28 ಸಚಿವರನ್ನು ದೆಹಲಿಗೆ ಬರಲು ವರಿಷ್ಠರು ಹೇಳಿದ್ದಾರೆ: ಗೃಹ ಸಚಿವ ಪರಮೇಶ್ವರ್

Date:

ಇದೇ 11ರಂದು ದೆಹಲಿಗೆ 28 ಸಚಿವರನ್ನು ದೆಹಲಿಗೆ ಬರಲು ವರಿಷ್ಠರು ಹೇಳಿದ್ದಾರೆ. ಒಬ್ಬೊಬ್ಬ ಸಚಿವರಿಗೆ ಒಂದೊಂದು ಲೋಕಸಭೆ ಕ್ಷೇತ್ರ ಜವಾಬ್ದಾರಿ ಕೊಟ್ಟಿದ್ದಾರೆ. ಅವರೆಲ್ಲರನ್ನೂ ಕರೆದು ಸಲಹೆ ಸೂಚನೆ ಕೊಡುತ್ತಾರೆ. ಕ್ಷೇತ್ರಕ್ಕೆ ಸಂಬಂಧಿಸಿದ ಮಾಹಿತಿ ತರಲು ಹೇಳಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದರು.

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಲೋಕಸಭೆ ‌ಚುನಾವಣೆ ಹಿನ್ನೆಲೆಯಲ್ಲಿ ಚರ್ಚೆ ಮಾಡಲು ಸಚಿವರನ್ನು ಅವರು ಆಹ್ವಾನಿಸಿದ್ದರು. ಆಗ ಕೆಲವು ಸಚಿವರು ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದಾರೆ” ಎಂದರು.

“ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಲಿ ಎಂದು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್‌ ಸುರ್ಜೇವಾಲ ಅವರಿಗೆ ಸಲಹೆ ನೀಡಿದ್ದೇವೆ. ಹೈಕಮಾಂಡ್‌ ಜೊತೆ ಈ ವಿಚಾರವಾಗಿ ಚರ್ಚಿಸುವುದಾಗಿ ಸುರ್ಜೇವಾಲ ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಹುದ್ದೆ ವಿಷಯವಾಗಿಯೇ ಚರ್ಚಿಸಲು ಅವರು ಸಭೆ ಕರೆದಿರಲಿಲ್ಲ. ಹೆಚ್ಚುವರಿ ಉಪ ಮುಖ್ಯಮಂತ್ರಿ ಮಾಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ‌. ನಾವು ಸಲಹೆ ಮಾಡಬಹುದು. ಸಲಹೆ ತೆಗೆದುಕೊಳ್ಳುವುದು, ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

“ಅಭ್ಯರ್ಥಿಗಳು, ಚುನಾವಣಾ ತಂತ್ರಗಾರಿಕೆ ಹೇಗಿರಬೇಕು ಎಂಬ ಬಗ್ಗೆ ವಿಚಾರ ವಿನಿಮಯ ಆಗಿದೆ. ನಾನು ಎರಡು ಬಾರಿ ಕೆಪಿಸಿಸಿ ಅಧ್ಯಕ್ಷನಾಗಿ ಎರಡು ಚುನಾವಣೆ ಎದುರಿಸಿದ್ದೆ. ಆ ಅನುಭವ ಹಂಚಿಕೊಂಡಿರುವೆ. ಅದು ಬಿಟ್ಟು ದೊಡ್ಡ ಪ್ರಮಾಣದ ಚರ್ಚೆ ಆಗಿಲ್ಲ” ಎಂದು ಹೇಳಿದರು.

ಸಚಿವರ ಸ್ಪರ್ಧೆ ವಿಚಾರ ಬಗ್ಗೆ ಪ್ರತಿಕ್ರಿಯಿಸಿ, “ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿಲ್ಲ. ಆದರೆ, ಸಚಿವರು ಸ್ಪರ್ಧೆ ಮಾಡುವ ಪರಿಸ್ಥಿತಿ ಬಂದರೆ ಸ್ಪರ್ಧಿಸಬೇಕಾಗುತ್ತದೆ ಎಂದು ಸುರ್ಜೇವಾಲ ಹೇಳಿದ್ದಾರೆ. ಕಳೆದ ಬಾರಿ ಕೃಷ್ಣ ಬೈರೇಗೌಡ ಅವರು ಸ್ಪರ್ಧೆ ಮಾಡಿರುವುದನ್ನು ಅವರು ಉದಾಹರಣೆ ಕೊಟ್ಟು ಹೇಳಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...