2ಎ ಮೀಸಲಾತಿ | ಸಿಎಂ ಭೇಟಿಗೆ ಆಗ್ರಹಿಸಿ ಅ.18ರಂದು ಧರಣಿ: ಮೃತ್ಯುಂಜಯ ಸ್ವಾಮೀಜಿ

Date:

ಪಂಚಮಸಾಲಿ ಸಮುದಾಯಕ್ಕೆ ‘2ಎ’ ಮೀಸಲಾತಿ ನೀಡುವ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಯಾವ ಪ್ರಗತಿಯೂ ಕಂಡಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ಭೇಟಿಗಾಗಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮುದಾಯದ ಎಲ್ಲ ಪದಾಧಿಕಾರಿಗಳು ಅ.18ರಂದು ಬೆಂಗಳೂರಿನಲ್ಲಿ ಧರಣಿ ನಡೆಸಲಿದ್ದೇವೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಮೀಸಲಾತಿ ಹೋರಾಟ ಬಳಸಿಕೊಂಡು ಆಯ್ಕೆಯಾದ ನಮ್ಮ ಸಮುದಾಯದ ಕಾಂಗ್ರೆಸ್‌ನ ಶಾಸಕರು ಮೀಸಲಾತಿ ಬೇಡಿಕೆ ಈಡೇರಿಸಿ ಎಂದು ಮುಖ್ಯಮಂತ್ರಿ ಮುಂದೆ ಏಕೆ ಕೇಳುತ್ತಿಲ್ಲ ಎಂದು ಗೊತ್ತಾಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮುಖ್ಯಮಂತ್ರಿ ಭೇಟಿಗಾಗಿ ದಿನಾಂಕ ನಿಗದಿಪಡಿಸಲು ಪ್ರಯತ್ನಿಸುತ್ತಿದ್ದಾರೆ. ಅ.18ರಂದು ಬೆಂಗಳೂರಿನಲ್ಲಿ ಧರಣಿ ನಡೆಸಿದ ನಂತರವೂ ಮುಖ್ಯಮಂತ್ರಿ ಭೇಟಿಗೆ ಸಮಯ ನಿಗದಿಯಾಗದಿದ್ದರೆ ವಿಧಾನಸೌಧಕ್ಕೆ ಹೋಗಿ ಅಸಮಾಧಾನ ಹೊರಹಾಕುತ್ತೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ನಾನು ಶ್ರೀಗಳನ್ನು ಸಿ.ಎಂಗೆ ಭೇಟಿ ಮಾಡಿಸಿದ್ದೇನೆ” ಎಂಬ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಸ್ವಾಮೀಜಿ, ‘ಎಲ್ಲಿ ಭೇಟಿ ಮಾಡಿಸಿದ್ದಾರೆ’ ಎಂದು ಸುದ್ದಿಗಾರರನ್ನೇ ಮರುಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...