ಮತಗಟ್ಟೆಯ ಬಳಿ ಐವರು ಕಾಂಗ್ರೆಸ್ ಬೆಂಬಲಿತ ಜಿಲ್ಲಾ ಪಂಚಾಯತ್ ಸದಸ್ಯರ ಅಪಹರಣ

Date:

ಜಿಲ್ಲಾ ಪಂಚಾಯತ್ ಅಧ್ಯಕ್ಷರ ಚುನಾವಣೆಯ ಸಂದರ್ಭದಲ್ಲಿ ಹೈಕೋರ್ಟ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಮತಗಟ್ಟೆಯ ಹೊರಗಿನಿಂದ ಐವರು ಕಾಂಗ್ರೆಸ್ ಬೆಂಬಲಿತ ಚುನಾಯಿತ ಜಿಲ್ಲಾ ಪಂಚಾಯತ್ ಸದಸ್ಯರನ್ನು ಹಾಡಹಗಲೇ ಅಪಹರಿಸಿದ ಘಟನೆ ಉತ್ತರಾಖಂಡದ ನೈನಿತಾಲ್ ಬೆಟ್ಟದ ಪಟ್ಟಣದಲ್ಲಿ ನಡೆದಿದೆ.

ಸಾರ್ವಜನಿಕರು ನೋಡನೋಡುತ್ತಿದ್ದಂತೆ ಅಪಹರಣ ನಡೆದಿದ್ದು, ಸದ್ಯ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ನಡುವೆ, “ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪಂಚಾಯತ್ ಸದಸ್ಯರನ್ನು ಅಪಹರಿಸುವ ಮೂಲಕ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ” ಎಂದು ವಿರೋಧ ಪಕ್ಷ ಕಾಂಗ್ರೆಸ್ ನಾಯಕ ಯಶ್‌ಪಾಲ್ ಆರ್ಯ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಮನಗರ | ಸಾಲ ತೀರಿಸಲು ನೆರೆಮನೆಯ ಬಾಲಕಿಯ ಅಪಹರಣಕ್ಕೆ ಯತ್ನ: ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಯುವಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಯಶ್‌ಪಾಲ್ ಆರ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಈ ವಿಷಯವನ್ನು ತುರ್ತಾಗಿ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಜಿ ನರೇಂದ್ರ ಮತ್ತು ನ್ಯಾಯಮೂರ್ತಿ ಅಲೋಕ್ ಮೆಹ್ರಾ ಅವರ ವಿಭಾಗೀಯ ಪೀಠವು ತನಿಖೆಗಾಗಿ ಕಟ್ಟುನಿಟ್ಟಿನ ಆದೇಶಗಳನ್ನು ನೀಡಿತು. ಹಾಗೆಯೇ ಎಲ್ಲಾ ಹತ್ತು ಅಭ್ಯರ್ಥಿಗಳನ್ನು ಭದ್ರತೆಯಲ್ಲಿ ಮತಗಟ್ಟೆಗೆ ಕರೆದೊಯ್ಯುವಂತೆ ನಿರ್ದೇಶಿಸಿದೆ.

ಹಾಗೆಯೇ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಅವರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಅಪಹರಿಸಿದ ಸದಸ್ಯರನ್ನು ಪತ್ತೆಹಚ್ಚಿ ಸಂಜೆ 4:30ರೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯವು ತಿಳಿಸಿದೆ. ಆದರೆ ಸದಸ್ಯರು ಪತ್ತೆಯಾಗಿಲ್ಲ.

ಅಪಹರಣಕ್ಕೊಳಗಾದ ಸದಸ್ಯರ ಕುಟುಂಬಗಳು ಪೊಲೀಸರು ತಮ್ಮ ದೂರುಗಳನ್ನು ದಾಖಲಿಸಲು ನಿರಾಕರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು, “ಈ ರಾಜ್ಯದಲ್ಲಿ ಏನು ನಡೆಯುತ್ತಿದೆ? ಪೊಲೀಸರು ಕೆಲವರೊಂದಿಗೆ ಶಾಮೀಲಾಗಿದ್ದಾರೆ ಮತ್ತು ಎಸ್‌ಎಸ್‌ಪಿ ಕೂಡ ಭಾಗಿಯಾಗಿದ್ದಾರೆ ಎಂಬ ಗಂಭೀರ ಅನುಮಾನ ನಮಗಿದೆ” ಎಂದು ಟೀಕಿಸಿದರು.

ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು, ಆಗಸ್ಟ್ 18ರಂದು ವಿಚಾರಣೆ ಮುಂದುವರಿಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...