ಗೊಂದಲಗಳಿಗೆ ತೆರೆ ಎಳೆದ ಸಿಎಂ: ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಧನ ಮಂಜೂರು

Date:

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ ಮಡಿದ ಕರ್ನಾಟಕದ ವೀರ ಯೋಧ ಪ್ರಾಂಜಲ್‌ ಅವರ ಕುಟುಂಬಕ್ಕೆ ರೂ. 50,00,000 (ಐವತ್ತು ಲಕ್ಷ) ಪರಿಹಾರ ಧನವನ್ನು ಸಿಎಂ ಸಿದ್ದರಾಮಯ್ಯ ಮಂಜೂರು ಮಾಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ (ಟ್ವಿಟ್ಟರ್)‌ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. “ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರ ಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ. ಪರಿಹಾರ ಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ” ಎಂದು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ ಕರ್ನಾಟಕದ ವೀರ ಯೋಧ ಪ್ರಾಂಜಲ್‌ ಮೃತಪಟ್ಟಿದ್ದರು. ಇವರ ಮನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಜಿಗಣಿ ಸಮೀಪದ ನಿಸರ್ಗ ಬಡಾವಣೆಯಲ್ಲಿದೆ. ಯೋಧನ ಮನೆಯ ಆವರಣದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಸಂಸ್ಕಾರ ನಡೆದಿತ್ತು.

ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಲ್ಲಿಗೆ ಭೇಟಿ ನೀಡಿ, ಹುತಾತ್ಮ ಯೋಧನ ಅಂತಿಮ ದರ್ಶನ ಪಡೆದಿದ್ದರು. ಸಂಬಂಧಿಕರು ಹಾಗೂ ಸಹಸ್ರಾರು ಸಾರ್ವಜನಿಕರ ಉಪಸ್ಥಿತಿಯಲ್ಲಿ ಅಂತ್ಯಸಂಸ್ಕಾರ ನಡೆದಿತ್ತು.

ಗೊಂದಲಕ್ಕೆ ತೆರೆ
ಹುತಾತ್ಮ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಹೆಸರನ್ನು ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರೆತ ಹಾಗೆ ಮಾತನಾಡಿದ್ದರು. ಅಲ್ಲದೇ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಕುಟುಂಬಕ್ಕೆ ಪರಿಹಾರದ ಕಾಲಮಿತಿ ಕುರಿತು ಪತ್ರಕರ್ತರು ಕೇಳಿದಾಗ, ಪರಿಹಾರವನ್ನು ಯಾರು, ಯಾವಾಗ ಘೋಷಿಸಿದರು ಎಂದು ಸಿದ್ದರಾಮಯ್ಯ ಸುದ್ದಿಗಾರರನ್ನು ಕೇಳಿದ್ದರು.

ಈ ವಿಡಿಯೋವನ್ನು ಬಳಸಿಕೊಂಡಿದ್ದ ಬಿಜೆಪಿ ಐಟಿ ಸೆಲ್, ಹುತಾತ್ಮ ವೀರ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಕೊಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಮತಿಭ್ರಮಣೆಗೊಂಡು ಯಾರು ಹೇಳಿದ್ದು ಎಂದು ಕೇಳುತ್ತಿದ್ದಾರೆ. ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಅವರು ಹಿಂದೆಂದೂ ‌ನಡೆದುಕೊಂಡಿಲ್ಲ ಅದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಲೇ ಇದ್ದಾರೆ. ಇದೀಗ ಯೋಧನ ಸಾವಿನ ವಿಚಾರದಲ್ಲಿ ತಮ್ಮ ಹೀನ ಮನಸ್ಥಿತಿಯನ್ನು ತೋರಿಸಿದ್ದಾರೆ. ಎಟಿಎಂ ಸರ್ಕಾರ ಮೂರನ್ನೂ ಬಿಟ್ಟುವರು ಊರಿಗೆ ದೊಡ್ಡವರು ಎನ್ನುವ ಸಂದೇಶ ಸಾರುತ್ತಿರುವುದು ನಿಜಕ್ಕೂ ದುರಂತ’ ಎಂದು ಟ್ವೀಟ್ ಮಾಡಿತ್ತು.

ಇದೀಗ ಮಂಜೂರಾತಿ ಆದೇಶ ಪ್ರತಿಯನ್ನೇ ಸಿಎಂ ಟ್ವೀಟ್ ಮಾಡುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...