40 ಪರ್ಸೆಂಟ್ ಕಮಿಷನ್ ಈ ಸರ್ಕಾರದಲ್ಲೂ ಮುಂದುವರೆದಿದೆ: ಡಿ ಕೆಂಪಣ್ಣ ಆರೋಪ

Date:

ಈ ಹಿಂದೆ ಶಾಸಕರೇ ನೇರವಾಗಿ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದರು. ಈಗ ಅಧಿಕಾರಿಗಳು ಬೇರೆಯವರ ಹೆಸರಿನಲ್ಲಿ ಹಣ ಕೇಳುತ್ತಿದ್ದಾರೆ. ರಾಜ್ಯದಲ್ಲಿ 40 ಪರ್ಸೆಂಟ್ ಪರಿಸ್ಥಿತಿ ಮತ್ತೆ ಮುಂದುವರೆದಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಿತಿಮೀರಿದ ಭ್ರಷ್ಟಾಚಾರಿ ಅಧಿಕಾರಿಗಳಿದ್ದಾರೆ. ಈ ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಬೇರೂರಿದೆ. ಬಿಬಿಎಂಪಿ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಯಲ್ಲಿ ಭ್ರಷ್ಟ ಅಧಿಕಾರಿಗಳಿದ್ದಾರೆ. ಬಿಬಿಎಂಪಿಯಲ್ಲಿ 15 ಮಂದಿ ಭ್ರಷ್ಟ ಅಧಿಕಾರಿಗಳಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಮತ್ತು ಡಿಸಿಎಂ ಅವರ ಗಮನಕ್ಕೆ ತರುತ್ತೇವೆ” ಎಂದರು.

“ಮಾರ್ಚ್ 4ರಂದು ಅರಮನೆ ಮೈದಾನದಲ್ಲಿ ಕಾಂಟ್ರಾಕ್ಟರ್ಸ್‌ ಅಸೋಸಿಯೇಷನ್ ಸಮ್ಮೇಳನ ನಡೆಸಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರನ್ನು ಆಹ್ವಾನಿಸಲಾಗುವುದು. ಅಧಿಕಾರಿಗಳ ಭ್ರಷ್ಟಾಚಾರ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ಭೇಟಿ ಮಾಡಿ ವಿವರಿಸಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...