ಬಿಜೆಪಿ ಕಾರ್ಯಕರ್ತರಿಗೆ 24 ಗಂಟೆ ಕಾನೂನು ನೆರವು: ಬಿ ವೈ ವಿಜಯೇಂದ್ರ

Date:

  • ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ
  • ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ಕಂಟ್ರೋಲ್ ರೂಂ ಓಪನ್‌

ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದಬೇಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕರೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ” ಎಂದು ತಿಳಿಸಿದ್ದಾರೆ.

“ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಚೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...