500 ಜನಕ್ಕೆ ಒಂದೇ ಕೊಠಡಿ, ಪತಿ-ಪುತ್ರನ ಶವ ನೋಡಬೇಕು; ಮಣಿಪುರ ಸಂತ್ರಸ್ತ ಶಿಬಿರಗಳಲ್ಲಿನ ಕರಾಳ ಅನುಭವಗಳು

Date:

ಹಿಂಸಾಚಾರ ಪೀಡಿತ ಮಣಿಪುರ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ‘ಇಂಡಿಯಾ’ ಒಕ್ಕೂಟದ 21 ವಿರೋಧ ಪಕ್ಷದ ಸಂಸದರ ನಿಯೋಗವು ಎರಡು ದಿನಗಳ ಭೇಟಿ ನೀಡಿದೆ. ಈ ಸಂದರ್ಭದಲ್ಲಿ ಕುಕಿ ಮತ್ತು ಮೀಟೀ ಸಮುದಾಯಗಳ ನಿರಾಶ್ರಿತರ ಶಿಬಿರಗಳಲ್ಲಿನ ಕರಾಳ ಅನುಭವಗಳನ್ನು ನಿಯೋಗ ಬಿಚ್ಚಿಟ್ಟಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಇಂಡಿಯಾ ನಿಯೋಗದ ಭಾಗವಾಗಿರುವ ಕಾಂಗ್ರೆಸ್ ಸಂಸದೆ ಫುಲೋದೇವಿ ನೇತಮ್, “ನಾವು ಭೇಟಿ ನೀಡಿದ ನಿರಾಶ್ರಿತ ಶಿಬಿರದ ಒಂದು ಸಭಾಂಗಣದಲ್ಲಿ 400 ರಿಂದ 500 ಜನರು ತಂಗಿದ್ದಾರೆ. ಮಣಿಪುರ ಸರ್ಕಾರ ಅವರಿಗೆ ಸೀಮಿತ ಆಹಾರ ಮಾತ್ರ ನೀಡುತ್ತಿದೆ. ಮಕ್ಕಳಿಗೆ ಸರಿಯಾದ ಆಹಾರ ನೀಡುತ್ತಿಲ್ಲ. ಸರಿಯಾದ ಶೌಚಾಲಯ ಅಥವಾ ಸ್ನಾನಗೃಹದ ಸೌಲಭ್ಯವಿಲ್ಲ. ಸಂತ್ರಸ್ತರು ಶಿಬಿರಗಳಲ್ಲಿ ವಾಸಿಸುವ ರೀತಿ ತುಂಬಾ ಹೃದಯ ವಿದ್ರಾವಕವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಮಣಿಪುರ ರಾಜ್ಯವು ಶಾಂತಿಯುತವಾಗಿದೆ ಎಂಬ ಸರ್ಕಾರದ ಹೇಳಿಕೆ ನಿಜವಾಗಿದ್ದರೆ, ಕಳೆದ ಮೂರು ತಿಂಗಳಿನಿಂದ ಪರಿಹಾರ ಶಿಬಿರಗಳನ್ನು ನಡೆಸುವ ಅಗತ್ಯವೇನು?” ಎಂದು ಫುಲೋದೇವಿ ನೇತಮ್ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಣಿಪುರ ರಾಜ್ಯಪಾಲರಾದ ಅನುಸೂಯಾ ಉಯ್ಕೆ ಅವರನ್ನು ಭೇಟಿಯಾದ ನಂತರ ಮಾತನಾಡಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, “ಎಲ್ಲ 21 ಸಂಸದರು ರಾಜ್ಯಪಾಲರಿಗೆ ಜ್ಞಾಪಕ ಪತ್ರವನ್ನು ಹಸ್ತಾಂತರಿಸಿದ ನಂತರ ಅವರು ಕೂಡ ನಮ್ಮೊಂದಿಗೆ ಮಾತನಾಡಿ ಹಿಂಸಾಚಾರ ಹಾಗೂ ಶಿಬಿರಗಳಲ್ಲಿನ ಪರಿಸ್ಥಿತಿಯ ಬಗ್ಗೆ ನೋವು ಮತ್ತು ದುಃಖವನ್ನು ವ್ಯಕ್ತಪಡಿಸಿದರು. ಮಣಿಪುರ ರಾಜ್ಯದ ಎರಡು ದಿನಗಳ ಭೇಟಿಯಲ್ಲಿ ನಾವು ಏನು ನೋಡಿದ್ದೇವೆ, ನಮಗಾದ ಅನುಭವವನ್ನು ರಾಜ್ಯಪಾಲರಿಗೆ ಹೇಳಿದ ನಂತರ ಪರಿಸ್ಥಿತಿಯ ಗಂಭೀರತೆಯನ್ನು ಅವರು ಸಹ ಅರ್ಥ ಮಾಡಿಕೊಂಡರು“ ಎಂದು ಹೇಳಿದರು.

