ಸುಪ್ರೀಂ ಆದೇಶಕ್ಕೆ ಮಣಿದು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

Date:

ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ ಚಾಟಿ ಬೀಸಿದ ನಂತರ, ಕೇಂದ್ರವು ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಕೇಂದ್ರ ಹೊರಡಿಸಿರುವ ಸುತ್ತೋಲೆಯಲ್ಲಿ ರಾಜ್ಯಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ. ಆದರೆ, ಕರ್ನಾಟಕವು 18,174 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ ಇಟ್ಟಿತ್ತು.

ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದು, ಒಟ್ಟು 30 ಸಾವಿರ ಕೋಟಿ ರೂ. ನಷ್ಟವಾಗಿದೆ. ಎನ್‌ಡಿಆರ್‌ಎಫ್‌ ನಿಧಿಯಿಂದ ಕೇಂದ್ರವು ರಾಜ್ಯಕ್ಕೆ 18,174 ಕೋಟಿ ರೂ. ಬರ ಪರಿಹಾರ ನೀಡಬೇಕೆಂದು 2023ರ ಸೆಪ್ಟೆಂಬರ್‌ನಲ್ಲಿ ರಾಜ್ಯ ಸರ್ಕಾರ ಬೇಡಿಕೆ ಇಟ್ಟಿತ್ತು.

ಆದರೆ, ಕೇಂದ್ರ ಸರ್ಕಾರ ನಯಾ ಪೈಸೆ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಕೇಂದ್ರದ ಧೋರಣೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ವಾದವನ್ನು ಅಲಿಸಿದ್ದ ಸುಪ್ರೀಂ ಕೋರ್ಟ್‌, “ರಾಜ್ಯ ಮತ್ತು ಕೇಂದ್ರಗಳ ಸಂಬಂಧ ಉತ್ತಮವಾಗಿರಬೇಕು. ರಾಜ್ಯಗಳು ಎಲ್ಲ ವಿಷಯಗಳಿಗೂ ಸುಪ್ರೀಂ ಕೋರ್ಟ್‌ಗೆ ಬರುವಂತಾಗಬಾರದು” ಎಂದು ಕೇಂದ್ರಕ್ಕೆ ಸೂಚನೆ ನೀಡಿತ್ತು.

ಈ ಬೆನ್ನಲ್ಲೇ, ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ. ಅಲ್ಲದೆ, ನೆರೆಯ ರಾಜ್ಯ ತಮಿಳುನಾಡಿಗೆ ನೆರೆ ಪರಿಹಾರವಾಗಿ 275 ಕೋಟಿ ರೂ. ಘೋಷಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...