ʼಗಾಂಧಿ ಗ್ರಾಮ ಪುರಸ್ಕಾರʼಕ್ಕೆ 233 ಗ್ರಾಮ ಪಂಚಾಯಿತಿ ಆಯ್ಕೆ: ಪ್ರಿಯಾಂಕ್‌ ಖರ್ಗೆ

Date:

  • ಅ.2ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ
  • 4 ಗ್ರಾಮ ಪಂಚಾಯಿತಿಗಳಿಗೆ ವಿಶೇಷ ‘ಗಾಂಧಿ ಗ್ರಾಮ ಪುರಸ್ಕಾರ’

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರತಿ ವರ್ಷ ಗಾಂಧಿ ಜಯಂತಿಯಂದು ಗ್ರಾಮ ಪಂಚಾಯತಿಗಳಿಗೆ ನೀಡುತ್ತಿರುವ ʼಗಾಂಧಿ ಗ್ರಾಮ ಪುರಸ್ಕಾರʼಗಳನ್ನು ಈ ಬಾರಿ 233 ಗ್ರಾಮ ಪಂಚಾಯಿತಿಗಳಿಗೆ ಪ್ರಕಟಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್‌ 2ರಂದು ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ ಸಭಾಂಗಣದಲ್ಲಿ ವಿತರಣೆ ಮಾಡಲಿದ್ದು, ಜೊತೆಗೆ 4 ಗ್ರಾಮ ಪಂಚಾಯಿತಿಗಳಿಗೆ ವಿಶೇಷ ‘ಗಾಂಧಿ ಗ್ರಾಮ ಪುರಸ್ಕಾರ’ ಪ್ರದಾನ ಮಾಡುವರು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

“ಪುರಸ್ಕಾರಕ್ಕೆ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲು ಕೆಲವಾರು ಮಾನದಂಡಗಳನ್ನು ಅನುಸರಿಸಲಾಗಿದೆ. ಜನರ ಗುಣಮಟ್ಟ ಸುಧಾರಣೆ; ಸಂಪನ್ಮೂಲ ಕ್ರೋಡೀಕರಣ; ಕುಡಿಯುವ ನೀರು, ಶೌಚಾಲಯ, ನೈರ್ಮಲ್ಯ, ರಸ್ತೆ, ಬೀದಿ ದೀಪಗಳ ನಿರ್ವಹಣೆ; ಮಹಿಳಾ ಸ್ವ ಸಹಾಯ ಸಂಘಗಳ ಮೂಲಕ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟ ಹಾಗೂ ಮನೆ ಮನೆಗಳಿಂದ ಘನ ತ್ಯಾಜ್ಯ ಸಂಗ್ರಹಿಸಲು ಉಪಯೋಗಿಸುವ ವಾಹನಕ್ಕೆ ಮಹಿಳಾ ಚಾಲಕರನ್ನು ನೇಮಕ ಮಾಡುವಲ್ಲಿ ಕೈಗೊಂಡಿರುವ ಕ್ರಮಗಳನ್ನು ಆಧರಿಸಿ ಪುರಸ್ಕಾರಕ್ಕೆ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯ ಜನರಿಗೆ ಒದಗಿಸಿರುವ ಮೂಲ ಸೌಕರ್ಯಗಳು ಹಾಗೂ ಸೇವೆಗಳ ಜೊತೆಗೆ ಉತ್ತಮ ಆಡಳಿತ ನೀಡುವುದನ್ನು ಸಹ ಆಯ್ಕೆಗೆ ಪರಿಗಣಿಸಲಾಗಿದ್ದು, ಬಾಪೂಜಿ ಸೇವಾ ಕೇಂದ್ರಗಳ ಮೂಲಕ ನೀಡಲಾಗುತ್ತಿರುವ ಸೇವೆಗಳ ಬಳಕೆ ಮಾಡಿಕೊಳ್ಳಲು ನೀಡುತ್ತಿರವ ಮಾರ್ಗದರ್ಶನ, ಗ್ರಾಮ ಪಂಚಾಯತಿ ಅರಿವು ಕೇಂದ್ರಗಳ ಡಿಜಿಟಲೀಕರಣ, ‘ಓದುವ ಬೆಳಕು’ ಕಾರ್ಯಕ್ರಮದ ಮೂಲಕ ಮಕ್ಕಳನ್ನು ಅರಿವು ಕೇಂದ್ರಗಳತ್ತ ಆಕರ್ಷಿಸಲು ಕೈಗೊಂಡಿರುವ ಕ್ರಮಗಳು ಸಹ ಗ್ರಾಮ ಪಂಚಾಯತಿಗಳನ್ನು ಪುರಸ್ಕಾರಕ್ಕೆ ಪರಿಗಣಿಸುವಲ್ಲಿ ಮಾರ್ಗಸೂಚಿಗಳಾಗಿವೆ” ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಬಗರ್‌ ಹುಕುಂ ಸಮಸ್ಯೆ ಬಗೆಹರಿಸಿದರಷ್ಟೇ ಅರಣ್ಯ ಒತ್ತುವರಿ ತೆರವು ಸಲೀಸು

ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ, ತಂತ್ರಾಂಶದ ಮೂಲಕ ಉತ್ತರಿಸಿದ ವಿವರಗಳಿಗನುಗುಣವಾಗಿ ಪ್ರತಿ ತಾಲ್ಲೂಕಿನಲ್ಲಿ ಹೆಚ್ಚು ಅಂಕ ಗಳಿಸಿರುವ ಐದು ಗ್ರಾಮ ಪಂಚಾಯತಿಗಳನ್ನು ಆರಿಸಿ, ಸ್ಥಳ ಪರಿಶೀಲನೆ ಹಾಗೂ ದಾಖಲಾತಿ ಪರಿಶೀಲನೆ ಮಾಡಿ, ಆಯಾ ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿನ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ತಾಲ್ಲೂಕಿಗೆ ಒಂದರಂತೆ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಸಲ್ಲಿಸಲಾಯಿತು” ಎಂದು ವಿವರಿಸಿದ್ದಾರೆ.

5 ಲಕ್ಷ ಪ್ರೋತ್ಸಾಹ ಧನ

ʼಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಆಯ್ಕೆ ಮಾಡಲಾಗಿದೆ ಆಯ್ಕೆಯಾದ ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ಪ್ರಮಾಣ ಪತ್ರ, ಸ್ಮರಣಿಕೆ ಹಾಗೂ 5 ರೂ. ಲಕ್ಷ ಪ್ರೋತ್ಸಾಹ ಧನವನ್ನು ನೀಡಿ ಗೌರವಿಸಲಾಗುತ್ತಿದೆ. 2020-2021 ಮತ್ತು 2021-22ನೆ ಸಾಲುಗಳಲ್ಲಿ ಸತತವಾಗಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ಗ್ರಾಮ ಪಂಚಾಯಿತಿಗಳು 2022-23 ನೇ ಸಾಲಿನ ಪರಿಶೀಲನೆಯಲ್ಲಿ ಪುನಃ ಮೊದಲನೆಯ ಸ್ಥಾನ ಪಡೆದ ಗ್ರಾಮ ಪಂಚಾಯಿತಿಗಳನ್ನು ವಿಶೇಷ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಆರೋಗ್ಯಕರ ಸ್ಪರ್ಧೆಯನ್ನು ಏರ್ಪಡಿಸುವ ಉದ್ದೇಶದಿಂದ 2019ರಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಪ್ರತಿ ವರ್ಷ 19ನೇ ನವೆಂಬರ್‌ ರಿಂದ 2ನೇ ಅಕ್ಟೋಬರ್‌ ವರೆಗೆ ಹಮ್ಮಿಕೊಳ್ಳಲಾಗಿದೆ” ಎಂದೂ ಸಚಿವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...