“ನಾವು ಎಲ್ಲ ಸಮುದಾಯಗಳ ಮುಖಂಡರೊಂದಿಗೆ ಮಾತುಕತೆ ನಡೆಸಿ ಪರಿಹಾರವನ್ನು ಕಂಡುಕೊಳ್ಳೋಣ ಎಂದು ಮಣಿಪುರ ರಾಜ್ಯಪಾಲರು ಸಲಹೆ ನೀಡಿದರು. ಒಟ್ಟಾಗಿ ಮಣಿಪುರಕ್ಕೆ ಸರ್ವಪಕ್ಷ ನಿಯೋಗವನ್ನು ಕಳುಹಿಸಬೇಕು ಮತ್ತು ಎಲ್ಲ ಸಮುದಾಯಗಳ ಮುಖಂಡರೊಂದಿಗೆ ಮಾತನಾಡಬೇಕು. ಇದರಿಂದ ಜನರಲ್ಲಿರುವ ಅಪನಂಬಿಕೆಯನ್ನು ಪರಿಹರಿಸಲು ಸಾಧ್ಯವಾಗುತ್ತದೆ ಎಂದು ಅನುಸೂಯಾ ಉಯ್ಕೆ ತಿಳಿಸಿರುವುದಾಗಿ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಣಿಪುರ ಹಿಂಸಾಚಾರ | ಪ್ರತೀಕಾರ ಕ್ರಮವಾಗಿ ಅತ್ಯಾಚಾರ; ಬಯಲಿಗೆ ಬಾರದ ನೂರಾರು ಪ್ರಕರಣಗಳು

ಪತಿ, ಪುತ್ರನ ಮೃತದೇಹಗಳನ್ನು ನೋಡಬೇಕು

ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯೆ ಸುಶ್ಮಿತಾ ದೇವ್ ಮಾತನಾಡಿ, “ಈಶಾನ್ಯ ರಾಜ್ಯಗಳಿಂದ ಬಂದವರು ಸಂಸತ್ತಿನಲ್ಲಿ ನಮ್ಮನ್ನು ಮರೆತುಬಿಡುತ್ತಾರೆ ಎಂಬ ಭಾವನೆ ಇದೆ. ಪ್ರತಿಪಕ್ಷಗಳ ಒಕ್ಕೂಟವು ತಮ್ಮೊಂದಿಗೆ ನಿಂತಿದೆ ಎಂಬುದನ್ನು ರಾಜ್ಯದ ಜನತೆಗೆ ಮನವರಿಕೆ ಮಾಡಿಕೊಡುತ್ತೇವೆ. ಕಣಿವೆ ರಾಜ್ಯದ ಘಟನೆಗೆ ಪ್ರಧಾನಿ ಅವರನ್ನು ಹೊಣೆಗಾರರನ್ನಾಗಿ ಮಾಡಲು ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ದಿನದವರೆಗೂ ನಮ್ಮ ಒಕ್ಕೂಟ ಹೋರಾಟ ನಡೆಸಲಿದೆ” ಎಂದು ರಾಜ್ಯದ ಜನತೆಗೆ ಭರವಸೆ ನೀಡಿದರು.

“ನಮ್ಮ ನಿಯೋಗವು ಮೇ 4 ರಂದು ಮಣಿಪುರದಲ್ಲಿ ಜನಸಮೂಹದಿಂದ ಬೆತ್ತಲೆ ಮೆರವಣಿಗೆ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಇಬ್ಬರು ಮಹಿಳೆಯರಲ್ಲಿ ಒಬ್ಬ ಸಂತ್ರಸ್ತೆ ಹಾಗೂ ಆಕೆಯ ತಾಯಿಯನ್ನು ಭೇಟಿ ಮಾಡಿದವು. ಸಂತ್ರಸ್ತೆಯ ತಾಯಿ ಗಲಭೆಯಲ್ಲಿ ಕೊಲ್ಲಲ್ಪಟ್ಟ ತನ್ನ ಪುತ್ರ ಹಾಗೂ ಪತಿಯ ಮೃತದೇಹಗಳನ್ನು ನೋಡಲು ಅವಕಾಶ ಕಲ್ಪಿಸುವಂತೆ ನಮಗೆ ಮನವಿ ಮಾಡಿದರು” ಎಂದು ಸುಶ್ಮಿತಾ ದೇವ್ ತಿಳಿಸಿದ್ದಾರೆ.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...