ತೆಲಂಗಾಣ | 4,568 ಕೋಟಿ ರೂ. ಒಡೆಯ ಕೆ.ವಿಶ್ವೇಶ್ವರ ರೆಡ್ಡಿ ರಾಜ್ಯದ ಅತ್ಯಂತ ಶ್ರೀಮಂತ ಬಿಜೆಪಿ ಅಭ್ಯರ್ಥಿ

Date:

ತೆಲಂಗಾಣದ ಲೋಕಸಭಾ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಚೆವೆಳ್ಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೊಂಡಾ ವಿಶ್ವೇಶ್ವರ ರೆಡ್ಡಿ ಅವರು ರಾಜ್ಯದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ.

‌ಕೆವಿಆರ್ ಎಂದೇ ಜನಪ್ರಿಯರಾಗಿರುವ ಕೊಂಡಾ ವಿಶ್ವೇಶ್ವರ ರೆಡ್ಡಿ ಅವರು ಚೆವೆಳ್ಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ತಮ್ಮ ಕುಟುಂಬದ ಬಳಿ 4,568 ಕೋಟಿ ರೂ. ಮೌಲ್ಯದ ಆಸ್ತಿ ಇರುವುದಾಗಿ ಘೋಷಿಸಿಕೊಂಡಿದ್ದಾರೆ.

ಚೆವೆಳ್ಳ ಲೋಕಸಭಾ ಕ್ಷೇತ್ರದಲ್ಲಿ ಸ್ಫರ್ಧಿಸುತ್ತಿರುವ ಮೂರು ಪಕ್ಷಗಳ ಅಭ್ಯರ್ಥಿಗಳು ಅತ್ಯಂತ ಶ್ರೀಮಂತ ಅಭ್ಯರ್ಥಿಗಳಾಗಿರುವುದು ವಿಶೇಷ. ಎರಡನೇ ಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಂಜಿತ್ ರೆಡ್ಡಿ ಅವರ ಘೋಷಿತ ಕೌಟುಂಬಿಕ ಆಸ್ತಿ 435.33 ಕೋಟಿ ರೂ. ಹಾಗೂ ಮೂರನೇ ಸ್ಥಾನದಲ್ಲಿರುವವರು ಬಿಆರ್‌ಎಸ್ ಅಭ್ಯರ್ಥಿ ಕಸನಿ ಗ್ಯಾನೇಶ್ವರ್ ಅವರ ಕುಟುಂಬದ ಸ್ಥಿರ-ಚರಾಸ್ತಿಗಳ ಒಟ್ಟು ಮೌಲ್ಯ 228.46 ಕೋಟಿ ಒಡೆಯರಾಗಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆವಿಆರ್ ಚುನಾವಣಾ ಅಫಿಡವಿಟ್‌ನಲ್ಲಿ‌ 4,568 ಕೋಟಿ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ಪತ್ನಿ ಸಂಗೀತಾ ರೆಡ್ಡಿ 3,208 ಕೋಟಿ ಹಾಗೂ ಪುತ್ರ ವಿರಾಜ್ ಮಾಧವ ರೆಡ್ಡಿ ಬಳಿ 108 ಕೋಟಿ ಮೌಲ್ಯದ ಆಸ್ತಿ ಇರುವುದಾಗಿ ಪ್ರಮಾಣ ಪತ್ರದಲ್ಲಿ ಹೇಳಿದ್ದಾರೆ.

ವಿಶ್ವೇಶ್ವರ ರೆಡ್ಡಿ ದಂಪತಿಯು ಅಪೋಲೋ ಹಾಸ್ಪಿಟಲ್ ಎಂಟರ್‌ಪ್ರೈಸಸ್ ಲಿಮಿಟೆಡ್‌ ಸೇರಿದಂತೆ ವಿವಿಧ ಕಂಪನಿಗಳ ಷೇರುಗಳು ಹೊಂದಿದ್ದಾರೆ. 10.4 ಕೋಟಿ ಮೌಲ್ಯದ ವಜ್ರ ಹಾಗೂ ಚಿನ್ನಾಭರಣ ಹೊಂದಿದ್ದಾರೆ.

ಹೈದರಾಬಾದ್ ಕ್ಷೇತ್ರದಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಕಣದಲ್ಲಿರುವ ಬಿಜೆಪಿ ಅಭ್ಯರ್ಥಿ ಕೆ.ಮಾಧವಿ ಲತಾ ಅವರು 218.38 ಕೋಟಿ ಕೌಟುಂಬಿಕ ಮೌಲ್ಯ ಆಸ್ತಿ ಘೋಷಿಸಿಕೊಂಡಿದ್ದಾರೆ.

ಖಮ್ಮಮ್ ಕ್ಷೇತ್ರದ ಬಿಎರ್‌ಎಸ್ ಅಭ್ಯರ್ಥಿ ನಮಾ ನಾಗೇಶ್ವರ ರಾವ್ 155.89 ಕೋಟಿ ಮೌಲ್ಯದ ಆಸ್ತಿ ಘೋಷಿಸಿದ್ದರೆ, ಜಹೀರಾಬಾದ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಬಿ.ಪಾಟೀಲ್ 151.68 ಕೋಟಿಯ ಆಸ್ತಿ ಘೋಷಿಸಿಕೊಂಡಿದ್ದಾರೆ. ಜಹೀರಾಬಾದ್‌ನಲ್ಲಿ ಬಿಆರ್‌ಎಸ್ ಟಿಕೆಟ್‌ನಿಂದ ಸ್ಫರ್ಧಿಸುತ್ತಿರುವ ಕಮಿ ಮಹೇಶ್ ಅವರ ಕೌಟುಂಬಿಕ ಆಸ್ತಿಯ ಮೌಲ್ಯ 145.33 ಕೋಟಿ ಹಾಘೂ ನಿಜಾಮಬಾದ್ ಹಾಲಿ ಬಿಜೆಪಿ ಸಂಸದ ಡಿ.ಅರವಿಂದ್ ಅವರು 109.89 ಕೋಟಿ ಆಸ್ತಿ ಘೋಷಿಸಿದ್ದಾರೆ.

ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ, 30ಕ್ಕೂ ಹೆಚ್ಚು ಸ್ಫರ್ಧಿಗಳ ಆಸ್ತಿ 10 ಕೋಟಿಗೂ ಅಧಿಕವಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸೂರತ್ ಸಂಸದನ ಅವಿರೋಧ ಆಯ್ಕೆಯ ಈ ಪ್ರಹಸನ ಅಪಾಯಕಾರಿ

ತೆಲಂಗಾಣದ 17 ಲೋಕಸಭಾ ಕ್ಷೇತ್ರಗಳಿಗಾಗಿ ಮೇ 13ರಂದು ಒಂದು ಹಂತದಲ್ಲಿ ಚುನಾವಣೆ ನಡೆಯಲಿದೆ. ಏ.25 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು, ನಾಮಪತ್ರ ಹಿಂತೆಗೆದುಕೊಳ್ಳಲು ಏ.29ರವರೆಗೆ ಸಮಯ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...