400 ಸ್ಥಾನ ಗೆಲ್ಲುತ್ತೇವೆ ಅಂತಿದ್ದಾರೆ 420 ನಂಬರ್‌ನವರು: ನಟ ಪ್ರಕಾಶ್ ರಾಜ್

Date:

420 ಕೆಲಸ ಮಾಡುತ್ತಿರುವವರು ಮುಂದಿನ ಚುನಾವಣೆಯಲ್ಲಿ 400 ಸ್ಥಾನ ಗೆಲ್ಲುವ ಮಾತನಾಡುತ್ತಿದ್ದಾರೆ. ಯಾವುದೇ ಪಕ್ಷ ಹೀಗೆ ಮಾತನಾಡುವುದು ಅವರ ದುರಹಂಕಾರದ ಪ್ರತಿಬಿಂಬವಾಗಿರುತ್ತದೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರು 400ಕ್ಕೂ ಹೆಚ್ಚು ಸ್ಥಾನ ಗೆದ್ದು, ಎನ್‌ಡಿಎ ಮತ್ತೆ ಅಧಿಕಾರಿಕ್ಕೆ ಬರುತ್ತದೆ ಎನ್ನುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಯಾವುದೇ ಪಕ್ಷವು 400 ಅಥವಾ ಅದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಅವಕಾಶ ತೀರಾ ಕಡಿಮೆ. ಯಾರು ಗೆಲ್ಲಬೇಕು ಎಂಬುದನ್ನು ಮತದಾರರು ನಿರ್ಧಾರಿಸುತ್ತಾರೆ. ಬಿಜೆಪಿಯ ಹೇಳಿಕೆಗೆ ತಲೆಬುಡವಿಲ್ಲ” ಎಂದು ಹೇಳಿದ್ದಾರೆ.

“ಚುನಾವಣೆಯಲ್ಲಿ ಮತದಾರರು ಮತ ನೀಡಿದರೆ, ಮಾತ್ರ ಸೀಟು ಗೆಲ್ಲಲು ಸಾಧ್ಯ. ಹೀಗಿರುವಾಗಿ, ಯಾವುದೇ ಪಕ್ಷ ಚುನಾವಣೆಗೂ ಮೊದಲೇ ಇಷ್ಟು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಕೊಂಡರೆ, ಅದನ್ನು ದುರಹಂಕಾರ ಎನ್ನುತ್ತಾರೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...