ಎನ್‌ಡಿಎ ಒಕ್ಕೂಟದ ಸಭೆಯಲ್ಲಿ 38 ಪಕ್ಷಗಳು ಭಾಗಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ

Date:

  • ಪ್ರತಿಪಕ್ಷಗಳು ಮತ್ತೆ ಒಗ್ಗೂಡುತ್ತಿದ್ದಂತೆಯೇ ದೆಹಲಿಯಲ್ಲಿ ತರಾತುರಿಯಲ್ಲಿ ಸಭೆ ಕರೆದ ಬಿಜೆಪಿ
  • ಕೆಲ ವರ್ಷಗಳಿಂದ ಎನ್‌ಡಿಎ ವ್ಯಾಪ್ತಿಯು ಮತ್ತಷ್ಟು ಹೆಚ್ಚಾಗಿದೆ: ಜೆ ಪಿ ನಡ್ಡಾ

ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಸಭೆಯು ನಾಳೆ ದೆಹಲಿಯಲ್ಲಿ ನಡೆಯಲಿದ್ದು, ಒಟ್ಟು 38 ಪಕ್ಷಗಳು ಭಾಗಿಯಾಗಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ತಿಳಿಸಿದ್ದಾರೆ.

ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿ ರಾಜಕೀಯ ಹಾಗೂ ನರೇಂದ್ರ ಮೋದಿ ಸರ್ಕಾರದ ಯೋಜನೆ, ನೀತಿಗಳಿಂದಾಗಿ ಎನ್‌ಡಿಎ ಕೂಟದಲ್ಲಿ ಹೆಚ್ಚಿನ ಉತ್ಸಾಹವಿದೆ ಎಂದು ಹೇಳಿದರು.

“ಕಳೆದ ಒಂಭತ್ತು ವರ್ಷಗಳಲ್ಲಿ ಮೋದಿಯವರ ಉತ್ತಮ ಆಡಳಿತದ ಪರಿಣಾಮದಿಂದಾಗಿ ಡಿಜಿಟಲ್ ಯುಗದಲ್ಲಿ ಬಹಳಷ್ಟು ದೊಡ್ಡ ಬೆಳವಣಿಗೆಗಳಾಗಿವೆ. ಪಾರದರ್ಶಕತೆಯ ಆಡಳಿತದಿಂದಾಗಿ ಸಮಾಜದ ಎಲ್ಲ ವಿಭಾಗಗಳನ್ನು ಎನ್‌ಡಿಎ ಸರ್ಕಾರ ತಲುಪಿದೆ. ಕೆಲ ವರ್ಷಗಳಿಂದ ಎನ್‌ಡಿಎ ವ್ಯಾಪ್ತಿಯು ಮತ್ತಷ್ಟು ಹೆಚ್ಚಾಗಿದೆ. ಹೀಗಾಗಿ ಮಿತ್ರಕೂಟದ ಪಕ್ಷಗಳಲ್ಲಿ ಹುಮ್ಮಸ್ಸಿದೆ. ದೇಶದ ಹಿತಕ್ಕಾಗಿ ಯಾರೆಲ್ಲ ನಮ್ಮ ಜೊತೆಗೆ ಕೈ ಜೋಡಿಸುತ್ತಾರೋ ಅವರನ್ನು ನಾವು ಸ್ವಾಗತಿಸುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಪಕ್ಷಗಳ ಸಭೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ನಡ್ಡಾ, “ವಿಪಕ್ಷಗಳ ಕೂಟದ ನಾಯಕ ಯಾರಾಗಬೇಕು ಎಂಬುದು ಅವರಿಗೆ ಬಿಟ್ಟ ವಿಚಾರ. ಈವರೆಗೆ ಅವರ ನಾಯಕ ಯಾರೂ ಅಂತಾನೇ ಗೊತ್ತಿಲ್ಲ. ನೀತಿ-ನಿಯಮ ಏನಿದೆ? ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಇದೆಯೋ ಗೊತ್ತಿಲ್ಲ. ಒಂದು ವೇಳೆ ಅವರ ನಿರ್ಧಾರಗಳ ಬಗ್ಗೆ ತಿಳಿದಾಗಲಷ್ಟೇ ನಾವು ಮಾತನಾಡುತ್ತೇವೆ. ನಾವು ನಮ್ಮ ಶಕ್ತಿಯನ್ನಷ್ಟೇ ನಂಬಿಕೊಂಡು ನಮ್ಮ ಗುರಿ ಮುಟ್ಟಲಿದ್ದೇವೆ. ಇನ್ನೊಬ್ಬರ ದೌರ್ಬಲ್ಯಗಳ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ” ಎಂದು ಜೆಪಿ ನಡ್ಡಾ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿ ವಿಪಕ್ಷಗಳ ಒಗ್ಗಟ್ಟಿನ ಸಭೆ : ಯುಪಿಎ ಹೆಸರು ಬದಲಾವಣೆ ಸಾಧ್ಯತೆ

ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿಯನ್ನು ಎದುರಿಸಲು ಬೆಂಗಳೂರಿನಲ್ಲಿ 26 ವಿರೋಧ ಪಕ್ಷಗಳು ಸಭೆ ಸೇರಿರುವ ನಡುವೆಯೇ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟವು ಈ ಸಭೆಯನ್ನು ದೆಹಲಿಯಲ್ಲಿ ಆಯೋಜಿಸಿದೆ. ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಎಲ್ಲ ರಾಜಕೀಯ ಬೆಳವಣಿಗೆಗಳು ಕುತೂಹಲ ಮೂಡಿಸಿವೆ.

ವಿರೋಧ ಪಕ್ಷಗಳನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿಯವರು ಒಬ್ಬರೇ ಸಾಕು ಎಂದು ಈ ಹಿಂದೆ ಹಲವು ಬಿಜೆಪಿ ನಾಯಕರು ಹೇಳಿಕೊಳ್ಳುತ್ತಿದ್ದರು. ಆದರೆ, ಈಗ ಮತ್ತೆ ಎನ್‌ಡಿಎ ಕೂಟವನ್ನು ಆಯೋಜಿಸುತ್ತಿರುವುದು ಕೂಡ ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...