ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ನಡೆದ 300 ಕೋಟಿ ರೂ. ಅಕ್ರಮ ಬಿಚ್ಚಿಡುತ್ತೇವೆ: ಡಿ ಕೆ ಶಿವಕುಮಾರ್

Date:

ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು ₹300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ₹87 ಕೋಟಿ. ಎಪಿಎಂಸಿಯ ₹47 ಕೋಟಿ, 2019 ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ ₹22 ಕೋಟಿ, ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್ ಅಲ್ಲಿನ ಹಣ ಜೂನ್ 2018 ರಲ್ಲಿ ₹5 ಕೋಟಿ, ದೇವರಾಜ್ ಅರಸು ನಿಗಮದ ₹47 ಕೋಟಿ, ಮಾಲಿನ್ಯ ನಿಯಂತ್ರಣ ಮಂಡಲಿಯ ₹10 ಕೋಟಿ ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ” ಎಂದು ಆರೋಪಿಸಿದರು.

ಬಿಜೆಪಿಯ ಅಕ್ರಮಗಳನ್ನು ತನಿಖೆ ನಡೆಸುವಿರಾ ಎಂದು ಪ್ರಶ್ನಿಸಿದಾಗ “ಖಂಡಿತವಾಗಿಯೂ ತನಿಖೆ ನಡೆಸುತ್ತೇವೆ. ಆದರೆ ಎಲ್ಲವೂ ದಾಖಲೆಯಲ್ಲಿ ಇರಬೇಕು ಎನ್ನುವ ಕಾರಣಕ್ಕೆ ಸದನದಲ್ಲಿ ಎಲ್ಲ ದಾಖಲೆಗಳನ್ನು ಬಯಲು ಮಾಡುತ್ತೇವೆ. ಅಕ್ರಮಗಳ ಹಿಂದೆ ಇರುವ ಯಾವ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳು ಇದ್ದರು ಎಂದು ಜನರಿಗೆ ತಿಳಿಸುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯಮಂತ್ರಿ ಹುದ್ದೆಗೆ ₹2500 ಕೋಟಿ, ಮಂತ್ರಿ ಸ್ಥಾನಕ್ಕೆ ₹100 ಕೋಟಿ ನೀಡಬೇಕು ಎನ್ನುವ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪ ಹಾಗೂ ಭೋವಿ ನಿಗಮದ ಅಕ್ರಮದ ಬಗ್ಗೆ ಗೂಳಿಹಟ್ಟಿ ಶೇಖರ್ ಮಾಡಿದ ಆರೋಪಗಳ ಮೇಲೆ ಏಕೆ ಬಿಜೆಪಿ ತನಿಖೆ ನಡೆಸಲಿಲ್ಲ” ಎಂದು ಮರುಪ್ರಶ್ನಿಸಿದರು.

“ಯಾವುದೇ ಭ್ರಷ್ಟಾಚಾರದ ಮೇಲೆ ತನಿಖೆ ನಡೆಯುತ್ತಿದ್ದರೆ ಆ ವಿಚಾರದಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ. ಆದರೆ ನಾವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಕೊಟ್ಟು ಸದನದಲ್ಲಿ ಚರ್ಚೆ ಅವಕಾಶ ಮಾಡಿಕೊಟ್ಟಿದ್ದೇವೆ. ಅಕ್ರಮ ಎಸಗಿದ್ದರೆ ಯಾವುದೇ ಅಧಿಕಾರಿ, ಮಂತ್ರಿ, ಶಾಸಕ, ಯಾರೇ ಆಗಿರಲಿ ಅವರನ್ನು ರಕ್ಷಿಸುವ ಉದ್ದೇಶ ನಮಗಿಲ್ಲ” ಎಂದು ಹೇಳಿದರು.

“ವಾಲ್ಮೀಕಿ ನಿಗಮದ ₹86 ಕೋಟಿ ಹಣ ತೆಲಂಗಾಣಕ್ಕೆ ಅಕ್ರಮವಾಗಿ ವರ್ಗಾವಣೆಯಾದ ತನಿಖೆ ನಡೆಸಲು ಎಸ್ ಐಟಿ ರಚನೆ ಮಾಡಿದ್ದೇವೆ. ತನಿಖಾ ತಂಡವು ಸುಮಾರು 36 ಕೋಟಿಗಳಷ್ಟು ಹಣವನ್ನು ವಶಕ್ಕೆ ಪಡೆದುಕೊಂಡಿದೆ. ಬ್ಯಾಂಕ್ ಅಧಿಕಾರಿ ಒಂದೇ ದಿನದಲ್ಲಿ ಕೋಟ್ಯಂತರ ರೂಪಾಯಿ ಸಾಲ ಮಂಜೂರು ಮಾಡಿದ್ದಾನೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲು ಆಗುತ್ತದೆಯೇ? ನಾವು ಪ್ರತಿಪಕ್ಷಗಳಿಗೆ ಈ ವಿಚಾರವಾಗಿ ಉತ್ತರ ಕೊಡಬೇಕಾಗಿದೆ” ಎಂದು ಖಾರವಾಗಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...