ಗಾಳಿಯಲ್ಲಿ ಕಣ್ಮರೆಯಾದ ಚಾರ್‌ ಸೋ ಪಾರ್: ಸೀತಾರಾಂ ಯೆಚೂರಿ ಲೇವಡಿ

Date:

ಪ್ರಧಾನಿ ನರೇಂದ್ರ ಮೋದಿ ಅವರ ಚಾರ್‌ ಸೋ ಪಾರ್‌ (400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು) ಎಂಬ ಆಕ್ರಮಣಕಾರಿ ಕೂಗು ಗಾಳಿಯಲ್ಲಿ ಕಣ್ಮರೆಯಾಗಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಲೇವಡಿ ಮಾಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯುವಲ್ಲಿ ವಿಫಲವಾಗಿದ್ದು, ಮಿತ್ರ ಪಕ್ಷಗಳಿಂದ ಸಹಾಯದಿಂದ ಮಾತ್ರ ಸರ್ಕಾರ ರಚಿಸಲು ಸಾಧ್ಯವಾಗುತ್ತದೆ. ನಿರಂತರವಾಗಿ ಚಾರ್‌ ಸೋ ಪಾರ್ (400ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲುವು) ಎಂದಿದ್ದ ಪ್ರಧಾನಿ ಮೋದಿ ಅವರಿಗೆ ಮುಖಭಂಗವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, “ಬಿಜೆಪಿಗೆ ಮತ್ತು ವಿಶೇಷವಾಗಿ ನರೇಂದ್ರ ಮೋದಿಗೆ ಆದ ಭಾರೀ ಹಿನ್ನಡೆಯಾಗಿದೆ. ಅವರ 400 ಪಾರ್‌ಗಳ ಆಕ್ರಮಣಕಾರಿ ಕೂಗು ಗಾಳಿಯಲ್ಲಿ ಕಣ್ಮರೆಯಾಗಿದೆ, ಅವರು ಬಹುಮತವನ್ನೂ ಗಳಿಸಲಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನು ಓದಿದ್ದೀರಾ?  ಬಹುಮತಕ್ಕೆ ‘ಇಂಡಿಯಾ’ ಒಕ್ಕೂಟ ಕಸರತ್ತು; ನಾನಾ ಪಕ್ಷಗಳೊಂದಿಗೆ ಮಾತುಕತೆ

“ತಮ್ಮ ದೈನಂದಿನ ಸಮಸ್ಯೆಗಳು ಪರಿಹಾರವಾಗಲು ಪ್ರಜಾಪ್ರಭುತ್ವದ ಪರವಾಗಿ ಮತ ಚಲಾಯಿಸಿದ ಜನತೆಯ ಸಾಧನೆ ಇದಾಗಿದೆ. ಬಿಜೆಪಿಗೆ ಜನಾದೇಶವಿಲ್ಲ, ಎನ್‌ಡಿಎಗೆ ನೀಡಲಾಗಿದೆ. ಇಂಡಿಯಾ ಒಕ್ಕೂಟಕ್ಕೆ ಹೆಚ್ಚಿನ ಮತ ಹಂಚಿಕೆಯಾಗಲಿದೆ ಎಂದು ಜನರಿಗೆ ನಂಬಿಕೆ ಇರಲಿಲ್ಲ, ಆದರೆ ಅದು ಈಗ ಸಾಧ್ಯವಾಗಿದೆ” ಎಂದು ಹೇಳಿದರು.

ಇಂಡಿಯಾ ಒಕ್ಕೂಟದ ಮುಂದಿನ ನಡೆಯ ಬಗ್ಗೆ ಪ್ರಶ್ನಿಸಿದಾಗ, “ಇಂಡಿಯಾ ಒಕ್ಕೂಟ ಸಭೆಯನ್ನು ಸೇರಿದ ಬಳಿಕವೇ ಅಂತಿಮ ನಿರ್ಧಾರಕ್ಕೆ ಬರಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...