ರಾಜಸ್ಥಾನ | 26 ವರ್ಷದ ಸಂಜನಾ ಜಾಟವ್ ದೇಶದ ಕಿರಿಯ ದಲಿತ ಸಂಸದೆ

Date:

ರಾಜಕೀಯ ಎಂಬುದು ನಿಂತ ನೀರಲ್ಲ, ಇಲ್ಲಿ ಯಾರೂ ಶಾಶ್ವತವಲ್ಲ ಎಂಬುದು ನಿಜ, ಆಯಾ ಕಾಲಘಟ್ಟದಲ್ಲಿ ಹೊಸ ನಾಯಕರು ಪ್ರವೇಶಿಸುತ್ತಲೇ ಇರುತ್ತಾರೆ. ಕೆಲವರು ಮರುಭೂಮಿಯಲ್ಲಿ ಓಯಸಿಸ್‌ನಂತೆ ಅಚ್ಚರಿಯಾಗಿ ಮಿಂಚಿ ಹಲವು ದಾಖಲೆಗಳಿಗೂ ಸಾಕ್ಷಿಯಾಗುತ್ತಾರೆ. ಈ ಬಾರಿಯ ಲೋಕಸಭೆಯಲ್ಲಿ ಯುವ ಸಂಸದರ ದಂಡೇ ಇದೆ. ಅದರಲ್ಲೂ ಯುವತಿಯರ ಸಂಖ್ಯೆಯೂ ಹೆಚ್ಚಿರುವುದು ಅಚ್ಚರಿಯೂ, ಹೊಸ ದಾಖಲೆಯೂ ಹೌದು.

ರಾಜಸ್ಥಾನದ ಭರತಪುರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಂಜನಾ ಜಾಟವ್‌ ಅವರು ಎದುರಾಳಿ ಬಿಜೆಪಿ ಅಭ್ಯರ್ಥಿ ರಾಮಸ್ವರೂಪ್‌ ಕೋಲಿ ವಿರುದ್ಧ 5,79,890 ಮತ ಪಡೆದು, 51,983 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಸಂಜನಾ ಪ್ರಸಕ್ತ ಲೋಕಸಭೆಗೆ ಆಯ್ಕೆಯಾದ ಅತಿ ಕಿರಿಯ ದಲಿತ ಸಂಸದೆ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ದಲಿತ ಸಮುದಾಯದ ಸಂಜನಾ ಜಾಟವ್ ಕಳೆದ ಡಿಸೆಂಬರ್‌ ತಿಂಗಳಲ್ಲಿ ನಡೆದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದು 79,000 ಸಾವಿರ ಮತ ಪಡೆದರೂ ಬಿಜೆಪಿ ಅಭ್ಯರ್ಥಿ ರಮೇಶ ಖೇಡಿ ವಿರುದ್ಧ ಕೇವಲ 409 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಆಗ ವಯಸ್ಸು ಬರೀ 25 ವರ್ಷವಾಗಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಫೀನಿಕ್ಸ್‌ನಂತೆ ಮೇಲೆದ್ದು, ಇದೀಗ ಸಂಸದೆಯಾಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2019ರಲ್ಲಿ ಪದವಿ ಮುಗಿಸಿದ ಸಂಜನಾ ಜಾಟವ್‌ ಅವರ ಪತಿ ಕಪ್ತಾನ್ ಸಿಂಗ್ ರಾಜಸ್ಥಾನ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೆಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಂಸತ್ತಿನ ಆವರಣದಲ್ಲಿರುವ ಗಾಂಧಿ, ಅಂಬೇಡ್ಕರ್, ಶಿವಾಜಿ ಪುತ್ಥಳಿ ಸ್ಥಳಾಂತರ: ಕಾಂಗ್ರೆಸ್ ಆಕ್ರೋಶ

ರಾಜಾಸ್ಥಾನದ ಒಟ್ಟು 25 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ (14), ಕಾಂಗ್ರೆಸ್ (8‌) ಕ್ಷೇತ್ರಗಳಲ್ಲಿ ಜಯ ಕಂಡಿದೆ. ಇನ್ನುಳಿದ ನಾಲ್ಕು ಕ್ಷೇತ್ರಗಳಲ್ಲಿ ಸಿಪಿಐ(ಎಂ), ರಾಷ್ಟ್ರೀಯ ಲೋಕತಾಂತ್ರಿಕ ಪಾರ್ಟಿ(ಆರ್‌ಎಲ್‌ಟಿಪಿ) ಹಾಗೂ ಭಾರತ ಆದಿವಾಸಿ ಪಾರ್ಟಿ (ಬಿಎಸಿ) ತಲಾ ಒಂದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...