32 ಎಎಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಪಂಜಾಬ್ ಕಾಂಗ್ರೆಸ್ ನಾಯಕ ಬಾಜ್ವಾ

Date:

32 ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರು ತನ್ನ ಸಂಪರ್ಕದಲ್ಲಿದ್ದಾರೆ. ಪಕ್ಷ ಬದಲಾಯಿಸಲು ಸಿದ್ಧರಾಗಿದ್ದಾರೆ ಎಂದು ಪಂಜಾಬ್ ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಸೋಮವಾರ ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಆಡಳಿತಾರೂಢ ಎಎಪಿಯ ರಾಜ್ಯ ಘಟಕದ ಅಧ್ಯಕ್ಷ ಅಮನ್ ಅರೋರಾ, “ಬಿಜೆಪಿ ಸೇರಲು ‘ಮುಂಗಡ ಬುಕಿಂಗ್’ ಮಾರಿಕೊಂಡಿರುವುದು ಬಾಜ್ವಾ” ಎಂದು ಹೇಳಿದ್ದಾರೆ.

ಪಂಜಾಬ್ ವಿಧಾನಸಭೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಾಜ್ವಾ, “ಮುಖ್ಯಮಂತ್ರಿ ಭಗವಂತ್ ಮಾನ್ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರನ್ನು ತೆಗೆದುಹಾಕಲು ನಿರ್ಧರಿಸಿದಾಗ, ಮಾನ್ ತಮ್ಮ ಬ್ಯಾಗ್ ಪ್ಯಾಕ್ ಮಾಡಿ ಬಿಜೆಪಿ ಸೇರುತ್ತಾರೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್‌ಗೆ ಅಪಘಾತ; ಏರ್‌ ಆ್ಯಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ ಕರೆತಂದ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತಮ್ಮ 45 ವರ್ಷಗಳ ರಾಜಕೀಯ ಅನುಭವದಲ್ಲಿ, ಎಂದಿಗೂ ಯಾವುದೇ ತಪ್ಪು ಹೇಳಿಕೆ ನೀಡಿಲ್ಲ ಎಂದು ಪ್ರತಿಪಾದಿಸಿದರು. “ಎಎಪಿ ಸರ್ಕಾರವನ್ನು ಉರುಳಿಸುವ ಉದ್ದೇಶ ಕಾಂಗ್ರೆಸ್‌ಗೆ ಇಲ್ಲ ಎಂದು ನಾವು ಮೊದಲೇ ಹೇಳಿದ್ದೆವು” ಎಂದು ಹೇಳಿದ್ದರು.

“ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ. 32 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಶಾಸಕರು ಮಾತ್ರವಲ್ಲ, ಸಚಿವರು ಸಹ ನನ್ನ ಸಂಪರ್ಕದಲ್ಲಿದ್ದಾರೆ. ಅಮನ್ ಅರೋರಾ ಅವರಿಗೂ ಈ ವಿಷಯ ತಿಳಿದಿದೆ” ಎಂದು ಬಾಜ್ವಾ ಹೇಳಿದ್ದಾರೆ.

“ಎಎಪಿ ಶಾಸಕರು ಇದು ಅವರ ಕೊನೆಯ ಅವಧಿ ಎಂದು ತಿಳಿದಿದ್ದಾರೆ. ಅವರು ಮುಂದಿನ ಚುನಾವಣೆಯಲ್ಲಿ ಟಿಕೆಟ್ ಪಡೆಯಲು ಇತರೆ ಪಕ್ಷಗಳ ಸಂಪರ್ಕದಲ್ಲಿದ್ದಾರೆ. ನಾನು ಅವರೊಂದಿಗೆ (32 ಶಾಸಕರು) ಸಂಪರ್ಕದಲ್ಲಿದ್ದೇನೆ. ಯಾರನ್ನು ತರಬೇಕು, ಯಾರು ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆ ಇದೆ ಮತ್ತು ಯಾರು ಗೆಲ್ಲುವುದಿಲ್ಲ ಎಂದು ನಾವು ನೋಡುತ್ತೇವೆ. ಅದು ಸೂಕ್ತ ಸಮಯದಲ್ಲಿ ಸಂಭವಿಸುತ್ತದೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಪಂಜಾಬ್‌ | ಎಎಪಿ ನಾಯಕ ಅನೋಕ್ ಮಿತ್ತಲ್ ಮೇಲೆ ದಾಳಿ; ಕಣ್ಣೆದುರೇ ಪತ್ನಿಯ ಕೊಲೆ

ಇನ್ನು ಭಗವಂತ್ ಮಾನ್ ಅವರನ್ನು ತರಾಟೆಗೆ ತೆಗೆದುಕೊಂಡ ಖಾಡಿಯನ್ ಶಾಸಕರು, ಸೋಮವಾರ ಇಲ್ಲಿ ಪ್ರಾರಂಭವಾದ ಪಂಜಾಬ್ ವಿಧಾನಸಭೆಯ ಎರಡು ದಿನಗಳ ಅಧಿವೇಶನದ ಮೊದಲ ದಿನದಂದು ಮುಖ್ಯಮಂತ್ರಿ ಸದನಕ್ಕೆ ಗೈರುಹಾಜರಾಗಿದ್ದರು ಎಂದು ಹೇಳಿದ್ದಾರೆ.

ಸಚಿವ ಅರೋರಾ ಅವರು ಬಾಜ್ವಾ ಹೇಳಿಕೆಗಳನ್ನು ಟೀಕಿಸಿದ್ದು ವಿರೋಧ ಪಕ್ಷದ ನಾಯಕರೇ ಬಿಜೆಪಿಗೆ ಸೇರುತ್ತಾರೆ ಎಂದು ಆರೋಪಿಸಿದರು. “ಬಾಜ್ವಾ ಬಿಜೆಪಿ ಸೇರುವುದು ಬಹುತೇಕ ಖಚಿತ. ಈಗಾಗಲೇ ಬಿಜೆಪಿ ಜೊತೆ ಮುಂಗಡ ಬುಕಿಂಗ್ ಮಾಡಿಕೊಂಡಿದ್ದಾರೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹಾಗೆಯೇ, “ಬಾಜ್ವಾ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಏನು ಮಾಡುತ್ತಿದ್ದರು? ಯಾವ ಹಿರಿಯ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದರು? ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಶ್ನಿಸಬೇಕು” ಎಂದು ಅರೋರಾ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...