ಮಣಿಪುರ | ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧ: ಬಿಜೆಪಿ ಶಾಸಕ

Date:

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಾಗಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್‌ಚೋಮ್ ರಾಧೇಶ್ಯಾಮ್ ಸಿಂಗ್ ಬುಧವಾರ ಹೇಳಿದ್ದಾರೆ. ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾದ ನಂತರ ಈ ಹೇಳಿಕೆಯನ್ನು ನೀಡಿದ್ದಾರೆ.

ಬಿಜೆಪಿಯ ಎಂಟು ಶಾಸಕರು, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಅವರ ರಾಷ್ಟ್ರೀಯ ಪೀಪಲ್ಸ್ ಪಾರ್ಟಿ(ಎನ್‌ಪಿಪಿ)ಯ ಒಬ್ಬರು ಮತ್ತು ಮತ್ತೊಬ್ಬರು ಸ್ವತಂತ್ರ ಶಾಸಕರು ಸೇರಿ ಒಟ್ಟು ಮಣಿಪುರದ ಹತ್ತು ಶಾಸಕರು ಬುಧವಾರ ಇಂಫಾಲ್‌ನ ರಾಜಭವನದಲ್ಲಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿ ಮಾಡಿದರು. ರಾಜ್ಯದಲ್ಲಿ ಸರ್ಕಾರವನ್ನು ರಚಿಸಬೇಕು ಎಂದು ಶಾಸಕರು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಮಣಿಪುರದಲ್ಲಿ ಮತ್ತೆ ಉದ್ವಿಗ್ನತೆ: ಪ್ರತಿಭಟನಾಕಾರರು, ಭದ್ರತಾ ಪಡೆಯ ನಡುವೆ ಘರ್ಷಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವತಂತ್ರ ಶಾಸಕ ಸಪಮ್ ನಿಶಿಕಾಂತ ಸಿಂಗ್, “ಜನಪ್ರಿಯ ಸರ್ಕಾರ ರಚನೆ ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಮಣಿಪುರದ ಹಿತದೃಷ್ಟಿಯಿಂದ ಎಲ್ಲಾ ಎನ್‌ಡಿಎ ಶಾಸಕರು ಜನಪ್ರಿಯ ಸರ್ಕಾರ ಸ್ಥಾಪನೆಗೆ ಮುಂದಾಗಿದ್ದಾರೆ. ನಮಗೆ ಸಾರ್ವಜನಿಕರ ಬೆಂಬಲ ಬೇಕು. ತ್ವರಿತ ಮತ್ತು ಸುಗಮ ಸರ್ಕಾರ ರಚನೆಗೆ ಸ್ವಲ್ಪ ಕಷ್ಟವಾಗುತ್ತದೆ” ಎಂದು ಹೇಳಿದರು.

“ನಾವು ರಾಜ್ಯಪಾಲರಿಗೆ 22 ಮಂದಿ ಸಹಿ ಹಾಕಿದ ಪತ್ರ ನೀಡಿದ್ದೇವೆ. ನಾವು ಪ್ರಧಾನಿಗೂ ಅದೇ ಪತ್ರ ನೀಡಿದ್ದೇವೆ. ಕೆಲವರು ಇಲ್ಲಿಲ್ಲ ಆದರೆ ಎಲ್ಲರೂ ಒಟ್ಟಾಗಿದ್ದಾರೆ. ಎಲ್ಲರೂ ಜನಪ್ರಿಯ ಸರ್ಕಾರವನ್ನು ಬಯಸುತ್ತಾರೆ. ಇದು ಜನರ ಕಲ್ಯಾಣಕ್ಕಾಗಿ ಮುಖ್ಯ” ಎಂದರು.

ನಿಯೋಗದ ಭಾಗವಾಗಿದ್ದ ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ್ ಸಿಂಗ್, 44 ಶಾಸಕರು ಹೊಸ ಸರ್ಕಾರ ರಚಿಸಲು ಸಿದ್ಧರಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮಣಿಪುರ ವಿಧಾನಸಭೆಯು 60 ಸ್ಥಾನಗಳನ್ನು ಹೊಂದಿದೆ.

2023ರ ಮೇ 23ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದ್ದು, 250ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 60 ಸಾವಿರಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಈ ಹಿಂಸಾಚಾರವನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದರು.

ಇದನ್ನು ಓದಿದ್ದೀರಾ? ಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಟೀಕೆ

ಇದಾದ ಬಳಿಕ ಫೆಬ್ರವರಿ 13ರಂದು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. 2027ರವರೆಗೆ ಅಧಿಕಾರಾವಧಿಯನ್ನು ಹೊಂದಿರುವ ರಾಜ್ಯ ವಿಧಾನಸಭೆಯನ್ನು ಅಮಾನತಿನಲ್ಲಿ ಇರಿಸಲಾಗಿದೆ. ಆದರೆ ಇಂದಿಗೂ ಹಿಂಸಾಚಾರ ಸಂಪೂರ್ಣವಾಗಿ ನಿಂತಿಲ್ಲ. ಅಲ್ಲಲ್ಲಿ ಹಿಂಸಾಚಾರಗಳು ನಡೆಯುತ್ತಲೇ ಇವೆ.

ಮಣಿಪುರದ ಶಿರುಯಿ ಲಿಲಿ ಉತ್ಸವದ ವರದಿ ಮಾಡಲು ಉಖ್ರುಲ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಾಧ್ಯಮ ತಂಡವನ್ನು ಮಾರ್ಗಮಧ್ಯೆ ಭದ್ರತಾ ಸಿಬ್ಬಂದಿಗಳು ತಡೆದು ವಾಹನದಲ್ಲಿದ್ದ ‘ಮಣಿಪುರ ರಾಜ್ಯ ಸಾರಿಗೆ’ ಎಂಬ ಫಲಕವನ್ನು ಮರೆಮಾಡಲು ಸೂಚಿಸಿದ್ದಾರೆ ಎನ್ನಲಾಗಿದೆ. ಈ ಘಟನೆ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲಲ್ಲಿ ಪ್ರತಿಭಟನೆ ನಡೆಯುತ್ತಿದೆ. ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಿಸುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಕ್ಷಮೆಯಾಚಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...