ಮಾಶಾಸನಕ್ಕಾಗಿ 5 ಕಿ.ಮೀ. ತೆವಳಿಕೊಂಡು ಬಂದ ಅಜ್ಜಿ; ಸರ್ಕಾರದ ಕ್ಷಮತೆ ಪ್ರಶ್ನಿಸಿದೆ: ಕುಮಾರಸ್ವಾಮಿ ಕಿಡಿ

Date:

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರ್ಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಕಾಂಗ್ರೆಸ್‌ ಸರ್ಕಾರದವರು ಗ್ಯಾರಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ” ಎಂದಿದ್ದಾರೆ.

“ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂದು ಪಕೋಡ, ಇಂದು ಶ್ರೀರಾಮ ಭಜನೆ; ನಿರುದ್ಯೋಗ ನಿವಾರಣೆಯಾಯಿತೇ?

“ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು, ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ. ವೃದ್ದಾಪ್ಯ ವೇತನ ವಿಕಲಚೇತನರ ಮಾಶಾಸನವನ್ನು ಏರಿಕೆ ಮಾಡಿದ್ದೆ. ಕಷ್ಟದಲ್ಲಿರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯ. ಗೃಹಲಕ್ಷ್ಮಿಯರಿಗೆ ₹2000 ಕೊಡುತ್ತೀರಿ ಸರಿ, ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ಅಜ್ಜಿ1

“ರಾಜ್ಯ ಸರಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ; ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಯಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಮತ್ತು ನಿಯಮಿತವಾಗಿ ಬಿಡುಗಡೆ ಮಾಡಬೇಕು. ಮಾಶಾಸನಕ್ಕಾಗಿ ಈ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರಕಾರ ಎಲ್ಲ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು” ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...