ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ 4% ಮೀಸಲಾತಿ: ವಿಧಾನಸಭೆಯಲ್ಲಿ ಅಂಗೀಕಾರ; ಮಸೂದೆ ಪ್ರತಿ ಹರಿದು ಸ್ಪೀಕರ್‌ ಎಡೆಗೆ ಎಸೆದ ಬಿಜೆಪಿಗರು

Date:

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ನೀಡುವ ಮಸೂದೆಯು ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ. ಮಸೂದೆಯ ವಿರುದ್ಧ ವಿರೋಧ ಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಮಸೂದೆಯ ಪ್ರತಿಯನ್ನು ಹರಿದು ಸ್ಪೀಕರ್ ಯು.ಟಿ ಖಾದರ್ ಅವರ ಪೀಠದೆಡೆಗೆ ಎಸೆದಿದೆ.

ಹನಿಟ್ರ್ಯಾಪ್ ಹಗರಣದ ಕುರಿತು ವಿಧಾನಸಭೆಯಲ್ಲಿ ಬಿಜೆಪಿ ಗದ್ದಲ ಸೃಷ್ಟಿಸಿತ್ತು. ಗದ್ದಲದ ನಡುವೆಯೂ ಮಸೂದೆಯನ್ನು ಮಂಡಿಸಲಾಗಿದ್ದು, ಆಡಳಿತ ಪಕ್ಷದ ಶಾಸಕರು ಮಸೂದೆಗೆ ಸಮ್ಮತಿ ಸೂಚಿಸಿದ್ದಾರೆ. ಮಸೂದೆ ಅಂಗೀಕಾರಗೊಂಡಿದೆ. ಮಸೂದೆಯನ್ನು ‘ಅಸಂವಿಧಾನಿಕ’ ಎಂದು ಕರೆದಿರುವ ಬಿಜೆಪಿ, ಅದನ್ನು ಕಾನೂನಾತ್ಮಕವಾಗಿ ಪ್ರಶ್ನಿಸುವುದಾಗಿ ಸವಾಲು ಹಾಕಿದೆ.

ಬಿಜೆಪಿ ನಾಯಕರು ಸದನದ ಬಾವಿಗೆ ನುಗ್ಗಿ ಆಡಳಿತಾರೂಢ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಬಿಜೆಪಿಗರು ಸ್ಪೀಕರ್ ಆಸನದ ಮೇಲೆ ಹತ್ತಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಮಸೂದೆಯ ಪ್ರತಿಯನ್ನು ಹರಿದು ಸ್ಪೀಕರ್ ಮೇಲೆ ಎಸೆದಿರುವ ಘಟನೆ ನಡೆದಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಶಾಸಕ ಭರತ್ ಶೆಟ್ಟಿ ಮಾತನಾಡಿ, “ಹನಿ ಟ್ರ್ಯಾಪ್ ಹಗರಣದ ಬಗ್ಗೆ ಚರ್ಚಿಸುವ ಬದಲು, ಮುಖ್ಯಮಂತ್ರಿ ನಾಲ್ಕು ಶೇಕಡಾ ಮುಸ್ಲಿಂ ಮಸೂದೆಯನ್ನು ಮಂಡಿಸುವಲ್ಲಿ ನಿರತರಾಗಿದ್ದಾರೆ. ಆದ್ದರಿಂದ ನಾವು ಪ್ರತಿಭಟಿಸಿದೆವು. ಆಡಳಿತರೂಢ ಶಾಸಕರು ಕೂಡಾ ಪುಸ್ತಕಗಳನ್ನು ಮತ್ತು ಹರಿದ ಕಾಗದಗಳನ್ನು ಎಸೆದಿದ್ದಾರೆ; ನಾವು ಯಾರಿಗೂ ಹಾನಿ ಮಾಡಲಿಲ್ಲ.” ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರಿಗೆ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಅವಕಾಶಗಳನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಮೀಸಲಾತಿಯನ್ನು ಸಮರ್ಥಿಸಿಕೊಂಡರೆ, ವಿರೋಧ ಪಕ್ಷ ಬಿಜೆಪಿಯು ಕಾಂಗ್ರೆಸ್ ಪಕ್ಷ ತುಷ್ಟೀಕರಣ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದೆ.

ಮಸೂದೆಯ ನಿಬಂಧನೆಗಳ ಪ್ರಕಾರ, ಮುಸ್ಲಿಂ ಗುತ್ತಿಗೆದಾರರು ಸರ್ಕಾರಿ ಟೆಂಡರ್‌ಗಳಲ್ಲಿ ಶೇಕಡಾ ನಾಲ್ಕು ಕೋಟಾವನ್ನು ಪಡೆಯುತ್ತಾರೆ. ಈ ಮಸೂದೆಯು ಮುಸ್ಲಿಂ ಸಮುದಾಯ ಕೂಡಾ ಸಾರ್ವಜನಿಕ ಗುತ್ತಿಗೆಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಸ್ಪರ್ಧಿಸಲು ಅನುವು ಮಾಡಿಕೊಡುತ್ತದೆ. ಈ ಕ್ರಮವು ಸಮಗ್ರ ಅಭಿವೃದ್ಧಿ ಮತ್ತು ಸಕಾರಾತ್ಮಕ ಕ್ರಮದ ಸರ್ಕಾರದ ಬದ್ಧತೆಗೆ ಹೊಂದಿಕೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಿ ಹೇಳಿದ್ದಾರೆ.

ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರು ಹನಿ ಟ್ರ್ಯಾಪಿಂಗ್ ಬಗ್ಗೆ ಬಹಿರಂಗಪಡಿಸಿದ ನಂತರ ಶುಕ್ರವಾರ ಕರ್ನಾಟಕ ವಿಧಾನಸಭಾ ಕಲಾಪದಲ್ಲಿ ತೀವ್ರ ಗೊಂದಲ ಏರ್ಪಟ್ಟಿತ್ತು. ಹಗರಣವು ಇದೀಗ ಪ್ರಮುಖ ರಾಜಕೀಯ ಚರ್ಚೆಯಾಗಿ ಪರಿಣಮಿಸಿದ್ದು, ಬಿಜೆಪಿ ನಾಯಕರು ಸಿಡಿಗಳನ್ನು ಹಿಡಿದುಕೊಂಡು ಅವುಗಳನ್ನು ಬ್ಲ್ಯಾಕ್‌ಮೇಲ್ ಮತ್ತು ಬಲೆಗೆ ಬೀಳಿಸುವ ಸಾಧನಗಳೆಂದು ಸೂಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...