ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ ಮಡಿದ ಕರ್ನಾಟಕದ ವೀರ ಯೋಧ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 (ಐವತ್ತು ಲಕ್ಷ) ಪರಿಹಾರ ಧನವನ್ನು ಸಿಎಂ ಸಿದ್ದರಾಮಯ್ಯ ಮಂಜೂರು ಮಾಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. “ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರ ಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ. ಪರಿಹಾರ ಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ” ಎಂದು ಬರೆದಿದ್ದಾರೆ.
ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ… pic.twitter.com/HgJQ9FlqXo
— CM of Karnataka (@CMofKarnataka) December 4, 2023
ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ ಕರ್ನಾಟಕದ ವೀರ ಯೋಧ ಪ್ರಾಂಜಲ್ ಮೃತಪಟ್ಟಿದ್ದರು. ಇವರ ಮನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಜಿಗಣಿ ಸಮೀಪದ ನಿಸರ್ಗ ಬಡಾವಣೆಯಲ್ಲಿದೆ. ಯೋಧನ ಮನೆಯ ಆವರಣದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಸಂಸ್ಕಾರ ನಡೆದಿತ್ತು.
ಕಾಶ್ಮೀರದಲ್ಲಿ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದೆ.
ಪ್ರಾಂಜಲ್ ಅವರ ದೇಶಸೇವೆ, ಸಮರ್ಪಣೆ ಚಿರಸ್ಮರಣೀಯ. ಮನೆಗೆ ಆಧಾರವಾಗಿದ್ದ ಪ್ರಾಂಜಲ್ರನ್ನು ಕಳೆದುಕೊಂಡು ಕುಟುಂಬಸ್ಥರು ಸಂಕಷ್ಟದಲ್ಲಿದ್ದಾರೆ, ಅವರ ಕಷ್ಟಕ್ಕೆ ಹೆಗಲಾಗುವ… pic.twitter.com/MlNWvLgBba
— CM of Karnataka (@CMofKarnataka) November 24, 2023
ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಲ್ಲಿಗೆ ಭೇಟಿ ನೀಡಿ, ಹುತಾತ್ಮ ಯೋಧನ ಅಂತಿಮ ದರ್ಶನ ಪಡೆದಿದ್ದರು. ಸಂಬಂಧಿಕರು ಹಾಗೂ ಸಹಸ್ರಾರು ಸಾರ್ವಜನಿಕರ ಉಪಸ್ಥಿತಿಯಲ್ಲಿ ಅಂತ್ಯಸಂಸ್ಕಾರ ನಡೆದಿತ್ತು.
ಗೊಂದಲಕ್ಕೆ ತೆರೆ
ಹುತಾತ್ಮ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಹೆಸರನ್ನು ಸಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರೆತ ಹಾಗೆ ಮಾತನಾಡಿದ್ದರು. ಅಲ್ಲದೇ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಕುಟುಂಬಕ್ಕೆ ಪರಿಹಾರದ ಕಾಲಮಿತಿ ಕುರಿತು ಪತ್ರಕರ್ತರು ಕೇಳಿದಾಗ, ಪರಿಹಾರವನ್ನು ಯಾರು, ಯಾವಾಗ ಘೋಷಿಸಿದರು ಎಂದು ಸಿದ್ದರಾಮಯ್ಯ ಸುದ್ದಿಗಾರರನ್ನು ಕೇಳಿದ್ದರು.
ಹುತಾತ್ಮರಾದ ವೀರ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಕೊಡುವುದಾಗಿ ಹೇಳಿದ್ದ ಮುಖ್ಯಮಂತ್ರಿ @siddaramaiah ಅವರು ಇದೀಗ ಮತಿಭ್ರಮಣೆಗೊಂಡು ಯಾರು ಹೇಳಿದ್ದು ಎಂದು ಕೇಳುತ್ತಿದ್ದಾರೆ.
ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಅವರು ಹಿಂದೆಂದೂ ನಡೆದುಕೊಂಡಿಲ್ಲ ಅದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಲೇ ಇದ್ದಾರೆ ಇದೀಗ… pic.twitter.com/5eELIio3D4
— BJP Karnataka (@BJP4Karnataka) December 4, 2023
ಈ ವಿಡಿಯೋವನ್ನು ಬಳಸಿಕೊಂಡಿದ್ದ ಬಿಜೆಪಿ ಐಟಿ ಸೆಲ್, ಹುತಾತ್ಮ ವೀರ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಕೊಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಮತಿಭ್ರಮಣೆಗೊಂಡು ಯಾರು ಹೇಳಿದ್ದು ಎಂದು ಕೇಳುತ್ತಿದ್ದಾರೆ. ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಅವರು ಹಿಂದೆಂದೂ ನಡೆದುಕೊಂಡಿಲ್ಲ ಅದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಲೇ ಇದ್ದಾರೆ. ಇದೀಗ ಯೋಧನ ಸಾವಿನ ವಿಚಾರದಲ್ಲಿ ತಮ್ಮ ಹೀನ ಮನಸ್ಥಿತಿಯನ್ನು ತೋರಿಸಿದ್ದಾರೆ. ಎಟಿಎಂ ಸರ್ಕಾರ ಮೂರನ್ನೂ ಬಿಟ್ಟುವರು ಊರಿಗೆ ದೊಡ್ಡವರು ಎನ್ನುವ ಸಂದೇಶ ಸಾರುತ್ತಿರುವುದು ನಿಜಕ್ಕೂ ದುರಂತ’ ಎಂದು ಟ್ವೀಟ್ ಮಾಡಿತ್ತು.
ಇದೀಗ ಮಂಜೂರಾತಿ ಆದೇಶ ಪ್ರತಿಯನ್ನೇ ಸಿಎಂ ಟ್ವೀಟ್ ಮಾಡುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.





