2ಎ ಮೀಸಲಾತಿ | ಮೃತ್ಯುಂಜಯ ಸ್ವಾಮೀಜಿ ನಿಯೋಗದ ಜೊತೆ ಸಿಎಂ ಸಿದ್ದರಾಮಯ್ಯ ಸಮಾಲೋಚನೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದರು.

“ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಅವರು ನಿಯೋಗಕ್ಕೆ ಭರವಸೆ ನೀಡಿದರು.

“ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು.
ಶಾಶ್ವತವಾದ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್‌ ಜನರಲ್‌, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನದ ಆಶಯದಂತೆ ಕ್ರಮ. ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು. ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸು ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು” ಎಂದು ಹೇಳಿದರು.

“ಹಿಂದಿನ ಸರ್ಕಾರ ನಿಮ್ಮ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು. 3ಬಿಯಲ್ಲಿರುವ ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಮರು ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ” ಎಂದರು.

“ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ” ಎಂದು ಸಿಎಂ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮಹಾ’ ಚುನಾವಣೆಗಾಗಿ ಒಂದಾದ ಮನುವಾದಿಗಳು, ಒಂದಾಗದ ಜಾತ್ಯತೀತರು

2ಎ ಪ್ರವರ್ಗದಡಿ ತರಲು ಒತ್ತಾಯ

ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ-3 ಬಿ ಯಲ್ಲಿದೆ. ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ. ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿಗರನ್ನು ಸೇರಿಸಬೇಕೆಂದು ನಿಯೋಗ ಒತ್ತಾಯಿಸಿತು.

ಸೂಕ್ತ ಮೀಸಲಾತಿ ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿತು.

ಪಂಚಮಸಾಲಿಗಳಿಗೆ ಮೀಸಲಾತಿ ನೀಡುವ ಸಂಬಂಧ ವರದಿ ಸಲ್ಲಿಸಲು ಜಯಪ್ರಕಾಶ್‌ ಹೆಗಡೆ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಯನ ನಡೆಸಿ, ಮಧ್ಯಂತರ ವರದಿಯನ್ನು ಸಲ್ಲಿಸಿದ್ದರೂ, ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮಧ್ಯಂತರ ವರದಿ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲು ಮನವಿ ಮಾಡಿತು.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌, ಶಿವರಾಜ ತಂಗಡಗಿ, ಶಾಸಕರಾದ ವಿನಯ್ ಕುಲಕರ್ಣಿ, ವಿಜಯ್ ಕಾಶಪ್ಪನವರ್, ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು, ಸಮುದಾಯದ 40 ಕ್ಕೂ ಹೆಚ್ಚು ಮುಖಂಡರು, ವಕೀಲರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...