯೋಜನೆ‌ ನೀರನ್ನು ಸೇರಿಸಲು ಹೊರಟಿದ್ದಾರೆ. ನಮ್ಮ ಸರ್ಕಾರ ಬಂದರೆ ಶುದ್ಧೀಕರಿಸಿ ಕು ಡಿಯುವ ನೀರು ಕೊಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಇದೇ ವೇಳೆ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, “ಕೆಸಿ ವ್ಯಾಲಿ ಯೋಜನೆ ಹೆಸರಿನಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಜೇಬು ತುಂಬಿಸಿಕೊಂಡಿದ್ದಾರೆ. ಆ ಹಣದಿಂದಲೇ ಅವರು ಚುನಾವಣೆಗೆ ಹೋಗುತ್ತಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೆಸ್ಸೆಸ್ ಆಸೆ ಮತ್ತು ಬಿಜೆಪಿಯ ಭ್ರಮೆ

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಟೀಕಿಸಿದ ಕುಮಾರಸ್ವಾಮಿ, “ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಹುಡುಗಾಟ ಮಾಡುತ್ತಿದೆ. ನಾವು ಅಧಿಕಾರಕ್ಕೆ ಬಂದರೆ ಮೀಸಲಾತಿ ಗೊಂದಲ ಸರಿಪಡಿಸುತ್ತೇವೆ. ಮುಸ್ಲಿಮರ ಮೀಸಲಾತಿಯನ್ನೂ ಕೂಡ ಸರಿಪಡಿಸುತ್ತೇವೆ” ಎಂದು ಭರವಸೆ ನೀಡಿದರು.

ಬೈಕ್​​ಗಳಿಗೆ ಉಚಿತ ಪೆಟ್ರೋಲ್

ಜೆಡಿಎಸ್‌ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ನೇತೃತ್ವದಲ್ಲಿ ಶಿನಿಗೇನಹಳ್ಳಿಯಲ್ಲಿ ಆಯೋಜಿಸಿದ್ದ ಸಮಾವೇಶಕ್ಕೆ ಆಗಮಿಸುವ ಜನರ ಬೈಕ್​​ಗಳಿಗೆ ಉಚಿತ ಪೆಟ್ರೋಲ್ ವ್ಯವಕಸ್ಥೆ ಕಲ್ಪಿಸಲಾಗಿತ್ತು. ಶಿನಿಗೇನಹಳ್ಳಿ ಬಳಿ ಇರುವ ರೇಣುಕಾ ಯಲ್ಲಮ್ಮ ನಯಾರ ಪೆಟ್ರೋಲ್ ಬಂಕ್​​ನಲ್ಲಿ ಪ್ರತಿ ಬೈಕ್​​ಗೆ 100 ರೂ. ಪೆಟ್ರೋಲ್​ ಉಚಿತವಾಗಿ ಹಾಕುವ ಮೂಲಕ ಸಮಾವೇಶಕ್ಕೆ ಜನರನ್ನು ಸೆಳೆಯುವ ಪ್ರಯತ್ನ ಮಾಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...