2024ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

“2024ನೇ ವರ್ಷಕ್ಕೆ ನಾವೆಲ್ಲರೂ ಕಾಲಿಡುತ್ತಿದ್ದು, ಈ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ” ಎಂದು ತಿಳಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳು ಇಂದು ಅವರನ್ನು ಭೇಟಿಯಾಗಿ ನೂತನ ವರ್ಷದ ಶುಭಾಶಯಗಳನ್ನು ಕೋರಿದ ಸಂದರ್ಭದಲ್ಲಿ ಅವರು ಮಾತನಾಡಿದರು.

“ರಾಜ್ಯದಲ್ಲಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35 ಸಾವಿರ ಕೋಟಿ ಬೆಳೆ ನಷ್ಟವಾಗಿದೆ. ಪ್ರಕೃತಿಯ ಸಹಾಯವಿಲ್ಲದಿದ್ದರೆ, ಸರ್ಕಾರ ಏನು ಪರಿಹಾರ ಕೊಟ್ಟರೂ ಸಾಕಾಗುವುದಿಲ್ಲ. ಹವಾಮಾನ ಬದಲಾವಣೆಯಿಂದಾಗಿ ಈ ವೈಪರೀತ್ಯ ಕಾಣುತ್ತಿದ್ದೇವೆ. ಮುಂಗಾರಿನಲ್ಲಿ ಒಳ್ಳೆಯ ಮಳೆಯಾಗುವ ನಿರೀಕ್ಷೆ ಇದೆ. 2024ರಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶೇ. 60ಕ್ಕೂ ಹೆಚ್ಚು ಜನ ವ್ಯವಸಾಯದ ಮೇಲೆ ಅವಲಂಬಿತರಾಗಿದ್ದಾರೆ. ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆಯಾಗಿದೆ. ಬಡವರ ಕುಟುಂಬಕ್ಕೆ ಹಣ ದೊರೆಯುತ್ತಿದ್ದು ಕೊಳ್ಳುವ ಶಕ್ತಿ ಇದೆ. ಬರಗಾಲವಿದ್ದರೂ ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಸ್ವಲ್ಪಮಟ್ಟಿಗೆ ಅದರ ತೀವ್ರತೆ ಕಡಿಮೆಯಾಗಿದೆ” ಎಂದು ಸಿಎಂ ಅಭಿಪ್ರಾಯಪಟ್ಟರು.

“ಸಾರ್ವತ್ರಿಕ ಮೂಲ ಆದಾಯದ ತತ್ವದ ತಳಹದಿಯ ಮೇಲೆ ಜನರ ಆದಾಯ ಹೆಚ್ಚಿಸಿ ಆರ್ಥಿಕ ಚಟುವಟಿಕೆಗಳಿಗೆ ಇಂಬು ದೊರೆತಿದೆ. ರಾಜ್ಯದ ಜನರ ಅಭಿವೃದ್ಧಿಗಾಗಿ ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ಸರ್ಕಾರ ಆಡಳಿತ ವರ್ಗವನ್ನು ಆಯ್ಕೆ ಮಾಡಿದೆ. ಜನಪರ, ಸಮಾಜಮುಖಿ ಧೋರಣೆ ಇದ್ದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು, ಸಂವಿಧಾನದ ಆಶಯಗಳನ್ನು ಈಡೇರಿಸಲು ಸಾಧ್ಯವಾಗುತ್ತದೆ. ಸಂವಿಧಾನ ಅರಿತು ಅದರಂತೆ ನಡೆಯಬೇಕಿದೆ. ಈ ದಿಕ್ಕಿನಲ್ಲಿ ಪ್ರಯತ್ನ ಮಾಡೋಣ. ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಬೇಕಿದೆ” ಎಂದು ಸಲಹೆ ನೀಡಿದರು.

ಇದನ್ನು ಓದಿದ್ದೀರಾ? ಅಯೋಧ್ಯೆಯಲ್ಲಿರೋದು ಬಿಜೆಪಿ ರಾಮ, ನಮ್ಮ ರಾಮ ಸಿದ್ದರಾಮಯ್ಯ: ಹೆಚ್‌. ಆಂಜನೇಯ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಜೀರ್ ಅಹ್ಮದ್ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸರ್ಕಾರದ ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಬರೆದಿರುವ ‘ಸುಸ್ಥಿರ ಬದುಕಿನ ಸುತ್ತ ಆಶಾಕಿರಣ’ ಪುಸ್ತಕವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...